ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣ: ಕೆ ಜೆ ಜಾರ್ಜ್​ ಪಾತ್ರವಿಲ್ಲ ಎಂದ ಸುಪ್ರೀಂ ಕೋರ್ಟ್

Date:

Advertisements

ಡಿವೈಎಸ್‌ಪಿ ಎಂ. ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ. ಜಾರ್ಜ್‌ ಅವರ ಪಾತ್ರವಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಈಗ ಸುಪ್ರೀಂಕೋರ್ಟ್​ ಎತ್ತಿಹಿಡಿದಿದೆ.

ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಜೆ. ಜಾರ್ಜ್ ಅವರ ಪಾತ್ರವಿಲ್ಲ ಎಂದು ತನಿಖಾ ವರದಿಯಲ್ಲಿ ಹೇಳಿದ್ದವು. ಬಳಿಕ ಹೈಕೋರ್ಟ್​ ಸಹ ಜಾರ್ಜ್​ ಅವರ ಪಾತ್ರವಿಲ್ಲ ಎಂದು ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಮೃತ ಗಣಪತಿಯವರ ಸಹೋದರಿ ಸಬೀತಾ, ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇಂದು (ಆಗಸ್ಟ್ 27) ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ನೇತೃತ್ವದ ದ್ವಿಸದಸ್ಯ ಪೀಠ, ಹೈಕೋರ್ಟ್​ನ ಆದೇಶವನ್ನು ಎತ್ತಿಹಿಡಿದಿದೆ. ಇದರೊಂದಿಗೆ ಸಬೀತಾ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ. ಈ ಮೂಲಕ ಸಚಿವ ಕೆಜೆ ಜಾರ್ಜ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ತನಿಖೆ ನಡೆಸಿದ್ದ ಸಿಬಿಐ / ಸಿಐಡಿ ತನಿಖಾ ತಂಡಗಳು ಬಿ ರಿಪೋರ್ಟ್ ಸಲ್ಲಿಸಿದ್ದವು. ದಿವಂಗತ ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಜೆ. ಜಾರ್ಜ್ ಅವರ ಪಾತ್ರವಿಲ್ಲ ಎಂದು ತನಿಖಾ ವರದಿಯಲ್ಲಿ ಹೇಳಿದ್ದವು. ಈ ಸಂಬಂಧ ಕೆ.ಜೆ. ಜಾರ್ಜ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ಪ್ರತಿವಾದಿಗಳ ದೂರನ್ನು ತಳ್ಳಿಹಾಕಿತ್ತು. ಇದನ್ನು ಪ್ರಶ್ನೆ ಮಾಡಿ ಗಣಮತಿ ಅವರ ಸಹೋದರಿ ಸಬೀತಾ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ, ಸುಪ್ರೀಂ ಕೋರ್ಟ್​ ಸಹ ಸಬೀತಾ ಅವರ ಅರ್ಜಿಯನ್ನು ವಜಾ ಮಾಡಿದೆ.

Advertisements

ಈ ಸುದ್ದಿ ಓದಿದ್ದೀರಾ? ಜಾರ್ಖಂಡ್‌ ಮಾಜಿ ಸಿಎಂ ಚಂಪೈ ಸೊರೇನ್ ಆ. 30ರಂದು ಬಿಜೆಪಿ ಸೇರ್ಪಡೆ

ಮೂಲತಃ ಕೊಡಗಿನವರಾದ ಗಣಪತಿ ಮಂಗಳೂರು ಐಜಿಪಿ ಕಚೇರಿಯಲ್ಲಿ ಡಿವೈಎಸ್ಪಿ ಆಗಿದ್ದರು. 2016 ಜುಲೈ 7 ರಂದು ಮಡಿಕೇರಿಯ ವಿನಾಯಕ ಲಾಡ್ಜ್‌ನ ಕೊಠಡಿ ಸಂಖ್ಯೆ 315ರಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಶರಣಾಗುವ ಮುನ್ನ ಕೊಡಗಿನ ಖಾಸಗಿ ಸುದ್ದಿ ವಾಹಿನಿಗೆ ಸಂದರ್ಶನ ನೀಡಿದ್ದ ಗಣಪತಿ ಅವರು, ಅಂದಿನ ಗೃಹ ಸಚಿವ ಕೆ.ಜೆ. ಜಾರ್ಜ್‌ ಹಾಗೂ ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೊಹಂತಿ ಹಾಗೂ ಎ.ಎಂ. ಪ್ರಸಾದ್ ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ನನ್ನ ಸಾವಿಗೆ ಈ ಮೂವರೇ ಕಾರಣ ಎಂದು ಅವರು ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X