ಜನರ ಬಳಿಗೆ ಸರ್ಕಾರ: ಪ್ರಜಾಸೇವಾ ಅಭಿಯಾನದಲ್ಲಿ ಅಹವಾಲು ಸ್ವೀಕಾರ

Date:

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಸರ್ಕಾರವೇ ಜನರ ಬಳಿಗೆ ಬಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಹೇಳಿದರು.

- Advertisement -

ಕೊಡಗು ಜಿಲ್ಲೆ, ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಹೋಬಳಿಯ ಕೊಂಡಂಗೇರಿ ಶಾದಿ ಮಹಲ್ ಹಾಗೂ ಕುಶಾಲನಗರ ತಾಲ್ಲೂಕಿನ ಕೂಡಿಗೆ ಡಯಟ್ ಮೈದಾನದಲ್ಲಿ ಶನಿವಾರ ನಡೆದ ಪ್ರಜಾಸೇವಾ ಅಭಿಯಾನದಲ್ಲಿ ಪಾಲ್ಗೊಂಡು ಅವರು ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳಾ ಮೀಸಲಾತಿ ಮರೆಯಲ್ಲಿ ಕ್ಷೇತ್ರ ಮರುವಿಂಗಡಣೆ: ವಿರೋಧ ಪಕ್ಷಗಳ...

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ ಕ್ಷೇತ್ರ ಪುನರ್ವಿಂಗಡಣೆಯೊಂದಿಗೆ ತಳುಕು ಹಾಕಿರುವ ಮೋದಿ ಸರ್ಕಾರದ ನಡೆ, ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂಸದೀಯ ಇತಿಹಾಸದಲ್ಲಿಯೇ ಒಂದು ಅಪರೂಪದ ರಾಜಕೀಯ ಹಾಗೂ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ....

ಖಾಸಗಿ ವೈದ್ಯರ ಎಡವಟ್ಟು; ಬಡ ಕುಟುಂಬದ ಆಧಾರ ಸ್ತಂಭ...

ಆತ ಕೂಲಿ‌ ಕೆಲಸ ಮಾಡಿಕೊಂಡು ಹಂಗೊ ಹೆಂಗೋ ಜೀವನ‌ ನಡೆಸಿಕೊಂಡು ಬಂದಿದ್ದ ಚಿರ ಯೌವ್ವನದ ಯುವಕ. ತನ್ನ ಮನೆ ಜವಾಬ್ದಾರಿಯನ್ನು ತನ್ನದೇ ಹೆಗಲ ಮೇಲೆರಿಸಿ ಕಷ್ಟಪಟ್ಟು ದುಡಿದು ತನ್ನ ಇಬ್ಬರು ಸಹೋದರಿಯರಿಗೆ ಮದುವೆಯನ್ನೂ...

ಭಾಷಣಗಳಲ್ಲಿ ಆಗಾಗ ಎಡವಟ್ಟು, ಸುಳ್ಳು-ಅತಿಶಯೋಕ್ತಿಯೇ ಮೇಲುಗೈ: ನವಭಾರತದ ‘ಪಪ್ಪು’...

ಒಂದು ಕಾಲದಲ್ಲಿ ರಾಹುಲ್ ಗಾಂಧಿ ಅವರನ್ನು ಅಪಹಾಸ್ಯ ಮಾಡಲು ಬಳಸುತ್ತಿದ್ದ 'ಪಪ್ಪು' ಎಂಬ ಪದವೇ ಇದೀಗ ಮೋದಿ ಅವರತ್ತ ತಿರುಗಿದೆ. 1987-88ರ ಡಿಜಿಟಲ್ ಕ್ಯಾಮೆರಾ-ಇಮೇಲ್ ಕಥೆಯಿಂದ ಹಿಡಿದು ಐತಿಹಾಸಿಕ ಪ್ರಮಾದಗಳವರೆಗೆ, ಮೋದಿ ಅವರ...

ಕೊಂಡಂಗೇರಿಯಲ್ಲಿ 63ಕ್ಕೂ ಹೆಚ್ಚು ಹಾಗೂ ಕೂಡಿಗೆಯಲ್ಲಿ 46ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾದವು. ಕೆಲವು ಅರ್ಜಿಗಳನ್ನು ಸ್ಥಳದಲ್ಲೇ ಇತ್ಯರ್ಥಪಡಿಸಲಾಯಿತು.

ಕುಡಿಯುವ ನೀರು, ರಸ್ತೆ, ಸೇತುವೆ ನಿರ್ಮಾಣ, ವಸತಿ ಸೌಲಭ್ಯ ಹಾಗೂ ವನ್ಯಜೀವಿಗಳ ಹಾವಳಿ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಮನವಿ ಸಲ್ಲಿಸಿದರು. ಹುಲಿ ದಾಳಿಯ ಭೀತಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಹುಲಿಯನ್ನು ಸೆರೆಹಿಡಿದು ಜನರ ಆತಂಕ ನಿವಾರಿಸುವಂತೆ ಕೊಂಡಂಗೇರಿಯಲ್ಲಿ ಒತ್ತಾಯಿಸಲಾಯಿತು.

ಈ ವಿಶೇಷ ವರದಿ ಓದಿದ್ದೀರಾ? ಬರಗಾಲ | ಮಳೆಯ ಕೊರತೆಗೆ ಬತ್ತಿದ ಕಾಡಿನ ಕೆರೆಗಳು: ನೀರಿಗಾಗಿ ಪರದಾಡುವ ವನ್ಯಜೀವಿಗಳು

ಅರ್ಜಿಗಳು ಸಕಾಲ ವ್ಯಾಪ್ತಿಗೆ ಬರುವುದರಿಂದ ಅಧಿಕಾರಿಗಳು ವಿಳಂಬ ಮಾಡದೆ ತ್ವರಿತವಾಗಿ ಇತ್ಯರ್ಥಪಡಿಸಬೇಕು. ಅರ್ಜಿ ವಿಲೇವಾರಿಯಲ್ಲಿ ನಿರ್ಲಕ್ಷ್ಯ ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಕೆಲಸ ವಿಳಂಬವಾಗುತ್ತಿದೆ ಎಂಬ ದೂರುಗಳು ಬರಬಾರದು. ಅಧಿಕಾರಿಗಳು ಜಡತ್ವ ಬಿಟ್ಟು ಜವಾಬ್ದಾರಿಯಿಂದ ಜನಸೇವೆ ಮಾಡಬೇಕು ಎಂದು ಸಚಿವರು ಸೂಚಿಸಿದರು.

ಈ ತನಿಖಾ ವರದಿ ಓದಿದ್ದೀರಾ? ತನಿಖಾ ವರದಿ | ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರ ಬದಲಾವಣೆ ಸುತ್ತ ರಾಜಕೀಯ: ಆದೇಶವಿಲ್ಲದೆ ನೇಮಕದ ಸುದ್ದಿ ಹರಡಿದ್ದೇಕೆ?

ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಶಾಸಕರು ಹಾಗೂ ಸಚಿವರ ನೇತೃತ್ವದಲ್ಲಿ ಪ್ರಜಾಸೇವಾ ಅಭಿಯಾನ ನಡೆಯುತ್ತಿದ್ದು, ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸುವುದು ಇದರ ಉದ್ದೇಶವಾಗಿದೆ. ರೈತರಿಗಾಗಿ ನೇಗಿಲ ಯೋಗಿ ಹಾಗೂ ರೈತ ಚೈತನ್ಯ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದ್ದು, ಕೃಷಿ ಉತ್ಪನ್ನಗಳ ರಫ್ತಿಗೆ ಮುಂದಾಗುವ ರೈತ ಗುಂಪುಗಳಿಗೆ ಸರ್ಕಾರ ಪ್ರೋತ್ಸಾಹ ಮತ್ತು ನೆರವು ನೀಡಲಿದೆ ಎಂದು ತಿಳಿಸಿದರು.

ಈ ವಿಶೇಷ ಲೇಖನ ಓದಿದ್ದೀರಾ? ಆರ್‌ಟಿಇ ಶಿಕ್ಷಣ ಹಕ್ಕೋ, ಶಾಲೆಗಳಲ್ಲಿನ ಸಾಮಾಜಿಕ ಅಂತರಕ್ಕೆ ಕಾರಣವೋ?

ಶಾಸಕ ಎ.ಎಸ್.ಪೊನ್ನಣ್ಣ, ಶಾಸಕ ಡಾ.ಮಂತರ್ ಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷರಾದ ಜಾನ್ಸನ್, ವಿ.ಪಿ.ಶಶಿಧರ್, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಜಿಲ್ಲಾ ಪಂಚಾಯಿತಿ ಸಿಇಒ ದಿನೇಶ್ ಕುಮಾರ್ ಮೀನಾ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಸನಗೌಡ ದದ್ದಲ್‌ಗೆ ಕೆಕೆಆರ್‌ಡಿಬಿ ಅಧ್ಯಕ್ಷ ಪಟ್ಟ, ಬಾದರ್ಲಿಗೆ ಉಗ್ರಾಣ ನಿಗಮದ ಹೊಣೆ

ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರಿಗೆ ಕಲ್ಯಾಣ ಕರ್ನಾಟಕ...

ಉಡುಪಿ | ಗ್ಯಾರಂಟಿ ಸಮಾವೇಶಕ್ಕೆ ಗ್ರಾಪಂ ಹಣ ಬಳಸುವುದು ಕಾನೂನುಬಾಹಿರ: ಸುನೀಲ್ ಕುಮಾರ್

ನ.24ರಂದು ಉಡುಪಿಯಲ್ಲಿ ನಡೆಯಲಿರುವ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ಗ್ರಾಮ...

ಉಡುಪಿ | ನ.24ರಂದು ಪಂಚ ಗ್ಯಾರಂಟಿ ಫಲಾನುಭವಿಗಳ ಸಂಭ್ರಮೋತ್ಸವ

ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದ ಸಂಭ್ರಮ...

ಉಡುಪಿ | ಪತ್ರಿಕಾ ರಂಗದಲ್ಲಿ ನೈಜ ಸತ್ಯ ಹೇಳುವವರ ಅಗತ್ಯವಿದೆ: ಡಾ. ರಾಘವ ನಂಬಿಯಾರ್

ವ್ಯಾವಹಾರಿಕ ಸತ್ಯ ಹೇಳುವವರ ನಡುವೆ ನೈಜ ಸತ್ಯವನ್ನು ಪ್ರತಿಪಾದಿಸುವ ಪತ್ರಕರ್ತರ ಅಗತ್ಯವಿದೆ....