ಸಹಕಾರ ಸಂಘಗಳ ಸ್ವಾಯತ್ತ ಬೆಳವಣಿಗೆಗೆ ಸರ್ಕಾರ ಅವಕಾಶ ಕಲ್ಪಿಸಲಿ: ಎ.ಎಸ್.ಪೊನ್ನಣ್ಣ

Date:

ಕೊಡಗು ಸಹಕಾರ ಸಂಘ ಸಂಸ್ಥೆಗಳು ಸ್ವಾಯತ್ತವಾಗಿ ಬೆಳೆಯಲು ಸರ್ಕಾರ ಹೆಚ್ಚಿನ ಅವಕಾಶ ಕಲ್ಪಿಸಬೇಕು. ಸಂಘಗಳು ಪ್ರಾಮಾಣಿಕತೆ ಮತ್ತು ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಿದರೆ ಗ್ರಾಮೀಣ ಭಾಗದ ರೈತರಿಗೆ ಹೆಚ್ಚಿನ ಸಾಲ ಸೌಲಭ್ಯ ಒದಗಿಸಲು ಸಾಧ್ಯ ಎಂದು ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.

- Advertisement -

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹಾಗೂ ಸಹಕಾರ ಇಲಾಖೆ ಸಂಯುಕ್ತ ಆಶ್ರಯದಲ್ಲಿ 73ನೇ ಸಹಕಾರ ಸಪ್ತಾಹದ ಸಮಾರೋಪದ ಅಂಗವಾಗಿ ಶುಕ್ರವಾರ ನಡೆದ ಪರಿಸರ ಸಂರಕ್ಷಣೆ, ಲಿಂಗ ಸಮಾನತೆ ಮತ್ತು ವಿಶ್ವಶಾಂತಿಗಾಗಿ ಸಹಕಾರ ಸಂಸ್ಥೆಗಳ ದಿನಾಚರಣೆ ಹಾಗೂ ಶ್ರೇಷ್ಠ ಸಹಕಾರಿಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಡಲಿಗೆ ಲಕ್ಷಾಂತರ ಬಂಡವಾಳ, ಗಡಿಯಲ್ಲಿ ದಂಡ: ಕೇಳುವವರಿಲ್ಲ ಕರಾವಳಿ...

ಸಮುದ್ರದ ಅಲೆಗಳ ನಡುವೆ ಜೀವದ ಹಂಗು ತೊರೆದು, ಲಕ್ಷಾಂತರ ರೂಪಾಯಿ ಬಂಡವಾಳ ಹೂಡಿ ಮೀನುಗಾರಿಕೆಗೆ ತೆರಳುವ ಮೀನುಗಾರರ ಬದುಕು ಈಗ ಹಲವು ಸವಾಲುಗಳನ್ನು ಎದುರಿಸುತ್ತಿದೆ. ಒಂದು ಕಡೆ ಸಮುದ್ರದ ಅಪಾಯ, ಮತ್ತೊಂದು ಕಡೆ...

ರಾಜಕೀಯದ ಅಂಧಾನುಸರಣೆ ಮತ್ತು ಮನೋವಿಜ್ಞಾನ — ಮೋದಿ ಆಡಳಿತ...

ರಾಜಕೀಯ ನಾಯಕನ ನಿರ್ಧಾರವನ್ನು ಪ್ರಶ್ನಿಸಿದರೆ ತನ್ನದೇ ಗುಂಪಿನವರು ವಿರೋಧಿಸಬಹುದು, ಅಪಹಾಸ್ಯ ಮಾಡಬಹುದು ಅಥವಾ ತನ್ನ ರಾಜಕೀಯ ನಿಷ್ಠೆ, ದೇಶಪ್ರೇಮ ಹಾಗೂ ಧರ್ಮನಿಷ್ಠೆಯ ಬಗ್ಗೆ ಅನುಮಾನ ವ್ಯಕ್ತಪಡಿಸಬಹುದು ಎಂಬ ಭಯದಿಂದ ಕೆಲವರು ಮೌನವಾಗಿರಬಹುದು. ಇನ್ನೂ...

ವೀರಪ್ಪ ಮೊಯ್ಲಿ ಹೇಳಿಕೆ- ಕಾಂಗ್ರೆಸ್‌ನ ರಾಜಕೀಯ ನಿರ್ಧಾರಗಳ ನೆರಳಲ್ಲಿ...

ಮೊಯ್ಲಿ ಅವರ ಹೇಳಿಕೆಯ ಮತ್ತೊಂದು ಪ್ರಮುಖ ಭಾಗ ಪಕ್ಷದ ಆಂತರಿಕ ಸುಧಾರಣೆಗೆ ಸಂಬಂಧಿಸಿದೆ. ಸೋನಿಯಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದ ಅವಧಿಯಲ್ಲಿ ಪಕ್ಷವನ್ನು ಭವಿಷ್ಯದ ರಾಜಕೀಯ ಸವಾಲುಗಳಿಗೆ ಸಿದ್ಧಗೊಳಿಸಲು ಮಹತ್ವದ ಬದಲಾವಣೆಗಳನ್ನು ತರಲು ಬಯಸಿದ್ದರು;...

ಕೊಡಗು ಜಿಲ್ಲೆಯ ಸಹಕಾರ ಸಂಘಗಳು ಮಾದರಿಯಾಗಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ. ಹಿರಿಯರು ಹಾಕಿಕೊಟ್ಟ ಭದ್ರ ಬುನಾದಿಯನ್ನು ಉಳಿಸಿಕೊಂಡು ಸಹಕಾರ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸಬೇಕು. ಸಹಕಾರ ಸಂಘಗಳ ಮೂಲಕ ರೈತರು ಹಾಗೂ ಗ್ರಾಮೀಣ ಜನರಿಗೆ ನೆರವು ದೊರೆಯಬೇಕು. ರೈತರ ಮನೆ ಬಾಗಿಲಿಗೆ ಸಾಲ ಸೌಲಭ್ಯ ತಲುಪಿಸುವ ಕೆಲಸವಾಗಬೇಕು ಎಂದರು.

ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ ಮಾತನಾಡಿ, ಜಿಲ್ಲೆಯ ಡಿಸಿಸಿ ಬ್ಯಾಂಕ್ 22 ಕೋಟಿ ರೂ. ಲಾಭ ಗಳಿಸಿದ್ದು, ಸದಸ್ಯ ಸಹಕಾರ ಸಂಘಗಳಿಗೆ ಶೇ.20ರಷ್ಟು ಲಾಭಾಂಶ ನೀಡಲಾಗುತ್ತಿದೆ. ಸಾಲ ಮರುಪಾವತಿ ಉತ್ತಮವಾಗಿರುವುದರಿಂದ ಬ್ಯಾಂಕ್ ಪ್ರಗತಿಯತ್ತ ಸಾಗುತ್ತಿದೆ ಎಂದರು. ಸಹಕಾರ ಸಂಘಗಳು ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಿ, ಅನಗತ್ಯ ಹಸ್ತಕ್ಷೇಪ ಮಾಡಬಾರದು ಎಂದು ಅಭಿಪ್ರಾಯಪಟ್ಟರು.

ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ರಾಬಿನ್ ದೇವಯ್ಯ ಮಾತನಾಡಿ, ಹಿರಿಯರು ಬೆಳೆಸಿದ ಸಹಕಾರ ಕ್ಷೇತ್ರವನ್ನು ಉಳಿಸಿ ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು. ಯೂನಿಯನ್‌ನ ಎಂ.ಎಂ.ಶ್ಯಾಮಲ ಮಾತನಾಡಿ, ಸಹಕಾರ ಕ್ಷೇತ್ರದಲ್ಲಿ ಪರಿಸರ ಸಂರಕ್ಷಣೆ, ಲಿಂಗ ಸಮಾನತೆ ಮತ್ತು ವಿಶ್ವಶಾಂತಿಯ ಮಹತ್ವ ವಿವರಿಸಿದರು.

ಈ ತನಿಖಾ ವರದಿ ಓದಿದ್ದೀರಾ? ತನಿಖಾ ವರದಿ | ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರ ಬದಲಾವಣೆ ಸುತ್ತ ರಾಜಕೀಯ: ಆದೇಶವಿಲ್ಲದೆ ನೇಮಕದ ಸುದ್ದಿ ಹರಡಿದ್ದೇಕೆ?

ಸಹಕಾರ ರತ್ನ ಪ್ರಶಸ್ತಿಯನ್ನು ಹಂಡ್ಲಿ ಗ್ರಾಮದ ಹಿರಿಯ ಸಹಕಾರಿ ಎಸ್.ಕೆ.ವೀರಪ್ಪ ಅವರಿಗೆ ಪ್ರದಾನ ಮಾಡಲಾಯಿತು. ಶ್ರೇಷ್ಠ ಸಹಕಾರಿ ಪ್ರಶಸ್ತಿಯನ್ನು ನಾಪೋಕ್ಲುವಿನ ಕೊಂಡ್ಯೋಳಂಡ ಪಿ.ಮುದ್ದಯ್ಯ ಹಾಗೂ ಪೊನ್ನಂಪೇಟೆಯ ಮುದ್ದಿಯಡ ಎ.ಸೋಮಯ್ಯ ಅವರಿಗೆ ನೀಡಲಾಯಿತು. ಶ್ರೇಷ್ಠ ಮಹಿಳಾ ಸಹಕಾರಿ ಪ್ರಶಸ್ತಿಯನ್ನು ಲೋಕೇಶ್ವರಿ ಗೋಪಾಲ್ ಅವರಿಗೆ ಪ್ರದಾನ ಮಾಡಿ ಗೌರವಿಸಲಾಯಿತು.

ಈ ವಿಶೇಷ ಲೇಖನ ಓದಿದ್ದೀರಾ? ಆರ್‌ಟಿಇ ಶಿಕ್ಷಣ ಹಕ್ಕೋ, ಶಾಲೆಗಳಲ್ಲಿನ ಸಾಮಾಜಿಕ ಅಂತರಕ್ಕೆ ಕಾರಣವೋ?

ಕಾರ್ಯಕ್ರಮದಲ್ಲಿ ಸಹಕಾರ ಯೂನಿಯನ್ ಹಾಗೂ ಡಿಸಿಸಿ ಬ್ಯಾಂಕ್‌ನ ಪದಾಧಿಕಾರಿಗಳು, ನಿರ್ದೇಶಕರು, ಸಹಕಾರ ಇಲಾಖೆಯ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ಬೆಳಕಿನ ಹಬ್ಬದ ಸಂಭ್ರಮದೊಂದಿಗೆ ಸಂವಿಧಾನದ ಮೌಲ್ಯಗಳ ಜಾಗೃತಿ

ಬೆಳಕಿನ ಹಬ್ಬದ ಸಂಭ್ರಮದ ನಡುವೆಯೇ ಸಂವಿಧಾನದ ಆಶಯ, ಸಮಾನತೆ, ಸ್ವಾತಂತ್ರ್ಯ ಹಾಗೂ...

ವಿಜಯಪುರ |ಜಾತಿ–ಧರ್ಮದ ಭೇದ ಮರೆತು ಸೌಹಾರ್ದದ ದೀಪ ಬೆಳಗಿಸಿದ ಸರ್ವಧರ್ಮೀಯರು

ಜಾತಿ, ಧರ್ಮಗಳ ಎಲ್ಲ ಭೇದಭಾವಗಳನ್ನು ಮರೆತು ಪರಸ್ಪರ ಪ್ರೀತಿ, ವಿಶ್ವಾಸ ಹಾಗೂ...

ಯುವಜನತೆ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಲಿ: ಸಂತೋಷ್ ಹೆಗ್ಡೆ

ಭ್ರಷ್ಟಾಚಾರದಿಂದ ದೂರವಿದ್ದು, ಯುವಜನತೆ ಮಾನವೀಯತೆ ಹಾಗೂ ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು...

ರಾಯಚೂರು | ಶೌಚಾಲಯ ನಿರ್ಮಾಣದ ಜತೆಗೆ ನಿರ್ವಹಣೆಗೂ ಆದ್ಯತೆ ಅಗತ್ಯ: ಸಿಡ್ನಿ ನೋವು

ಶೌಚಾಲಯ ನಿರ್ಮಿಸುವುದಷ್ಟೇ ಸ್ವಚ್ಛತೆಯ ಗುರಿಯಾಗಬಾರದು. ಅವು ವರ್ಷಪೂರ್ತಿ ಬಳಕೆಗೆ ಯೋಗ್ಯವಾಗಿರುವುದು, ಸಮರ್ಪಕ...