ಕೊಡಗು | ಆದಿವಾಸಿಗಳಿಗೆ ಗೃಹಭಾಗ್ಯ ಯೋಜನೆ: ಸೆ.19ರೊಳಗೆ ಅರ್ಜಿ ಸಲ್ಲಿಕೆಗೆ ಅವಕಾಶ

Date:

2025-26ನೇ ಸಾಲಿನ ಆಯವ್ಯಯ ಘೋಷಣೆಯ ಕಂಡಿಕೆ 198ರ ಅನ್ವಯ ಅರಣ್ಯ ಹಾಗೂ ಅರಣ್ಯದಂಚಿನ ಹಾಡಿಗಳಲ್ಲಿ ವಾಸಿಸುತ್ತಿರುವ ವಿವಿಧ ಪರಿಶಿಷ್ಟ ಪಂಗಡದ ಜನರಿಗೆ ‘ಮುಖ್ಯಮಂತ್ರಿಗಳ ಆದಿವಾಸಿ ಗೃಹಭಾಗ್ಯ ಯೋಜನೆ’ಯಡಿ ಮನೆ ನಿರ್ಮಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅರ್ಹ ಫಲಾನುಭವಿಗಳು ಸೆಪ್ಟೆಂಬರ್ 19ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

- Advertisement -

ಸೋಲಿಗ, ಹಸಲರು, ಗೌಡಲು, ಸಿದ್ದಿ, ಕುಡಿಯ, ಮಲೈಕುಡಿ, ಕಾಡುಕುರುಬ, ಇರುಳಿಗ, ಬೆಟ್ಟಕುರುಬ, ಯರವ ಹಾಗೂ ಪಣಿಯ ಸೇರಿದಂತೆ ವಿವಿಧ ಬುಡಕಟ್ಟು ಜನಾಂಗದ ವಸತಿ ರಹಿತ ಕುಟುಂಬಗಳಿಗೆ ಈ ಯೋಜನೆಯಡಿ ವಸತಿ ಸೌಲಭ್ಯ ಒದಗಿಸುವ ಉದ್ದೇಶ ಹೊಂದಲಾಗಿದೆ. ಅರ್ಜಿದಾರರು ಪರಿಶಿಷ್ಟ ಪಂಗಡಕ್ಕೆ ಸೇರಿದ ಮಹಿಳಾ ಫಲಾನುಭವಿಯಾಗಿದ್ದು, ವಿವಾಹಿತ ಅಥವಾ ಏಕ ಮಹಿಳಾ ಒಡೆತನದ ಗೃಹಿಣಿಯಾಗಿರಬೇಕು. ಮಾಜಿ ಯೋಧರು, ವಿಶೇಷಚೇತನರು ಹಾಗೂ ಹಿರಿಯ ನಾಗರಿಕರು ಇರುವ ಸಂದರ್ಭದಲ್ಲಿ ಪುರುಷರೂ ಅರ್ಹರಾಗಿರುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ...

ಇಸ್ರೇಲ್ ದೇಶದ ಸಂಸತ್ತನ್ನು ‘ನೆಸೆಟ್’ (Knesset) ಎಂದು ಕರೆಯಲಾಗುತ್ತದೆ. ಇಲ್ಲಿನ ಚುನಾವಣಾ ವ್ಯವಸ್ಥೆಯು ಜಗತ್ತಿನ ಇತರ ದೇಶಗಳಿಗಿಂತ ಭಿನ್ನವಾಗಿದ್ದು, 'ಪ್ರಾತಿನಿಧಿಕ ವ್ಯವಸ್ಥೆ' (Proportional representation) ಅಡಿಯಲ್ಲಿ ನಡೆಯುತ್ತದೆ. ಅಂದರೆ, ಭಾರತದಂತೆ ಇಲ್ಲಿನ ಮತದಾರರು...

ನಿವೇಶನ ಹೊಂದಿದ್ದರೂ ವಸತಿ ರಹಿತರಾಗಿ ಗುಡಿಸಲು ಅಥವಾ ತಾತ್ಕಾಲಿಕ ಶೆಡ್‌ಗಳಲ್ಲಿ ವಾಸಿಸುತ್ತಿರುವವರು, ಶಿಥಿಲಗೊಂಡ ಮನೆ ಅಥವಾ ಕಚ್ಚಾ ಮನೆಗಳಲ್ಲಿ ವಾಸಿಸುತ್ತಿರುವ ಕುಟುಂಬಗಳು ಯೋಜನೆಯ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಆದರೆ ಅರ್ಜಿದಾರರು ಅಥವಾ ಕುಟುಂಬದ ಯಾವುದೇ ಸದಸ್ಯರ ಹೆಸರಿನಲ್ಲಿ ರಾಜ್ಯದ ಯಾವುದೇ ಭಾಗದಲ್ಲೂ ಸ್ವಂತ ಪಕ್ಕಾ ಮನೆ ಇರಬಾರದು ಎಂಬುದು ಪ್ರಮುಖ ಅರ್ಹತಾ ಷರತ್ತಾಗಿದೆ.

ಅರ್ಜಿದಾರರು ಜಾತಿ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ಬಿ.ಪಿ.ಎಲ್. ಪಡಿತರ ಚೀಟಿ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಹಾಗೂ ಆಧಾರ್ ಸಂಖ್ಯೆಗೆ ಲಿಂಕ್ ಹೊಂದಿರುವ ಮೊಬೈಲ್/ಸಂಪರ್ಕ ಸಂಖ್ಯೆಯನ್ನು ಹೊಂದಿರಬೇಕು. ಅರ್ಜಿದಾರರು ಸ್ವಂತ ನಿವೇಶನ ಹೊಂದಿದ್ದಲ್ಲಿ, ಆ ನಿವೇಶನಕ್ಕೆ ಸಂಬಂಧಿಸಿದ ಖಾತೆ ಹೊಂದಿರಬೇಕು. ಅಲ್ಲದೆ, ಪಾರಂಪರಿಕ ಅರಣ್ಯ ಹಕ್ಕುಗಳ ಕಾಯ್ದೆಯನ್ವಯ ಜಿಲ್ಲಾ ಸಮಿತಿಯಿಂದ ನೀಡಲಾಗಿರುವ ಹಕ್ಕುಪತ್ರವನ್ನು ಹೊಂದಿರುವುದು ಅಗತ್ಯವಾಗಿದೆ.

ಕುಟುಂಬದ ಹೆಸರಿನಲ್ಲಿ ಅರಣ್ಯ ಹಕ್ಕುಪತ್ರವಿದ್ದು, ಕಾನೂನಾತ್ಮಕವಾಗಿ ತಂದೆಯಿಂದ ಮಕ್ಕಳಿಗೆ ಹಕ್ಕು ವರ್ಗಾವಣೆಯಾಗುವ ಸಂದರ್ಭಗಳನ್ನು ಅವಲೋಕಿಸಿ, ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಥವಾ ಕಾರ್ಯದರ್ಶಿಗಳು ವಿವಿಧ ವಸತಿ ಯೋಜನೆಗಳಲ್ಲಿ ಆಯ್ಕೆಯಾದ ಫಲಾನುಭವಿಗಳು ಹೊಂದಿರುವ ಸಾಗುವಳಿ/ಕೃಷಿ ಭೂಮಿ ಅಥವಾ ಅರಣ್ಯ ಹಕ್ಕಿನ ಜಮೀನಿನಲ್ಲಿ ಮನೆ ನಿರ್ಮಾಣಕ್ಕೆ ಅವಕಾಶ ಕಲ್ಪಿಸಬಹುದಾಗಿದೆ.

ಮನೆ ನಿರ್ಮಾಣಕ್ಕಾಗಿ ಗರಿಷ್ಠ 2 ಗುಂಟೆ ಮೀರದಂತೆ ಜಮೀನಿನ ಒಂದು ಬದಿಯಲ್ಲಿನ ನಿರ್ದಿಷ್ಟ ಭಾಗವನ್ನು, ‘ಸರ್ಕಾರದ ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕಾಗಿ ಮಾತ್ರ’ ಎಂಬ ಉದ್ದೇಶಕ್ಕೆ ಅನುಮತಿ ನೀಡಬೇಕು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಭಾಗೀರಥಿ ತಿಳಿಸಿದ್ದಾರೆ.

ಅರ್ಹ ಫಲಾನುಭವಿಗಳು ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ, ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು.

ಈ ವಿಶೇಷ ಸುದ್ದಿ ಓದಿದ್ದೀರಾ? ಮಾತೃಭಾಷೆಯೇ ಜ್ಞಾನಭಾಷೆ: ಶಿಕ್ಷಣ ಯಾರ ಹಕ್ಕು?

  • ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ವಿರಾಜಪೇಟೆ ತಾಲ್ಲೂಕು, ಪೊನ್ನಂಪೇಟೆ – 9632465161
  • ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ – 9482894676
  • ಸಹಾಯಕ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ – 7259552655

ಅರಣ್ಯ ಹಾಗೂ ಅರಣ್ಯದಂಚಿನ ಹಾಡಿಗಳಲ್ಲಿ ಮೂಲಭೂತ ವಸತಿ ಸೌಲಭ್ಯದಿಂದ ವಂಚಿತರಾಗಿರುವ ಆದಿವಾಸಿ ಕುಟುಂಬಗಳು ಯೋಜನೆಯ ಅರ್ಹತೆಗಳನ್ನು ಪರಿಶೀಲಿಸಿಕೊಂಡು, ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 19ರೊಳಗೆ ಅರ್ಜಿ ಸಲ್ಲಿಸುವಂತೆ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಜ್ಞಾನೇಶ್ ಕುಮಾರ್ ಅಣಕು ಶವಯಾತ್ರೆ ನಡೆಸಿ, ಪ್ರತಿಕೃತಿ ದಹಿಸಿ ಆಕ್ರೋಶ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ ಹಾಗೂ ಮುಖ್ಯ...

ಕಲಬುರಗಿ | ನಕಲಿ ಎಸ್‌ಟಿ ಪ್ರಮಾಣ ಪತ್ರಗಳಿಗೆ ಕಡಿವಾಣ, ಮೀಸಲಾತಿ ರಕ್ಷಣೆಗೆ ಆಗ್ರಹ

ನಕಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಜಾತಿ ಪ್ರಮಾಣಪತ್ರಗಳ ಹಾವಳಿಗೆ ಕಡಿವಾಣ ಹಾಕಬೇಕು...

ಕಲಬುರಗಿ | ಸಿಮೆಂಟ್ ಕಂಪನಿಯಲ್ಲಿ ಡೀಸೆಲ್ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

ಚಿಂಚೋಳಿ ತಾಲೂಕಿನ ಮಿರಿಯಾಣ ಪೊಲೀಸ್ ಠಾಣೆ ವ್ಯಾಪ್ತಿಯ ಸಿಮೆಂಟ್ ಕಂಪನಿಯ ಆವರಣದಲ್ಲಿ...

ಕಾನೂನುಬಾಹಿರವಾಗಿ ವಾಹನ ತಡೆದರೆ 10 ವರ್ಷ ಜೈಲು ಶಿಕ್ಷೆ: ಪೊಲೀಸ್ ಆಯುಕ್ತ ಎಚ್ಚರಿಕೆ

ಗೋಹತ್ಯೆ ಹಾಗೂ ಕಾನೂನುಬಾಹಿರ ಜಾನುವಾರು ಸಾಗಾಟವನ್ನು ತಡೆಯಲು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ...