ಕೊಡಗು | ಗಾಜಿನ ಸೇತುವೆ, ಹೋಂಸ್ಟೇ ಹಾಗೂ ರೆಸಾರ್ಟ್‌ಗಳ ಪರಿಶೀಲನೆ: ನಿಯಮ ಪಾಲನೆಗೆ ಜಿಲ್ಲಾಧಿಕಾರಿ ಸೂಚನೆ

Date:

ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಅಬ್ಬಿ ಜಲಪಾತ-ಮಾಂದಲ್‌ಪಟ್ಟಿ ಮಾರ್ಗದ ಜಂಕ್ಷನ್‌ ಹಾಗೂ ಉಡೋತ್‌ಮೊಟ್ಟೆ ಬಳಿಯ ಗಾಜಿನ ಸೇತುವೆಗಳಿಗೆ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರವಾಸೋದ್ಯಮ ಚಟುವಟಿಕೆಗಳಲ್ಲಿ ಸುರಕ್ಷತೆ ಮತ್ತು ನಿಯಮ ಪಾಲನೆಗೆ ಆದ್ಯತೆ ನೀಡುವಂತೆ ಸಂಬಂಧಪಟ್ಟವರಿಗೆ ಸೂಚಿಸಿದರು.

- Advertisement -

ಮೊದಲಿಗೆ ಅಬ್ಬಿ ಜಲಪಾತ ಮತ್ತು ಮಾಂದಲ್‌ಪಟ್ಟಿಗೆ ತೆರಳುವ ಮಾರ್ಗದ ಜಂಕ್ಷನ್‌ ಬಳಿಯ ಗಾಜಿನ ಸೇತುವೆ ವೀಕ್ಷಿಸಿದ ಜಿಲ್ಲಾಧಿಕಾರಿಗಳು, ನಿರ್ಮಾಣಕ್ಕೆ ಅಗತ್ಯ ಅನುಮತಿಗಳನ್ನು ಪಡೆದಿರುವ ಬಗ್ಗೆ, ಎಂಜಿನಿಯರ್‌ಗಳ ದೃಢೀಕರಣ ಪತ್ರ, ಪ್ರವಾಸಿಗರ ವಾಹನ ನಿಲುಗಡೆ ವ್ಯವಸ್ಥೆ, ವೀಕ್ಷಣೆಗೆ ನಿಗದಿಪಡಿಸಿರುವ ಅವಧಿ ಹಾಗೂ ಶುಲ್ಕದ ವಿವರಗಳನ್ನು ಪರಿಶೀಲಿಸಿದರು. ಪ್ರವಾಸೋದ್ಯಮ ಇಲಾಖೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶನ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಬಳಿಕ ಉಡೋತ್‌ಮೊಟ್ಟೆ ಬಳಿಯ ಗಾಜಿನ ಸೇತುವೆಗೆ ಭೇಟಿ ನೀಡಿದ ಅವರು, ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಸೂಚಿಸಿದರು. ವಾಹನ ನಿಲುಗಡೆಗೆ ಸಮರ್ಪಕ ಸ್ಥಳಾವಕಾಶ ಇಲ್ಲದಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಮಳೆಗಾಲದ ಹಿನ್ನೆಲೆಯಲ್ಲಿ ಈ ಹಿಂದೆ ಎರಡೂ ಗಾಜಿನ ಸೇತುವೆಗಳ ವೀಕ್ಷಣೆಗೆ ವಿಧಿಸಲಾಗಿದ್ದ ನಿರ್ಬಂಧ ಕುರಿತು ಮರುಪರಿಶೀಲನೆ ನಡೆಸಲಾಗುವುದು. ಪ್ರವಾಸಿಗರು ಹಾಗೂ ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಅಬ್ಬಿ ಜಲಪಾತ-ಮಾಂದಲ್‌ಪಟ್ಟಿ ಜಂಕ್ಷನ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಜೀಪುಗಳ ಕುರಿತು ಮಾಹಿತಿ ಪಡೆದ ಅವರು, ಪ್ರವಾಸಿಗರಿಂದ ಪಡೆಯಲಾಗುತ್ತಿರುವ ಬಾಡಿಗೆ ದರ, ವಾಹನ ಮತ್ತು ಚಾಲಕರ ಪರವಾನಗಿ ಸೇರಿದಂತೆ ವಿವಿಧ ಅಂಶಗಳ ಬಗ್ಗೆ ವಿಚಾರಿಸಿದರು. ಪ್ರವಾಸಿಗರಿಗೆ ಯಾವುದೇ ರೀತಿಯ ಕಿರಿಕಿರಿ ಉಂಟಾಗದಂತೆ ಹಾಗೂ ದೂರುಗಳು ಬರದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಚಾಲಕರಿಗೆ ಸೂಚಿಸಿದರು.

ಇದೇ ವೇಳೆ ಕಡಗದಾಳು ಪ್ರದೇಶದಲ್ಲಿರುವ ಹೋಂಸ್ಟೇ ಹಾಗೂ ರೆಸಾರ್ಟ್‌ಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಭೂಮಿ ಕೃಷಿಯೇತರ ಚಟುವಟಿಕೆಗೆ ಪರಿವರ್ತನೆಯಾಗಿದೆಯೇ, ಗ್ರಾಮ ಪಂಚಾಯಿತಿಯಿಂದ ಅಗತ್ಯ ಅನುಮತಿಗಳನ್ನು ಪಡೆದಿರುವುದೇ, ಪೊಲೀಸ್ ಇಲಾಖೆಯ ಎನ್‌ಒಸಿ, ವಿದ್ಯುತ್ ಪೂರೈಕೆ ಸೇರಿದಂತೆ ವಿವಿಧ ದಾಖಲೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿದರು.

ಹೋಂಸ್ಟೇ ಮತ್ತು ರೆಸಾರ್ಟ್‌ಗಳಲ್ಲಿ ಸಿಸಿಟಿವಿ ಅಳವಡಿಕೆ, ಅತಿಥಿಗಳ ನೋಂದಣಿ ಪುಸ್ತಕ, ದೂರು ನಿರ್ವಹಣಾ ಪುಸ್ತಕ ಕಡ್ಡಾಯವಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು. ವಿದೇಶಿ ಪ್ರವಾಸಿಗರು ಆಗಮಿಸಿದಲ್ಲಿ ಅವರ ಪಾಸ್‌ಪೋರ್ಟ್‌, ವಿಮಾನ ಟಿಕೆಟ್‌, ಗುರುತಿನ ಚೀಟಿ ವಿವರಗಳನ್ನು ದಾಖಲಿಸಿಕೊಳ್ಳುವುದರ ಜೊತೆಗೆ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡುವುದು ಕಡ್ಡಾಯ ಎಂದು ತಿಳಿಸಿದರು.

ಕಸ ವಿಲೇವಾರಿಯಲ್ಲಿ ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ನಿರ್ವಹಿಸಬೇಕು. ಅತಿಥಿಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಸಿಬ್ಬಂದಿಗಳ ಸಂಪೂರ್ಣ ವಿವರಗಳನ್ನು ದಾಖಲಿಸಿಕೊಂಡಿರಬೇಕು ಎಂದು ನಿರ್ದೇಶನ ನೀಡಿದರು.

ಈ ಸುದ್ದಿ ಓದಿದ್ದೀರಾ?ಮೈಸೂರಿನಲ್ಲಿ ಪಾಲಿಕೆಯ ವಿಶೇಷ ಕಾರ್ಯಾಚರಣೆ: 9 ಉದ್ದಿಮೆಗಳ ಮುಚ್ಚುವಿಕೆ, 16ಕ್ಕೆ ನೋಟಿಸ್.

ಪರಿಶೀಲನೆ ವೇಳೆ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಶಶಿಧರ್, ಸಮಾಲೋಚಕ ಜತಿನ್, ಗಾಜಿನ ಸೇತುವೆಗಳ ಮಾಲೀಕರು, ಹೋಂಸ್ಟೇ ಹಾಗೂ ರೆಸಾರ್ಟ್‌ಗಳ ಮಾಲೀಕರು, ಕಂದಾಯ ಇಲಾಖೆ ಅಧಿಕಾರಿಗಳು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮಲೆನಾಡು-ಕರಾವಳಿ ಕೃಷಿ ವಲಯವಾಗಿ ಘೋಷಿಸಬೇಕು; ಸುಧೀರ್ ಕುಮಾರ್ ಮುರೊಳ್ಳಿ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಉಡುಪಿ | ಅನುಚಿತ ವರ್ತನೆಗೆ ಸಂತ್ರಸ್ತರನ್ನು ಹೊಣೆ ಮಾಡಲಾಗದು : ಡಾ. ದಿವ್ಯಾ ರಾಣಿ

ಉಡುಪು, ಸ್ನೇಹ ಅಥವಾ ಸಾಮಾಜಿಕ ಜಾಲತಾಣಗಳ ಬಳಕೆಯಂತಹ ವೈಯಕ್ತಿಕ ಆಯ್ಕೆಗಳು ಯಾವುದೇ...

ಭವಿಷ್ಯದ ಸಮಾಜವನ್ನು ರೂಪಿಸುವ ವಿದ್ಯಾರ್ಥಿ ಸಂಘಗಳ ಅಗತ್ಯವಿದೆ : ಶ್ರೀವರ್ಮ ಅಜ್ರಿ ಎಂ

ಶೈಕ್ಷಣಿಕ ಉನ್ನತಿಯೊಂದಿಗೆ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನೂ ಬೆಳೆಸುವ ಕಾಲೇಜು ವಿದ್ಯಾರ್ಥಿ ಸಂಘಗಳು...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...