ದಸರಾ ಉತ್ಸವ ಆಚರಣೆಗೆ ಸರ್ಕಾರದಿಂದ ₹2 ಕೋಟಿ ಅನುದಾನ ಬಿಡುಗಡೆಗೊಳಿಸುವಂತೆ ಮಡಿಕೇರಿ ದಸರಾ ಸಮಿತಿ ನಿಯೋಗ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇತೃತ್ವದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್ ಎಸ್ ಬೊಸರಾಜು ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.
ಸಚಿವರು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಭರವಸೆ ನೀಡಿದರು.
ಮಡಿಕೇರಿ ದಸರಾ ಸಮಿತಿ ಅಧ್ಯಕ್ಷ ಹಾಗೂ ನಗರಸಭಾ ಅಧ್ಯಕ್ಷ ಅನಿತಾ ಪೂವಯ್ಯ, ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ, ಕಾರ್ಯದರ್ಶಿ ಬಿ ವೈ ರಾಜೇಶ್, ನಗರಸಭಾ ಸದಸ್ಯ ಹಾಗೂ ದಸರಾ ಸಮಿತಿ ಖಜಾಂಚಿ ಅರುಣ್ ಶೆಟ್ಟಿ, ಪ್ರಮುಖರುಗಳಾದ ಟಿ ಪಿ ರಮೇಶ್, ಮುನೀರ್ ಅಹ್ಮದ್ ಸೇರಿದಂತೆ ಇತರರು ಇದ್ದರು.
ಈ ಸುದ್ದಿ ಓದಿದ್ದೀರಾ? ಕೊಡಗು | ಆನೆ ದಾಳಿಯಿಂದ ಬೆಳೆ ನಷ್ಟ; ಸಂತ್ರಸ್ತ ರೈತರ ಜಮೀನಿಗೆ ಸಂಕೇತ್ ಪೂವಯ್ಯ ಭೇಟಿ
ಇದೇ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರಿಗೂ ನಿಯೋಗದ ವತಿಯಿಂದ ಮನವಿ ಪತ್ರ ಸಲ್ಲಿಸಿದರು.