ಕೊಡಗು | ಪೊಲೀಸರು ಕಾಂಗ್ರೆಸ್‌ ಏಜೆಂಟರಂತೆ ವರ್ತಿಸಿದರೆ ನಾವು ಠಾಣೆಗೇ ನುಗ್ಗುತ್ತೇವೆ: ಸಂಸದ ಪ್ರತಾಪ್‌ ಸಿಂಹ

Date:

ಪೊಲೀಸರು ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದು, ನಾವು ಪೊಲೀಸ್​​ ಠಾಣೆಗೆ ನುಗ್ಗುತ್ತೇವೆ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.

- Advertisement -

ಸಾಮಾಜಿಕ‌ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ವಿಚಾರವಾಗಿ ಬಿಜೆಪಿ ಕಾರ್ಯಕರ್ತನೆನ್ನಲಾದ ವ್ಯಕ್ತಿಯನ್ನು ಕೊಡಗು ಪೊಲೀಸರು ವಿಚಾರಣೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಗೆ ಆಗಮಿಸಿದ ಪ್ರತಾಪ್ ಸಿಂಹ ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಘಟನೆ ವಿವರ

ಅಮ್ಮತ್ತಿ ಗ್ರಾಮದ ಲೋಶನ್ ಕಾರ್ಯಪ್ಪ ಎಂಬ ಬಿಜೆಪಿ ಕಾರ್ಯಕರ್ತ ಇತ್ತೀಚೆಗೆ ಫೇಸ್​ಬುಕ್​ನಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಂಡಿದ್ದರು. ಅದರಲ್ಲಿ ತೆಲಂಗಾಣ ಸರ್ಕಾರಕ್ಕೆ ಕರ್ನಾಟಕದ ದುಡ್ಡು ಹಂಚುತ್ತಿರುವ ಎಟಿಎಂ ಸರ್ಕಾರ ಎಂದು ಟೀಕೆ ಮಾಡಲಾಗಿತ್ತು. ಈ ಸಂಬಂಧ ಕೊಡಗು ಎಸ್​ಪಿಗೆ ದೂರು ಬಂದ ಹಿನ್ನೆಲೆಯಲ್ಲಿ ಅದನ್ನು ವಿರಾಜಪೇಟೆ ಗ್ರಾಮಾಂತರ ಠಾಣೆಗೆ ವರ್ಗಾಯಿಸಿದ್ದರು. ಅದನ್ನು ಪರಿಗಣಿಸಿದ ಪೊಲೀಸರು ಲೋಶನ್​ ಎಂಬುವವರನ್ನು ಠಾಣೆಗೆ ಕರೆಸಿ ಪೋಸ್ಟ್​ ಡಿಲೀಟ್​​ ಮಾಡುವಂತೆ ಸೂಚಿಸಿ ತಪ್ಪೊಪ್ಪಿಗೆ ಬರೆಸಿಕೊಂಡು ಕಳುಹಿಸಿದ್ದರು.

ಬಿಜೆಪಿ ಕಾರ್ಯಕರ್ತ ಕೇವಲ ಒಂದು ಪೋಸ್ಟ್​ ಹಂಚಿಕೊಂಡಿದ್ದಕ್ಕೆ ಪೊಲೀಸರು ಠಾಣೆಗೆ ಕರೆಸಿ ಮುಚ್ಚಳಿಕೆ ಬರೆಸಿಕೊಂಡ ವಿಚಾರ ಅರಿಯುತ್ತಲೇ ಮಾಜಿ ಶಾಸಕ ಕೆ ಜಿ ಬೋಪಯ್ಯ ಜೊತೆಗೆ ಸಂಸದ ಪ್ರತಾಪ್ ಸಿಂಹ ವಿರಾಜಪೇಟೆ ಗ್ರಾಮಾಂತರ ಠಾಣಾಧಿಕಾರಿ ವಾಣಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ಯಾವ ಆಧಾರದ ಮೇಲೆ ತಾವು ಮುಚ್ಚಳಿಕೆ ಬರೆಸಿಕೊಂಡಿದ್ದೀರಿ” ಎಂದು ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ತುಮಕೂರು | ನಾಗಲಾಪುರ ಸರ್ಕಾರಿ ಶಾಲೆಯಲ್ಲಿ ಸಂವಿಧಾನ ದಿನಾಚರಣೆ

ಇನ್ನು ಮುಂದೆ ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ಕೊಟ್ಟರೆ ಪೊಲೀಸ್ ಠಾಣೆಗೆ ನುಗ್ಗುವುದಾಗಿ ಪೊಲೀಸರಿಗೆ ಎಚ್ಚರಿಕೆ ನೀಡಿದರು.

ಈ ಘಟನೆಗೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಪೊಲೀಸರ ಕೆಲಸದಲ್ಲಿ ಮಧ್ಯಪ್ರವೇಶ ಮಾಡಿದ್ದಾರೆ ಎಂದು ಕೆಲವು ಕಾಂಗ್ರೆಸ್ ಕಾರ್ಯಕರ್ತರಿಂದ ಟೀಕೆ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...