ಕೊಡಗು | ಪ್ರತಿಷ್ಠಿತ ‘ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

Date:

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿ’ಗೆ 2026-27ನೇ ಸಾಲಿನ ಆಯ್ಕೆಗಾಗಿ ಕೊಡಗು ಜಿಲ್ಲೆಯ ಪುರುಷ ಲೇಖಕರಿಂದ ಕನ್ನಡ ಭಾಷೆಯಲ್ಲಿ ಪ್ರಕಟಿತ ಕೃತಿಗಳನ್ನು ಆಹ್ವಾನಿಸಲಾಗಿದೆ.

- Advertisement -

ಶಕ್ತಿ ಪತ್ರಿಕೆಯ ಸ್ಥಾಪಕ ಸಂಪಾದಕರಾಗಿದ್ದ ದಿವಂಗತ ಬಿ.ಎಸ್. ಗೋಪಾಲಕೃಷ್ಣ ಅವರ ಸ್ಮರಣಾರ್ಥ, ಅವರ ಪುತ್ರ ಅನಂತಶಯನ ಹಾಗೂ ಸಹೋದರರು ಪುರುಷ ಲೇಖಕರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ದತ್ತಿ ಪ್ರಶಸ್ತಿಯನ್ನು ಸ್ಥಾಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಪ್ರಶಸ್ತಿಗೆ ಅರ್ಹರಾಗಲು ಆಸಕ್ತ ಲೇಖಕರು 2021ರ ನಂತರ ಪ್ರಕಟಗೊಂಡ ತಮ್ಮ ಕನ್ನಡ ಕೃತಿಯ ನಾಲ್ಕು ಪ್ರತಿಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ಸ್ಪರ್ಧೆಗೆ ಪುಸ್ತಕ ಕಳುಹಿಸುವ ಲೇಖಕರು ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾಗಿರುವುದು ಕಡ್ಡಾಯವಾಗಿದ್ದು, ಒಬ್ಬ ಲೇಖಕರು ಒಂದು ಕೃತಿಯನ್ನು ಮಾತ್ರ ಸ್ಪರ್ಧೆಗೆ ಸಲ್ಲಿಸಬಹುದು.

ಅರ್ಜಿಯನ್ನು ಕಳುಹಿಸುವ ಲಕೋಟೆಯ ಮೇಲೆ “ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿಗೆ” ಎಂದು ಸ್ಪಷ್ಟವಾಗಿ ನಮೂದಿಸಬೇಕು. ಈ ಪ್ರಶಸ್ತಿಗೆ ಕೊಡಗು ಜಿಲ್ಲೆಯ ಲೇಖಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಪುಸ್ತಕಗಳನ್ನು ಸಲ್ಲಿಸಲು ಆಗಸ್ಟ್ 2, 2026 ಕೊನೆಯ ದಿನಾಂಕವಾಗಿದೆ.

ಕಳುಹಿಸಬೇಕಾದ ವಿಳಾಸ: ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಂಬೇಡ್ಕರ್ ಭವನದ ಬಳಿ,
ಸುದರ್ಶನ ವೃತ್ತ, ಮಡಿಕೇರಿ. ಮೊಬೈಲ್: 94483 46276.

ಈ ವಿಶೇಷ ಸುದ್ದಿ ಓದಿದ್ದೀರಾ?ತಂಬಾಕು: ಒಂದೊಂದು ಎಲೆಯ ಹಿಂದೆ ರೈತನ ಶ್ರಮ, ವಿಜ್ಞಾನ ಮತ್ತು ಅನಿಶ್ಚಿತತೆಯ ಬದುಕು ಇದೆ

ಆಸಕ್ತ ಲೇಖಕರು ನಿಗದಿತ ಅವಧಿಯೊಳಗೆ ತಮ್ಮ ಪುಸ್ತಕಗಳನ್ನು ಮೇಲಿನ ವಿಳಾಸಕ್ಕೆ ತಲುಪಿಸುವಂತೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...