ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ರಸ್ತೆ ಪಕ್ಕದ ಮರಕ್ಕೆ ಢಿಕ್ಕಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.
ಕೊಡಗು ಜಿಲ್ಲೆ ಮಡಿಕೇರಿಯಿಂದ ಸೂರ್ಲಬ್ಬಿ ಮಾರ್ಗವಾಗಿ ಸೋಮವಾರಪೇಟೆಗೆ ತೆರಳುತ್ತಿದ್ದ ಬಸ್ಸೊಂದು ಸೋಮವಾರಪೇಟೆ ತಾಲೂಕಿನ ಕುಂಬಾರಗಡಿಗೆ ಎಂಬಲ್ಲಿ ಮರವೊಂದಕ್ಕೆ ಢಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಹೆಚ್ಚಾಗಿ ಶಾಲಾ ಮಕ್ಕಳಿಂದ ತುಂಬಿದ್ದ ಈ ಬಸ್ ಸುಮಾರು ಐವತ್ತು ಅಡಿ ಪ್ರಪಾತದ ಸಮೀಪದ ಮರವೊಂದಕ್ಕೆ ಗುದ್ಧಿದ್ದು, ಅದೃಷ್ಟವಶಾತ್ ಯಾವುದೇ ಅನಾಹುತಗಳು ಸಂಭವಿಸದೆ ಪ್ರಯಾಣಿಕರು ಪಾರಾಗಿದೆ.
ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಸರ್ಕಾರಿ ಬಸ್ ಪಲ್ಟಿ; 55 ಪ್ರಯಾಣಿಕರಿಗೆ ಗಾಯ
ತಿರುವುಗಳಲ್ಲಿ ಸೂಚನಾ ಫಲಕಗಳು ಇಲ್ಲದಿರುವುದೇ ಈ ಅಪಘಾತಕ್ಕೆ ಕಾರಣವೆಂದು ಸ್ಥಳೀಯರು ಅಭಿಪ್ರಾಯ ಪಟ್ಟಿದ್ದಾರೆ.