ಕೊಡಗಿನಲ್ಲಿ ಕಳೆದ 24 ಗಂಟೆ 8.90 ಮಿ.ಮೀ. ಮಳೆ; ಹಾರಂಗಿಗೆ 7,147 ಕ್ಯುಸೆಕ್ ಒಳಹರಿವು

Date:

ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ಕಳೆದ 24 ಗಂಟೆಗಳ ಅವಧಿಯಲ್ಲಿ ಸರಾಸರಿ 8.90 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ ಜಿಲ್ಲೆಯಲ್ಲಿ 11.08 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇದುವರೆಗೆ ಜಿಲ್ಲೆಯಲ್ಲಿ 1,084.01 ಮಿ.ಮೀ. ಮಳೆಯಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 2,173.95 ಮಿ.ಮೀ. ಮಳೆಯಾಗಿತ್ತು.

- Advertisement -

ತಾಲ್ಲೂಕುವಾರು ಮಳೆ ವಿವರದ ಪ್ರಕಾರ, ಮಡಿಕೇರಿ ತಾಲ್ಲೂಕಿನಲ್ಲಿ 32.40 ಮಿ.ಮೀ. ಮಳೆಯಾಗಿದ್ದು, ಕಳೆದ ವರ್ಷ ಇದೇ ದಿನ 14.40 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇದುವರೆಗೆ 1,697.64 ಮಿ.ಮೀ. ಮಳೆಯಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 3,269.50 ಮಿ.ಮೀ. ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ವಿರಾಜಪೇಟೆ ತಾಲ್ಲೂಕಿನಲ್ಲಿ 4.50 ಮಿ.ಮೀ., ಪೊನ್ನಂಪೇಟೆ 2.10 ಮಿ.ಮೀ., ಸೋಮವಾರಪೇಟೆ 3.10 ಮಿ.ಮೀ. ಹಾಗೂ ಕುಶಾಲನಗರ 2.40 ಮಿ.ಮೀ. ಮಳೆಯಾಗಿದೆ. ಈ ಎಲ್ಲ ತಾಲ್ಲೂಕುಗಳಲ್ಲೂ ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಈ ವರ್ಷದ ಒಟ್ಟು ಮಳೆಯ ಪ್ರಮಾಣ ಗಮನಾರ್ಹವಾಗಿ ಕಡಿಮೆಯಾಗಿದೆ.

ಹೋಬಳಿವಾರು ಮಳೆ ವಿವರದಲ್ಲಿ ಹುದಿಕೇರಿ ಹೋಬಳಿಯಲ್ಲಿ ಅತಿ ಹೆಚ್ಚು 66.80 ಮಿ.ಮೀ. ಮಳೆಯಾಗಿದ್ದು, ಭಾಗಮಂಡಲ 47.60 ಮಿ.ಮೀ., ಸಂಪಾಜೆ 34.80 ಮಿ.ಮೀ., ನಾಪೋಕ್ಲು 21.80 ಮಿ.ಮೀ., ಮಡಿಕೇರಿ 20.90 ಮಿ.ಮೀ. ಮಳೆಯಾಗಿದೆ. ಉಳಿದಂತೆ ವಿರಾಜಪೇಟೆ 5.40, ಸುಂಟಿಕೊಪ್ಪ 5.10, ಶಾಂತಳ್ಳಿ 6.70, ಅಮ್ಮತ್ತಿ 3.40, ಕುಶಾಲನಗರ 2.40, ಶ್ರೀಮಂಗಲ 1.10, ಸೋಮವಾರಪೇಟೆ 1.00, ಕೊಡ್ಲಿಪೇಟೆ 0.80, ಪೊನ್ನಂಪೇಟೆ 0.50, ಶನಿವಾರಸಂತೆ 0.40 ಹಾಗೂ ಬಾಳೆಲೆ 0.30 ಮಿ.ಮೀ. ಮಳೆಯಾಗಿದೆ.

ಹಾರಂಗಿ ಜಲಾಶಯ ಭರ್ತಿಯತ್ತ

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿ ಇದ್ದು, ಪ್ರಸ್ತುತ ನೀರಿನ ಮಟ್ಟ 2,857.22 ಅಡಿ ತಲುಪಿದೆ. ಕಳೆದ ವರ್ಷ ಇದೇ ದಿನ ಜಲಾಶಯದ ಮಟ್ಟ 2,855.84 ಅಡಿ ಇತ್ತು.

ಜಲಾಶಯ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1.80 ಮಿ.ಮೀ. ಮಳೆಯಾಗಿದ್ದು, ಕಳೆದ ವರ್ಷ ಇದೇ ದಿನ 1.20 ಮಿ.ಮೀ. ಮಳೆಯಾಗಿತ್ತು. ಜಲಾಶಯಕ್ಕೆ ಪ್ರಸ್ತುತ 7,147 ಕ್ಯುಸೆಕ್ ನೀರು ಒಳಹರಿವಾಗುತ್ತಿದ್ದು, ಕಳೆದ ವರ್ಷ ಇದೇ ದಿನ 4,050 ಕ್ಯುಸೆಕ್ ಒಳಹರಿವು ದಾಖಲಾಗಿತ್ತು.

ಈ ವಿಶೇಷ ಸುದ್ದಿ ಓದಿದ್ದೀರಾ?ಅರಣ್ಯ, ಹಾಡಿ, ದುರ್ಗಮ ಹಾದಿಗಳ ನಡುವೆ ‘SIR’ ಶೇ.100: ಚಾಮರಾಜನಗರದ ಸಾಧನೆ ಹೇಗೆ ಸಾಧ್ಯವಾಯಿತು?

ಪ್ರಸ್ತುತ ಜಲಾಶಯದಿಂದ 6,291 ಕ್ಯುಸೆಕ್ ನೀರನ್ನು ನದಿಗೆ ಹಾಗೂ 500 ಕ್ಯುಸೆಕ್ ನೀರನ್ನು ನಾಲೆಗೆ ಬಿಡುಗಡೆ ಮಾಡಲಾಗುತ್ತಿದೆ. ಕಳೆದ ವರ್ಷ ಇದೇ ದಿನ ನದಿಗೆ 2,625 ಕ್ಯುಸೆಕ್ ನೀರು ಹರಿಸಲಾಗುತ್ತಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಕರ್ತವ್ಯಲೋಪ ಆರೋಪದಡಿ ಡಿಎಚ್‌ಒ ಡಾ. ರಾಜಕುಮಾರ್ ಯರಗಲ್ ಅಮಾನತು

ಕರ್ತವ್ಯಲೋಪ, ಆಡಳಿತಾತ್ಮಕ ನಿರ್ಲಕ್ಷ್ಯ ಹಾಗೂ ಇಲಾಖೆಯ ಸೂಚನೆಗಳನ್ನು ಪಾಲಿಸದೆ ಕಾರ್ಯನಿರ್ವಹಿಸಿದ ಆರೋಪದ...

ಅ.15ರಿಂದ ಬಾಗಲಕೋಟೆ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ತರಗತಿ ಆರಂಭ

ಬಾಗಲಕೋಟೆ ಜಿಲ್ಲೆಯ ಬಹು ವರ್ಷಗಳ ಬೇಡಿಕೆಯ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ...

ರಾಯಚೂರು | ಅನಧಿಕೃತ ವಿದ್ಯುತ್ ಬಳಕೆ; ಜೆಸ್ಕಾಂನಿಂದ ₹18.95 ಲಕ್ಷ ದಂಡ

ಜೆಸ್ಕಾಂ ಇಲಾಖೆಯಿಂದ ಜಿಲ್ಲೆಯಲ್ಲಿ ಆಗಸ್ಟ್‌ನಲ್ಲಿ ಜೆಸ್ಕಾಂ ಅಧಿಕಾರಿಗಳು, ಜಾಗೃತದಳದವರು ದಾಳಿ ಮಾಡಿ...