ಕೊಡಗು | ಟಾಟಾ ಕಾಫಿ ತೋಟದಲ್ಲಿ ಮರ ಬಿದ್ದು ಇಬ್ಬರು ಮಹಿಳಾ ಕಾರ್ಮಿಕರ ದುರಂತ ಸಾವು

Date:

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಬಿಳಿಗೇರಿ ಸಮೀಪದ ಟಾಟಾ ಕಾಫಿ ತೋಟದಲ್ಲಿ ಬುಧವಾರ ಭಾರಿ ಗಾಳಿ-ಮಳೆಯಿಂದ ಮರವೊಂದು ಉರುಳಿ ಬಿದ್ದು, ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

- Advertisement -

ಮಾದಪುರ ಸಮೀಪದ ಬಿಳಿಗೇರಿ ಟಾಟಾ ಕಾಫಿ ತೋಟದಲ್ಲಿ ಕಾರ್ಮಿಕರು ಎಂದಿನಂತೆ ಕೆಲಸದಲ್ಲಿ ತೊಡಗಿದ್ದ ವೇಳೆ, ಭಾರಿ ಗಾಳಿ ಮತ್ತು ಮಳೆಯಿಂದ ಮರವೊಂದು ಬಿದ್ದು ಪರ್ಬೀನಾ ಖಾತೂನ್ (29) ಹಾಗೂ ಅಲೆಮಾನ್ (48) ಸ್ಥಳದಲ್ಲೇ ಮೃತಪಟ್ಟರು. ಅವರೊಂದಿಗೆ ಕೆಲಸ ಮಾಡುತ್ತಿದ್ದ ಇನ್ನಿಬ್ಬರು ಕಾರ್ಮಿಕರಿಗೆ ತೀವ್ರ ಗಾಯಗಳಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಘಟನೆ ತಿಳಿದ ಕೂಡಲೇ ಸೋಮವಾರಪೇಟೆ ಪೊಲೀಸರು ಮತ್ತು ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಭಾರಿ ಮಳೆ ಮತ್ತು ಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ಈ ದುರಂತ ಸಂಭವಿಸಿದೆ. ಮೃತರ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ನೀಡುವ ಬಗ್ಗೆ ಅಧಿಕಾರಿಗಳು ಕ್ರಮಕೈಗೊಳ್ಳುವ ಸಾಧ್ಯತೆ ಇದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೊಸನಗರ | ರೂ. 4 ಲಕ್ಷ ಮೌಲ್ಯದ ಸಾಗುವಾನಿ ನಾಟ ವಶ!

ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳಂದೂರು ಗ್ರಾಮದಲ್ಲಿ...

ಕಬ್ಬಿನ ದರ ನಿಗದಿಗೆ ಆಗ್ರಹಿಸಿ ಮೈಶುಗರ್ ಸಕ್ಕರೆ ಗೋದಾಮಿಗೆ ರೈತರ ಮುತ್ತಿಗೆ

ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ನೀಡಬೇಕು ಹಾಗೂ ಪ್ರತಿ ಟನ್ ಕಬ್ಬಿಗೆ...

ಯುಪಿ | ಬ್ರಿಜ್ ಭೂಷಣ್‌ಗೆ ಬಿಜೆಪಿ ಮತ್ತೆ ಮಣೆ; ಚುನಾವಣೆಗೆ ಮುನ್ನ ಟಾಪ್ ಟೀಮ್‌ನಲ್ಲಿ ಸ್ಥಾನ!

ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ನ್ಯಾಯಾಲಯದಿಂದ ಖುಲಾಸೆಗೊಂಡ ಕೆಲವೇ ತಿಂಗಳ...

ಕಬ್ಬು ಬೆಳೆಗಾರರ ರಕ್ಷಣೆಗೆ ಪ್ರತ್ಯೇಕ ವಿಮೆ, ನ್ಯಾಯಯುತ ಬೆಲೆ ಸೇರಿದಂತೆ 12 ಬೇಡಿಕೆ

ಕಬ್ಬು ಬೆಳೆಗಾರರಿಗೆ ಪ್ರಸಕ್ತ ಸಾಲಿನಲ್ಲಿ ಪ್ರತಿ ಟನ್ ಕಬ್ಬಿಗೆ ₹6,000 ಕನಿಷ್ಠ...