ಕೊಡಗು | ಭಾರೀ ಮಳೆಗೆ ತ್ರಿವೇಣಿ ಸಂಗಮ ಭರ್ತಿ: ಉದ್ಯಾನ, ಗದ್ದೆಗಳು ಜಲಾವೃತ

Date:

ಕೊಡಗು ಜಿಲ್ಲೆಯಾದ್ಯಂತ ಸೋಮವಾರ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದ್ದು, ಮಡಿಕೇರಿ ತಾಲೂಕಿನ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೊಮ್ಮೆ ಭರ್ತಿಯಾಗಿದೆ. ನದಿ ನೀರಿನಿಂದ ದಡದಲ್ಲಿರುವ ಉದ್ಯಾನ ಹಾಗೂ ಗದ್ದೆಗಳು ಜಲಾವೃತವಾಗಿವೆ.

- Advertisement -

ಮಡಿಕೇರಿ, ವಿರಾಜಪೇಟೆ, ಬಿರುನಾಣಿ ಭಾಗದಲ್ಲಿ ಮಳೆ ಬಿರುಸಾಗಿದ್ದರೆ ಸೋಮವಾರಪೇಟೆ ಭಾಗದಲ್ಲಿ ನಿರಂತರ ಸಾಧಾರಣ ಮಳೆ ಸುರಿಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಹಾರಂಗಿ ಜಲಾನಯನ ಪ್ರದೇಶದಲ್ಲೂ ವ್ಯಾಪಕ ಮಳೆಯಾಗುತ್ತಿದ್ದು, ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ಸೋಮವಾರ ರಾತ್ರಿಯಿಂದಲೇ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಬಿರುಸಿನ ಮಳೆ ಮುಂದುವದಿದ್ದು, ನದಿ ಪಾತ್ರದ ಜನರು, ಪ್ರವಾಸಿಗರು ಮುನ್ನೆಚ್ಚರಿಕೆ ವಹಿಸುವಂತೆ ಸ್ಥಳೀಯ ಆಡಳಿತ ಸೂಚಿಸಿದೆ.

ಕಳೆದ ಕೆಲ ದಿನಗಳಿಂದ ಜಿಲ್ಲೆಯ ವಿವಿಧೆಡೆ ಸುರಿಯುತ್ತಿರುವ ಮಳೆಯಿಂದ ಕಾಫಿ, ಮೆಣಸು ಸೇರಿದಂತೆ ಹಲವು ಬೆಳೆಗಳ ಮೇಲೆ ಪರಿಣಾಮ ಬೀರುವಂತಿದ್ದು, ರೈತರು ಆತಂಕಕ್ಕೀಡಾಗಿದ್ದಾರೆ. ಕಾಫಿ ತೋಟಗಳಲ್ಲಿ ಹೂವು, ಕಾಯಿಗಳು ಉದುರುವ ಸಾಧ್ಯತೆ ಹೆಚ್ಚಾಗಿದ್ದು, ನಿರಂತರ ಮಳೆಯಿಂದ ಬೆಳೆಗಾರರು ಚಿಂತೆಗೆ ಒಳಗಾಗಿದ್ದಾರೆ.

ರಾಜ್ಯದ ಹಲವು ಜಿಲ್ಲೆಗಳಲ್ಲೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಭಾಗಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ ಒಂದೆರಡು ಕಡೆ ಭಾರೀ ಮಳೆಯಾಗಲಿದೆ. ಅಲ್ಲದೆ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಕೌಟುಂಬಿಕ ಕಲಹ: 3 ಮಕ್ಕಳೊಂದಿಗೆ ನದಿಗೆ ಹಾರಿದ ತಾಯಿ, ಇಬ್ಬರು ಮಕ್ಕಳು ನೀರು ಪಾಲು

ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲೂ ಒಂದೆರಡು ಕಡೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಭಾಗಗಳಲ್ಲಿ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆಯಿಂದ ಇರುವಂತೆ ಇಲಾಖೆ ಎಚ್ಚರಿಸಿದೆ.

ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಿಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರವೂ ಯೆಲ್ಲೋ ಅಲರ್ಟ್ ಘೋಷಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...