ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ 3 ದಿನಗಳಿಂದ ನಾಪತ್ತೆ; ANF ತೀವ್ರ ಶೋಧ

Date:

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ (ಚಾರಣ) ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

- Advertisement -

ನಾಪತ್ತೆಯಾಗಿರುವ ಯುವತಿಯನ್ನು ಕೇರಳದ ಕೋಯಿಕ್ಕೋಡ್ ನಿವಾಸಿ, ಎರ್ನಾಕುಲಂನ ಐಟಿ ಉದ್ಯೋಗಿ ಶರಣ್ಯಾ (35) ಎಂದು ಗುರುತಿಸಲಾಗಿದೆ. ಅವರು ಕಕ್ಕಬ್ಬೆಗೆ ಪ್ರವಾಸಕ್ಕೆಂದು ಬಂದಿದ್ದರು. ಹೋಂಸ್ಟೇಯೊಂದರಲ್ಲಿ ತಂಗಿದ್ದರು. ಮೂರು ದಿನಗಳ ಹಿಂದೆ ಬೆಳಿಗ್ಗೆ 8:30ಕ್ಕೆ ತಡಿಯಂಡಮೋಳ್ ಬೆಟ್ಟದ ಚಾರಣಕ್ಕೆ ಹೊರಟಿದ್ದರು. ಅರಣ್ಯ ಇಲಾಖೆಯ ನಿಯಮದಂತೆ ಒಬ್ಬರೇ ಚಾರಣಕ್ಕೆ ಹೋಗಲು ಅವಕಾಶವಿಲ್ಲದ ಕಾರಣ, ಅಲ್ಲಿಗೆ ಬಂದಿದ್ದ ಮತ್ತೊಂದು ತಂಡದೊಂದಿಗೆ ಅವರನ್ನು ಕಳುಹಿಸಿಕೊಡಲಾಗಿತ್ತು ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮಧ್ಯಾಹ್ನ 1:30ಕ್ಕೆ ಬೆಟ್ಟದಿಂದ ವಾಪಸ್ ಬರಬೇಕಿದ್ದ ಶರಣ್ಯಾ ಸಮಯಕ್ಕೆ ಸರಿಯಾಗಿ ಬಂದಿರಲಿಲ್ಲ. ಅವರನ್ನು ಸಂಪರ್ಕಿಸಲು ಹೋಂಸ್ಟೇ ಮಾಲೀಕರು ಕರೆ ಮಾಡಿದ್ದಾರೆ. ಆರಂಭದಲ್ಲಿ,ಸಂಪರ್ಕಕ್ಕೆ ಸಿಗದ ಶರಣ್ಯಾ, ನಂತರ ಕರೆ ಸ್ವೀಕರಿಸಿ ತಾನು ದಾರಿ ತಪ್ಪಿದ್ದೇನೆ ಎಂದು ತಿಳಿಸಿದ್ದಾರೆ. ಬಳಿಕ, ಅವರ ಮೊಬೈಲ್ ಸಂಪರ್ಕ ಕಡಿತಗೊಂಡಿದೆ. ಅಗಿನಿಂದಲೂ ಅವರು ನಾಪತ್ತೆಯಾಗಿದ್ದಾರೆ.

ಈ ಲೇಖನ ಓದಿದ್ದೀರಾ?: ತ್ರಿಭಾಷಾ ಸೂತ್ರ ಮತ್ತು ದೇಶದ ಏಕತೆ – ಒಂದು ಐತಿಹಾಸಿಕ ಸುಳ್ಳು

ವಿಷಯ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆ, ಪೊಲೀಸ್ ಇಲಾಖೆ ಮತ್ತು ಸ್ಥಳೀಯ ನಿವಾಸಿಗಳು ಬೆಟ್ಟದ ಸುತ್ತಮುತ್ತ ಜಂಟಿ ಕಾರ್ಯಾಚರಣೆ ಆರಂಭಿಸಿದ್ದಾರೆ. ದಟ್ಟ ಅರಣ್ಯ ಮತ್ತು ಸಂಕೀರ್ಣ ಹಾದಿಗಳಿರುವ ಕಾರಣ ಶೋಧ ಕಾರ್ಯಕ್ಕೆ ಅಡೆತಡೆ ಉಂಟಾಗುತ್ತಿದೆ. ಪ್ರಸ್ತುತ ನಕ್ಸಲ್ ನಿಗ್ರಹ ಪಡೆ (ANF) ಸಿಬ್ಬಂದಿ ಕೂಡ ಕಾರ್ಯಾಚರಣೆಗೆ ಇಳಿದಿದ್ದು, ಯುವತಿಯ ಪತ್ತೆಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...