ಕೊಡಗು | ಅರೆಭಾಷೆಗೆ ಸಾಂಸ್ಕೃತಿಕ ನೆಲೆ, ವ್ಯಾಕರಣದ ಶಿಸ್ತು ರೂಪಿಸಿದವರು ಕೋಡಿ ಕುಶಾಲಪ್ಪ ಗೌಡ: ಸದಾನಂದ ಮಾವಜಿ

Date:

ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟನ್ನು ಹಾಕಿಕೊಟ್ಟು, ವ್ಯಾಕರಣದ ಶಿಸ್ತನ್ನು ರೂಢಿಸಿದವರು ಭಾಷಾ ವಿಜ್ಞಾನಿ ಡಾ. ಕೋಡಿ ಕುಶಾಲಪ್ಪ ಗೌಡರು ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಹೇಳಿದರು.

- Advertisement -

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘ, ಸುಳ್ಯ ಹಾಗೂ ಶ್ರೀ ಶಾರದಾ ಪದವಿ ಪೂರ್ವ ಕಾಲೇಜು, ಸುಳ್ಯ ಇವರ ಸಹಯೋಗದಲ್ಲಿ ಆಯೋಜಿಸಿದ್ದ ಡಾ. ಕೋಡಿ ಕುಶಾಲಪ್ಪ ಗೌಡರ ‘ನೆಂಪುನ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಅರೆಭಾಷೆಯನ್ನು ಕೇವಲ ಆಡುಭಾಷೆ ಎಂದು ಪರಿಗಣಿಸದೆ, ಅದರ ಭಾಷಿಕ ಸ್ವರೂಪ ಹಾಗೂ ವೈಶಿಷ್ಟ್ಯಗಳನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಬೇಕೆಂಬ ದೃಷ್ಟಿಕೋನವನ್ನು ಬೆಳೆಸಿದವರಲ್ಲಿ ಕೋಡಿ ಕುಶಾಲಪ್ಪ ಗೌಡರು ಪ್ರಮುಖರು. ಕನ್ನಡದ ಸಹೋದರ ಭಾಷೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.

ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ ಮಾತನಾಡಿ, ಗೌಡ ವಿದ್ಯಾ ಸಂಘವು ಹಲವು ವಿದ್ಯಾರ್ಥಿಗಳಿಗೆ ಆಶ್ರಯ ನೀಡಿದ್ದು, ಕೋಡಿ ಕುಶಾಲಪ್ಪ ಗೌಡರು ಅಂತಹ ಅಗ್ರಗಣ್ಯರಲ್ಲಿ ಒಬ್ಬರು.
ಹಿಂದಿನ ಕಾಲದ ಅರೆಭಾಷಿಕರ ಬದುಕು, ಶಿಸ್ತು, ಸಾಮಾಜಿಕ ಸ್ಥಿತಿಗತಿ ಹಾಗೂ ಒಗ್ಗಟ್ಟನ್ನು ಸ್ಮರಿಸಿದ ಅವರು, ಸಂಸ್ಕೃತಿ ಮತ್ತು ಸಂಸ್ಕಾರವು ಉತ್ತಮ ಸಹಜೀವನ, ಸಹಬಾಳ್ವೆ ಹಾಗೂ ಅಭಿವೃದ್ಧಿಯ ಮೂಲವಾಗಿದೆ ಎಂದು ಹೇಳಿದರು. ಅರೆಭಾಷೆ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಅರೆಭಾಷೆ ಅಕಾಡೆಮಿ ಮಾಡುತ್ತಿರುವುದು ಶ್ಲಾಘನೀಯ.
ಎಲ್ಲ ಭಾಷೆಗಳಲ್ಲಿಯೂ ಮಾತೃಭಾಷೆಯೇ ಶ್ರೇಷ್ಠ. ಸಂಸ್ಕಾರ ಮತ್ತು ಸಂಸ್ಕೃತಿಯೇ ನಮ್ಮ ತಂದೆ-ತಾಯಿಯಿದ್ದಂತೆ. ಅವುಗಳನ್ನು ತೊರೆದು ನಾವು ಸಾಗಬಾರದು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಉಪನ್ಯಾಸ ನೀಡಿದ ಕೋಡಿ ಕುಶಾಲಪ್ಪ ಗೌಡರ ಶಿಷ್ಯ ಹಾಗೂ ಸಾಹಿತಿ ಸಂಜೀವ ಕುದ್ಪಾಜೆ, ತಮ್ಮ ಗುರುಗಳೊಂದಿಗಿನ ಒಡನಾಟವನ್ನು ಸ್ಮರಿಸಿದರು. ಕೋಡಿಯವರ ಸರಳತೆ, ಔದಾರ್ಯ ಹಾಗೂ ಸ್ನೇಹಪರ ವ್ಯಕ್ತಿತ್ವವನ್ನು ಮೆಲುಕು ಹಾಕಿದ ಅವರು, ಸಮಾಜದಲ್ಲಿ ಘನತೆಯ ವ್ಯಕ್ತಿತ್ವ ಹೊಂದಿದ್ದ ಕೋಡಿಯವರು ಎಲ್ಲರನ್ನೂ ಗೌರವಿಸುತ್ತಿದ್ದರು. ಭಾಷಾ ವಿಜ್ಞಾನಿಯಾಗಿದ್ದ ಕೋಡಿಯವರು ಅರೆಭಾಷೆಯ ಕುರಿತು ಆಂಗ್ಲಭಾಷೆಯಲ್ಲಿ ಬರೆದು ಭಾಷೆಯನ್ನು ವಿಶ್ವಮಟ್ಟದಲ್ಲಿ ಪರಿಚಯಿಸಿದರು. ವಿದ್ವಾಂಸರಾಗಿದ್ದರೂ ಅವರೊಳಗಿದ್ದ ಹಾಸ್ಯಪ್ರಜ್ಞೆ, ವಿನೋದ ಮನೋಭಾವ ಹಾಗೂ ಲಾಲಿತ್ಯವನ್ನು ಸಂಜೀವ ಕುದ್ಪಾಜೆ ಮನೋಜ್ಞವಾಗಿ ವಿವರಿಸಿದರು.

‘ಅರೆಭಾಷೆ-ಕೋಡಿ ಕುಶಾಲಪ್ಪ ಗೌಡರ ಕೊಡುಗೆ’ ವಿಷಯದ ಕುರಿತು ಮಾತನಾಡಿದ ಮಡಿಕೇರಿಯ ಫೀಲ್ಡ್‌ಮಾರ್ಷಲ್ ಕಾರ್ಯಪ್ಪ ಕಾಲೇಜಿನ ನಿವೃತ್ತ ಕನ್ನಡ ಉಪನ್ಯಾಸಕ ಡಾ. ಎನ್.ವಿ. ಕರುಣಾಕರ, ಕೋಡಿ ಕುಶಾಲಪ್ಪ ಗೌಡರು ಪಂಪಭಾರತ ಆಧಾರಿತ ‘ಅರೆಭಾಷೆ ಮಹಾಭಾರತ’ ಕೃತಿ ರಚಿಸಿದರೂ, ಅದರಲ್ಲಿ ತಮ್ಮದೇ ಆದ ಸ್ವಂತಿಕೆಯನ್ನು ತುಂಬಿದ್ದರು. ತಮ್ಮ ಅರೆಭಾಷೆ ಕೃತಿಗಳಲ್ಲಿ ಅರೆಭಾಷಿಕರ ಜನಜೀವನದ ಹೂರಣವನ್ನು ತುಂಬಿ, ಅವುಗಳನ್ನು ಮತ್ತಷ್ಟು ಆಪ್ತವಾಗಿಸಿದವರು ಕೋಡಿಯವರು. ಇತರರ ಕೆಲಸದಲ್ಲಿ ತಪ್ಪುಗಳು ನುಸುಳಿದ್ದರೆ ಅದನ್ನು ಟೀಕಿಸುವ ಬದಲು, ಅದಕ್ಕಿಂತ ಉತ್ತಮವಾದ ಹಾಗೂ ಸರಿಯಾದ ಕೆಲಸವನ್ನು ಮಾಡಿ ತೋರಿಸಬೇಕು ಎಂಬುದು ಅವರ ಧೋರಣೆಯಾಗಿತ್ತು ಎಂದು ಹೇಳಿದರು.

ಅರೆಭಾಷೆ ವ್ಯಾಕರಣದಲ್ಲಿ ಭಾಷೆಯ ಉತ್ಪತ್ತಿ ಹಾಗೂ ಧ್ವನಿಯ ಸ್ವರೂಪವನ್ನು ಕೋಡಿಯವರು ಉದಾಹರಣೆಗಳೊಂದಿಗೆ ಸ್ಪಷ್ಟಪಡಿಸಿದ್ದಾರೆ. ಅವರು ಹಾಕಿಕೊಟ್ಟಿರುವ ನೆಲೆಗಟ್ಟನ್ನು ಮೀರಿ ಹೋಗಲು ಸಾಧ್ಯವಿಲ್ಲ. ಅವರ ಕೊಡುಗೆಯ ಆಧಾರದಲ್ಲಿಯೇ ಅರೆಭಾಷೆಯ ಮುಂದಿನ ಬೆಳವಣಿಗೆ ಸಾಗಬೇಕಿದೆ ಎಂದು ಅವರು ಅಭಿಪ್ರಾಯಪಟ್ಟರು.

ಈ ವಿಶೇಷ ಸುದ್ದಿ ಓದಿದ್ದೀರಾ? ಮಂಡ್ಯದ ನ್ಯೂ ತಮಿಳು ಕಾಲೊನಿಯಲ್ಲಿ ‘SIR’ ಗೊಂದಲ: 207 ಮತದಾರರು ಎಲ್ಲಿ ಹೋದರು?

ಕಾರ್ಯಕ್ರಮದ ಸದಸ್ಯ ಸಂಚಾಲಕ ಗೋಪಾಲ ಪೆರಾಜೆ, ಅಕಾಡೆಮಿಯ ಸದಸ್ಯೆ ಚಂದ್ರಾವತಿ ಬಡ್ಡಡ್ಕ, ಸದಸ್ಯರಾದ ಚಂದ್ರಶೇಖರ ಪೇರಾಲು, ಡಾ. ಎನ್.ಎ. ಜ್ಞಾನೇಶ್, ಪೂಜಾಶ್ರೀ, ವಿತೇಶ್ ಶಾರದಾ ಕಾಲೇಜಿನ ನಿವೃತ್ತ ಉಪನ್ಯಾಸಕ ಪ್ರಸನ್ನ ನಿಡ್ಯಮಲೆ, ಪ್ರಾಂಶುಪಾಲೆ ಸ್ವರ್ಣಕಲಾ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ ಎಸಿಪಿ ವಿವೇಕ್ ಭಗತ್ FIR!

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...