ಕೇರಳಿಗರ ಬಗ್ಗೆ ಪ್ರತಾಪ್ ಸಿಂಹ ಹೇಳಿಕೆ ಖಂಡನೀಯ: ಕೆ.ಎ. ಯಾಕೂಬ್

Date:

ಕೇರಳಿಗರ ಕುರಿತು ಮಾಜಿ ಸಂಸದ ಪ್ರತಾಪ್ ಸಿಂಹ ಅವರು ನೀಡಿರುವ ಹೇಳಿಕೆ ಖಂಡನೀಯವಾಗಿದ್ದು, ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಕೆಪಿಸಿಸಿ ಸದಸ್ಯ ಕೆ.ಎ. ಯಾಕೂಬ್ ಒತ್ತಾಯಿಸಿದ್ದಾರೆ.

- Advertisement -

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೇರಳ ಮತ್ತು ಕರ್ನಾಟಕ ನೆರೆಯ ರಾಜ್ಯಗಳಾಗಿದ್ದು, ಹಲವು ತಲೆಮಾರುಗಳಿಂದ ಎರಡೂ ರಾಜ್ಯಗಳ ಜನರು ಸೌಹಾರ್ದಯುತ ಸಂಬಂಧ ಹೊಂದಿದ್ದಾರೆ. ಉದ್ಯೋಗ ಮತ್ತು ಜೀವನೋಪಾಯಕ್ಕಾಗಿ ಒಂದು ರಾಜ್ಯದ ಜನರು ಮತ್ತೊಂದು ರಾಜ್ಯಕ್ಕೆ ತೆರಳಿ ನೆಲೆಸುವುದು ಸಹಜ ಪ್ರಕ್ರಿಯೆ. ಅದರಂತೆ ಕೇರಳದ ಅನೇಕರು ಕೊಡಗು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಉದ್ಯೋಗ, ವ್ಯಾಪಾರ ಮತ್ತು ವಾಣಿಜ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅವರ ದುಡಿಮೆ ರಾಜ್ಯದ ಆರ್ಥಿಕ ಬೆಳವಣಿಗೆಗೂ ಕೊಡುಗೆ ನೀಡುತ್ತಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂಸ್ಕೃತದ ಗೋಡೆ ಕೆಡವಿ ಕನ್ನಡ ಕಟ್ಟಿದ ಕವಿ ಕನಕದಾಸ!

ಕೇವಲ ಭಕ್ತರಾಗಿ ಮಾತ್ರವಲ್ಲದೆ, ಅಡುಗೆಮನೆಯ ಬೀಸುವ ಕಲ್ಲಿನಿಂದ ಹಿಡಿದು ಹೊಲದ ರಾಗಿಯವರೆಗೆ ನಮ್ಮದೇ ನೆಲದ ಉದಾಹರಣೆಗಳ ಮೂಲಕ ಕನ್ನಡ ಭಾಷೆಗೆ ಆಧ್ಯಾತ್ಮಿಕ ಮತ್ತು ಸಾಹಿತ್ಯಿಕ ಘನತೆಯನ್ನು ತಂದುಕೊಟ್ಟ ಮಹಾನ್ ಕ್ರಾಂತಿಕಾರಿ ಕವಿ ಕನಕದಾಸರು. ಭಾಷೆಯೊಂದು...

ಕೊರೆಯುವ ಚಳಿಯಲ್ಲೂ ಮೊಳಗಿದ ಗುಲಾಬಿ ಧ್ವನಿ, ಆಶಾ ಕಾರ್ಯಕರ್ತೆಯರ...

ಒಂದೆಡೆ ಭೋರ್ಗರೆಯುವ ಮಳೆ, ಮತ್ತೊಂದೆಡೆ ಮೈಕೊರೆಯುವ ಚಳಿ. ಪ್ರಕೃತಿಯ ಈ ಪ್ರತಿಕೂಲ ಪರಿಸ್ಥಿತಿಯನ್ನೂ ಲೆಕ್ಕಿಸದೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಾವಿರಾರು ಗುಲಾಬಿ ಸೀರೆಧಾರಿ ಮಹಿಳೆಯರು ನ್ಯಾಯಕ್ಕಾಗಿ ಧ್ವನಿ ಎತ್ತುತ್ತಿದ್ದಾರೆ. ಅವರ ಹೋರಾಟವನ್ನು ನೋಡಿದಾಗ...

ಬಿರುಕು ಬಿಟ್ಟಿದ್ದ ‘ಕೈ’ ಕೋಟೆಗೆ ಒಗ್ಗಟ್ಟಿನ ಶಕ್ತಿ: ರಾಜಸ್ಥಾನ...

ಗೋವಿಂದ್ ಡೋಟಸರ ಮತ್ತು ಟೀಕಾರಾಮ್ ಜುಲ್ಲಿ ಅವರ ನಡುವಣ ಬಾಂಧವ್ಯ ಕೇವಲ ರಾಜಕೀಯ ಅನಿವಾರ್ಯತೆಯಲ್ಲ; ಅದು ಪರಸ್ಪರ ನಂಬಿಕೆ ಮತ್ತು ಪೂರಕ ಸಾಮರ್ಥ್ಯಗಳ ಸಮ್ಮಿಲನವಾಗಿದೆ. ಡೋಟಸರ ಅವರಲ್ಲಿರುವ ಆಕ್ರಮಣಕಾರಿ ಸಂಘಟನಾ ಶೈಲಿ, ಪ್ರಖರ...

ಕರ್ನಾಟಕದಲ್ಲಿ ನೆಲೆಸಿರುವ ಕೇರಳಿಗರು ಸೇರಿದಂತೆ ವಿವಿಧ ರಾಜ್ಯಗಳ ಜನರು ಇಲ್ಲಿನ ಸಂಸ್ಕೃತಿ, ಆಚಾರ-ವಿಚಾರ, ನೆಲ ಮತ್ತು ಜಲವನ್ನು ಗೌರವಿಸುತ್ತಿದ್ದಾರೆ. ತಮ್ಮ ಮೂಲ ಸಂಸ್ಕೃತಿಯನ್ನೂ ಇಲ್ಲಿನ ಜನರೊಂದಿಗೆ ಹಂಚಿಕೊಳ್ಳುವ ಮೂಲಕ ದೇಶದ ಸಾಂಸ್ಕೃತಿಕ ವೈವಿಧ್ಯತೆಯನ್ನು ಮತ್ತಷ್ಟು ಶ್ರೀಮಂತಗೊಳಿಸಿದ್ದಾರೆ. ಕೇರಳಿಗರು ಕರ್ನಾಟಕದ ಸಂಸ್ಕೃತಿಯನ್ನು ಹಾಳು ಮಾಡಿದ್ದಾರೆ ಎಂಬ ಪ್ರತಾಪ್ ಸಿಂಹ ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಹೇಳಿದ್ದಾರೆ.

ತೆಂಗಿನ ಮರವನ್ನು ಭಾರತೀಯರು ಕಲ್ಪವೃಕ್ಷವೆಂದು ಗೌರವಿಸುತ್ತಾರೆ. ಕೇರಳದ ತೆಂಗಿನ ಮರಗಳೂ ಅಷ್ಟೇ ಮಹತ್ವ ಹೊಂದಿವೆ. ಅಲ್ಲಿನ ನೀರು ಕೂಡ ಜೀವಜಲವೇ ಹೊರತು ಕೀಳಾಗಿ ಕಾಣುವ ವಸ್ತುವಲ್ಲ. ಇಂತಹ ವಿಚಾರಗಳ ಕುರಿತು ಪ್ರತಾಪ್ ಸಿಂಹ ಅವರು ನೀಡಿರುವ ಹೇಳಿಕೆ ಅವರ ಘನತೆಗೆ ತಕ್ಕುದಲ್ಲ ಎಂದು ಯಾಕೂಬ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ವಿಶೇಷ ವರದಿ ಓದಿದ್ದೀರಾ? ವನ್ಯಜೀವಿ ಸಂಘರ್ಷದ ಸುಳಿಯಲ್ಲಿ ಅರಣ್ಯದ ಭವಿಷ್ಯ: ಸಂರಕ್ಷಣೆಯ ಹೆಸರಿನಲ್ಲಿ ಹೊಸ ಹಿತಾಸಕ್ತಿಗಳಿಗೆ ಅವಕಾಶವೇ?

ಕೇರಳಿಗರ ಬುದ್ಧಿವಂತಿಕೆಯನ್ನು ಪ್ರಶ್ನಿಸುವ ಬದಲು ಅವರ ಪರಿಶ್ರಮ, ವ್ಯಾಪಾರ ಕೌಶಲ ಮತ್ತು ಸಾಧನೆಯನ್ನು ಗುರುತಿಸಬೇಕು. ಕೇರಳಿಗರು ವಿವಿಧ ಕ್ಷೇತ್ರಗಳಲ್ಲಿ ಸಾಧಿಸಿರುವ ಪ್ರಗತಿಯೇ ಅವರ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ಭಾರತೀಯರು ವಿದೇಶಗಳಲ್ಲಿಯೂ ನೆಲೆಸಿ ಉದ್ಯೋಗ, ವ್ಯಾಪಾರ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಉನ್ನತ ಸ್ಥಾನಗಳನ್ನು ಅಲಂಕರಿಸಿರುವುದು ಜಾಗತಿಕ ಮಟ್ಟದ ಸಹಜ ಬೆಳವಣಿಗೆಯಾಗಿದೆ ಎಂದು ತಿಳಿಸಿದ್ದಾರೆ.

ಈ ವಿಶೇಷ ಲೇಖನ ಓದಿದ್ದೀರಾ? ಸಂವಿಧಾನದ ಆಶಯಗಳ ಅನುಷ್ಠಾನಕ್ಕೆ ಜನಾಂದೋಲನವಾಗಲಿ; ಪ್ರಜಾಪ್ರಭುತ್ವದ ರಕ್ಷಣೆಗೆ ಜನರ ಐಕ್ಯತೆ ಬಲವಾಗಲಿ

ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಜನರ ಮತಗಳನ್ನು ಕೇಳಿದ್ದರು. ಈ ಸಂದರ್ಭದಲ್ಲಿ ಕೇರಳಿಗರ ಮತಗಳನ್ನೂ ಕೋರಿರಲಿಲ್ಲವೇ? ಮತ ನೀಡುವಂತೆ ಅವರಲ್ಲಿ ಮನವಿ ಮಾಡಿರಲಿಲ್ಲವೇ ಎಂದು ಪ್ರಶ್ನಿಸಿರುವ ಯಾಕೂಬ್, ಸಮಾಜದಲ್ಲಿ ಪರಸ್ಪರ ಗೌರವ ಮತ್ತು ಸಹಬಾಳ್ವೆಗೆ ಧಕ್ಕೆ ತರುವ ಹೇಳಿಕೆಗಳನ್ನು ನೀಡುವುದು ಸರಿಯಲ್ಲ. ಪ್ರತಾಪ್ ಸಿಂಹ ಅವರು ತಮ್ಮ ಹೇಳಿಕೆಯನ್ನು ಹಿಂಪಡೆದು, ಕೇರಳಿಗರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಹೋಂವರ್ಕ್ ಮಾಡಿಲ್ಲವೆಂದು ವಿದ್ಯಾರ್ಥಿಗೆ ಥಳಿತ : ಪೋಷಕರ ಆರೋಪ

ಹೋಂವರ್ಕ್ ಮಾಡಿಲ್ಲವೆಂಬ ಕಾರಣಕ್ಕೆ ಎರಡನೇ ತರಗತಿಯ ವಿದ್ಯಾರ್ಥಿಯ ಮೇಲೆ ಶಿಕ್ಷಕರು ಹಲ್ಲೆ...

ದಕ್ಷಿಣ ಕನ್ನಡ | ವಿಮಾನ ಅಪಘಾತದ ಅಣಕು ಕಾರ್ಯಾಚರಣೆ: 117 ಪ್ರಯಾಣಿಕರ ರಕ್ಷಣೆಗೆ ವಿವಿಧ ಇಲಾಖೆಗಳ ಸಮನ್ವಯ

ವಿಮಾನ ಅಪಘಾತದ ಸಂದರ್ಭದಲ್ಲಿ ತುರ್ತು ರಕ್ಷಣಾ ಕಾರ್ಯಾಚರಣೆ ಹಾಗೂ ವಿವಿಧ ಇಲಾಖೆಗಳ...

ದಕ್ಷಿಣ ಕನ್ನಡ | ತಂಬಾಕು ಉತ್ಪನ್ನಗಳಿಗೆ ಲೈಸೆನ್ಸ್: ದ.ಕ. ರಾಜ್ಯದಲ್ಲೇ ಪ್ರಥಮ

ರಾಜ್ಯ ಮಟ್ಟದ ತಂಬಾಕು ಮಾರಾಟ ಮಾಡುವವರಿಗೆ ತಂಬಾಕು ಮಾರಾಟ ಪರವಾನಿಗೆ ನೀತಿ...

ನಶೆಮುಕ್ತ ಶಿವಮೊಗ್ಗ ನಿರ್ಮಾಣಕ್ಕೆ ಮುಸ್ಲಿಂ ಯೂಥ್ ಕೌನ್ಸಿಲ್ ಅಭಿಯಾನ

ನಶೆಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ಶಿವಮೊಗ್ಗ ಮುಸ್ಲಿಂ ಯೂಥ್ ಕೌನ್ಸಿಲ್ ವತಿಯಿಂದ...