ಕೊಡಗು | ಅಪ್ರಾಪ್ತ ಬಾಲಕಿ ಶಿರಚ್ಛೇದ: ‘ತಲೆ ಕಡಿದು ಧ್ವನಿ ಅಡಗಿಸಬಹುದು, ನ್ಯಾಯವನ್ನಲ್ಲ’; ಅಪರಾಧಿಗೆ ಗಲ್ಲು ಶಿಕ್ಷೆ

Date:

ಎರಡು ವರ್ಷಗಳ ಹಿಂದೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ 16 ವರ್ಷದ ಅಪ್ರಾಪ್ತ ಬಾಲಕಿಯ ಶಿರಚ್ಛೇದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿಯ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ. ಪ್ರಕರಣದ ಅಪರಾಧಿ ಎಂ.ಪಿ. ಓಂಕಾರಪ್ಪ ಅಲಿಯಾಸ್ ಪ್ರಕಾಶ್ ಎಂಬಾತನಿಗೆ ಮರಣದಂಡನೆ ಮತ್ತು 80 ಸಾವಿರ ರೂಪಾಯಿ ದಂಡ ವಿಧಿಸಿದೆ.

- Advertisement -

ಪ್ರಕರಣದ ವಿಚಾರಣೆ ನಡೆಸಿರುವ ಮಡಿಕೇರಿಯ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಿ. ಸುರೇಂದ್ರ ಅವರು ತೀರ್ಪು ಪ್ರಕಟಿಸಿದ್ದಾರೆ. “ಅಪರಾಧಿಯು ಬಾಲಕಿಯ ತಲೆ ಕಡಿಯುವ ಮೂಲಕ ಆಕೆಯ ಧ್ವನಿಯನ್ನು ಅಡಗಿಸಲು ಪ್ರಯತ್ನಿಸಿದ್ದಾನೆ. ಆದರೆ ನ್ಯಾಯದ ಧ್ವನಿಯನ್ನು ಹತ್ತಿಕ್ಕಲು ಅವನಿಂದ ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳಾ ಮೀಸಲಾತಿ ಮರೆಯಲ್ಲಿ ಕ್ಷೇತ್ರ ಮರುವಿಂಗಡಣೆ: ವಿರೋಧ ಪಕ್ಷಗಳ...

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ ಕ್ಷೇತ್ರ ಪುನರ್ವಿಂಗಡಣೆಯೊಂದಿಗೆ ತಳುಕು ಹಾಕಿರುವ ಮೋದಿ ಸರ್ಕಾರದ ನಡೆ, ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂಸದೀಯ ಇತಿಹಾಸದಲ್ಲಿಯೇ ಒಂದು ಅಪರೂಪದ ರಾಜಕೀಯ ಹಾಗೂ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ....

ಖಾಸಗಿ ವೈದ್ಯರ ಎಡವಟ್ಟು; ಬಡ ಕುಟುಂಬದ ಆಧಾರ ಸ್ತಂಭ...

ಆತ ಕೂಲಿ‌ ಕೆಲಸ ಮಾಡಿಕೊಂಡು ಹಂಗೊ ಹೆಂಗೋ ಜೀವನ‌ ನಡೆಸಿಕೊಂಡು ಬಂದಿದ್ದ ಚಿರ ಯೌವ್ವನದ ಯುವಕ. ತನ್ನ ಮನೆ ಜವಾಬ್ದಾರಿಯನ್ನು ತನ್ನದೇ ಹೆಗಲ ಮೇಲೆರಿಸಿ ಕಷ್ಟಪಟ್ಟು ದುಡಿದು ತನ್ನ ಇಬ್ಬರು ಸಹೋದರಿಯರಿಗೆ ಮದುವೆಯನ್ನೂ...

ಭಾಷಣಗಳಲ್ಲಿ ಆಗಾಗ ಎಡವಟ್ಟು, ಸುಳ್ಳು-ಅತಿಶಯೋಕ್ತಿಯೇ ಮೇಲುಗೈ: ನವಭಾರತದ ‘ಪಪ್ಪು’...

ಒಂದು ಕಾಲದಲ್ಲಿ ರಾಹುಲ್ ಗಾಂಧಿ ಅವರನ್ನು ಅಪಹಾಸ್ಯ ಮಾಡಲು ಬಳಸುತ್ತಿದ್ದ 'ಪಪ್ಪು' ಎಂಬ ಪದವೇ ಇದೀಗ ಮೋದಿ ಅವರತ್ತ ತಿರುಗಿದೆ. 1987-88ರ ಡಿಜಿಟಲ್ ಕ್ಯಾಮೆರಾ-ಇಮೇಲ್ ಕಥೆಯಿಂದ ಹಿಡಿದು ಐತಿಹಾಸಿಕ ಪ್ರಮಾದಗಳವರೆಗೆ, ಮೋದಿ ಅವರ...

2024ರ ಮೇ 9ರಂದು ಯು.ಎಸ್. ಮೀನಾ ಎಂಬ 16 ವರ್ಷದ ಬಾಲಕಿಯ ಬರ್ಬರ ಹತ್ಯೆ ನಡೆದಿತ್ತು. ಆ ದಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಮೀನಾ ಮತ್ತು ಆಕೆಯ ಕುಟುಂಬದವರು ಸಂಭ್ರಮಾಚರಣೆಯಲ್ಲಿ ತೊಡಗಿದ್ದರು. ಈ ಸಂಭ್ರಮ ಮುಗಿದ ಕೆಲವೇ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿತ್ತು. ಹಮ್ಮಿಯಾಲ ಗ್ರಾಮದ ನಿವಾಸಿಯಾಗಿದ್ದ ಓಂಕಾರಪ್ಪ, ಮೀನಾಳನ್ನು ತನಗೆ ಮದುವೆ ಮಾಡಿಕೊಡುವಂತೆ ಆಕೆಯ ಪೋಷಕರ ಮೇಲೆ ನಿರಂತರವಾಗಿ ಒತ್ತಡ ಹೇರುತ್ತಿದ್ದ. ಅದರಂತೆ ಮೇ 9ರ ಸಂಜೆ ಇಬ್ಬರ ನಿಶ್ಚಿತಾರ್ಥವನ್ನೂ ನಡೆಸಲಾಗಿತ್ತು.
ಬಾಲಕಿಯ ನಿಶ್ಚಿತಾರ್ಥದ ವಿಷಯ ತಿಳಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಆಕೆಗೆ 18 ವರ್ಷ ತುಂಬುವವರೆಗೆ ಮದುವೆ ಮಾಡಬಾರದು ಎಂದು ಓಂಕಾರಪ್ಪ ಮತ್ತು ಮೀನಾಳ ಪೋಷಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಅಧಿಕಾರಿಗಳ ಈ ಮಧ್ಯಪ್ರವೇಶದಿಂದ ತೀವ್ರ ಆಕ್ರೋಶಗೊಂಡ ಓಂಕಾರಪ್ಪ, ಮೀನಾ ಮತ್ತು ಆಕೆಯ ಕುಟುಂಬದವರ ಮೇಲೆ ಹಲ್ಲೆ ನಡೆಸಿದ್ದ.

ಈ ಕುರಿತು ಪೊಲೀಸ್ ಠಾಣೆಗೆ ದೂರು ನೀಡಲು ಮೀನಾ ಮತ್ತು ಆಕೆಯ ತಾಯಿ ಮನೆಯಿಂದ ಹೊರಟಾಗ, ಅವರನ್ನು ಹಿಂಬಾಲಿಸಿದ ಓಂಕಾರಪ್ಪ ಮಚ್ಚಿನಿಂದ ಮಾರಣಾಂತಿಕ ದಾಳಿ ನಡೆಸಿದ್ದನು. ಈ ಭೀಕರ ದಾಳಿಯಲ್ಲಿ ಮೀನಾಳ ಶಿರಚ್ಛೇದ ಮಾಡಿದ ಆತ, ಕತ್ತರಿಸಿದ ತಲೆಯೊಂದಿಗೆ ಸ್ಥಳದಿಂದ ಪರಾರಿಯಾಗಿದ್ದ. ಘಟನೆಯಲ್ಲಿ ಮೀನಾಳ ತಾಯಿಗೂ ಗಂಭೀರ ಗಾಯಗಳಾಗಿದ್ದವು.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನ.24ರಂದು ಪಂಚ ಗ್ಯಾರಂಟಿ ಫಲಾನುಭವಿಗಳ ಸಂಭ್ರಮೋತ್ಸವ

ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದ ಸಂಭ್ರಮ...

ಉಡುಪಿ | ಪತ್ರಿಕಾ ರಂಗದಲ್ಲಿ ನೈಜ ಸತ್ಯ ಹೇಳುವವರ ಅಗತ್ಯವಿದೆ: ಡಾ. ರಾಘವ ನಂಬಿಯಾರ್

ವ್ಯಾವಹಾರಿಕ ಸತ್ಯ ಹೇಳುವವರ ನಡುವೆ ನೈಜ ಸತ್ಯವನ್ನು ಪ್ರತಿಪಾದಿಸುವ ಪತ್ರಕರ್ತರ ಅಗತ್ಯವಿದೆ....

ಉಡುಪಿ | ಜನಪರ ಯೋಜನೆಗಳ ಬಗ್ಗೆ ಬಿಜೆಪಿಗೆ ಹೊಟ್ಟೆಕಿಚ್ಚು: ರಮೇಶ್ ಕಾಂಚನ್

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಚುನಾವಣಾಪೂರ್ವದಲ್ಲಿ ಜನರಿಗೆ ನೀಡಿದ ಭರವಸೆಯಂತೆ ಪಂಚ...

ಅಕ್ಷರ ದಾಸೋಹ ನೌಕರರ ಉದ್ಯೋಗಕ್ಕೆ ಕುತ್ತು: ಕ್ಲಸ್ಟರ್ ಕಿಚನ್ ವಿರುದ್ಧ ರಾಜ್ಯಾದ್ಯಂತ ಹೋರಾಟ

ಸರಕಾರಿ ಶಾಲೆಗಳ ಬಿಸಿಯೂಟ ಯೋಜನೆಯನ್ನು ಖಾಸಗೀಕರಣಗೊಳಿಸಿ, ವರ್ಷಗಳಿಂದ ದುಡಿಯುತ್ತಿರುವ ಅಕ್ಷರ ದಾಸೋಹ...