ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ನೆರವಂಡ ಉಮೇಶ್ ನೇಮಕ

Date:

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಕೊಡಗಿನ ಹಿರಿಯ ಕಲಾವಿದ, ರಂಗಕರ್ಮಿ ಹಾಗೂ ಚಲನಚಿತ್ರ ನಟ ನೆರವಂಡ ಉಮೇಶ್ ಅವರನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

- Advertisement -

ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಬಲ್ಲಮಾವಟ್ಟಿ ಗ್ರಾಮದವರಾದ ನೆರವಂಡ ಉಮೇಶ್ ಅವರು ಕೊಡಗಿನ ಹೆಸರಾಂತ ರಂಗಕರ್ಮಿ ಹಾಗೂ ಹಿರಿಯ ಕಲಾವಿದರಾಗಿ ಗುರುತಿಸಿಕೊಂಡಿದ್ದಾರೆ. ರಂಗಭೂಮಿ ಮತ್ತು ಚಲನಚಿತ್ರ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಅವರು, ಕಲಾ ಮಾಧ್ಯಮದ ಮೂಲಕ ಕೊಡವ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂಸ್ಕೃತಿ, ಉಳಿತಾಯದ ಪಾಠ ಹೇಳಿದ ಮೋದಿ: ಬೆಲೆ ಏರಿಕೆ,...

ಮಕ್ಕಳ ಶಿಕ್ಷಣ, ಮದುವೆ ಮತ್ತು ಮುಪ್ಪಿನ ಕಾಲಕ್ಕಾಗಿ ಹೊಟ್ಟೆಬಟ್ಟೆ ಕಟ್ಟಿ ಉಳಿತಾಯ ಮಾಡುವುದು ಭಾರತೀಯರ ಸಂಸ್ಕೃತಿಯಲ್ಲೇ ಬಂದಿದೆ. ಅವರಿಗೆ ಉಳಿತಾಯದ ಪಾಠ ಕಲಿಸುವ ಅಗತ್ಯವಿಲ್ಲ; ಬದಲಾಗಿ ಬಡತನದಿಂದ ಹೊರಬಂದ ಕುಟುಂಬಗಳು ಮತ್ತೆ ಸಂಕಷ್ಟಕ್ಕೆ...

ಆರ್‌ಟಿಇ ಶಿಕ್ಷಣ ಹಕ್ಕೋ, ಶಾಲೆಗಳಲ್ಲಿನ ಸಾಮಾಜಿಕ ಅಂತರಕ್ಕೆ ಕಾರಣವೋ?

ಶಿಕ್ಷಣದ ಸಮಾನ ಅವಕಾಶದ ಆಶಯಕ್ಕೆ ಸವಾಲಾಗುತ್ತಿರುವ ನಿಯಮಗಳು, ಖಾಸಗೀಕರಣ ಮತ್ತು ಸರ್ಕಾರಿ ಶಾಲೆಗಳ ದುಸ್ಥಿತಿ ಒಂದೇ ಶಾಲೆಯ ಆವರಣ, ಒಂದೇ ತರಗತಿಯ ಕೊಠಡಿ, ಒಂದೇ ಪಠ್ಯಪುಸ್ತಕ, ಒಂದೇ ಶಿಕ್ಷಕರು. ಆದರೆ ಆ ಮಕ್ಕಳ ಹಿನ್ನೆಲೆ...

ಬಿಲ್ಕಿಸ್‌ ಬಾನೋ ‘ಮುಸ್ಲಿಂ’ ಎಂಬ ಕಾರಣಕ್ಕೇ ಪದೇ-ಪದೇ ದೂರವಾಗುತ್ತಿದೆಯೇ...

ಅಪರಾಧಿಗಳ ಹಕ್ಕುಗಳ ಬಗ್ಗೆ ಮಾತನಾಡುವ ನ್ಯಾಯವ್ಯವಸ್ಥೆ, ಸಂತ್ರಸ್ತೆಯ ಬದುಕುವ ಹಕ್ಕು, ಸುರಕ್ಷತೆ ಮತ್ತು ಘನತೆಯನ್ನೂ ಅಷ್ಟೇ ಗಂಭೀರವಾಗಿ ಪರಿಗಣಿಸುತ್ತಿದೆಯೇ? ಬಿಲ್ಕಿಸ್‌ ಬಾನೋ ಪ್ರಕರಣದಲ್ಲಿ ಈ ಪ್ರಶ್ನೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಭಾರತದಲ್ಲಿ ನ್ಯಾಯದ ಮುಂದೆ...

ಈ ವಿಶೇಷ ವರದಿ ಓದಿದ್ದೀರಾ? ಆರ್‌ಟಿಇ ಶಿಕ್ಷಣ ಹಕ್ಕೋ, ಶಾಲೆಗಳಲ್ಲಿನ ಸಾಮಾಜಿಕ ಅಂತರಕ್ಕೆ ಕಾರಣವೋ?

ಈ ಹಿಂದೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ಸೇವೆ ಸಲ್ಲಿಸಿರುವ ಅನುಭವವೂ ಇವರಿಗಿದೆ. ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿಯೂ ಸಕ್ರಿಯರಾಗಿರುವ ಅವರು, ಮಡಿಕೇರಿ ತಾಲ್ಲೂಕು ಪಂಚಾಯಿತಿಯ ಮಾಜಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ.

ಈ ವಿಶೇಷ ಲೇಖನ ಓದಿದ್ದೀರಾ? ತಂಬೂರಿಯ ನಾದದಲ್ಲಿ ಜೀವಂತ ಮಂಟೇಸ್ವಾಮಿ ಪರಂಪರೆ: ಶಿಷ್ಯರು, ಮಹಿಳಾ ಶಕ್ತಿ ಮತ್ತು ಸಮಾನತೆಯ ಬೆಳಕು

ಮಡಿಕೇರಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯು 1994ರಲ್ಲಿ ಸ್ಥಾಪನೆಯಾಗಿದ್ದು, ಕೊಡವ ಭಾಷೆ, ಸಾಹಿತ್ಯ, ಜಾನಪದ ಕಲೆ ಹಾಗೂ ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆ, ಅಭಿವೃದ್ಧಿ ಮತ್ತು ಪ್ರಚಾರಕ್ಕಾಗಿ ಕಾರ್ಯನಿರ್ವಹಿಸುತ್ತಿದೆ.

ಈ ವಿಶೇಷ ಲೇಖನ ಓದಿದ್ದೀರಾ? ಗಾಂಧೀಜಿ ತತ್ವಗಳ ಪ್ರಸ್ತುತತೆ: ಸಮಾನತೆಯ ಸಮಾಜಕ್ಕೆ ಶ್ರಮದ ಘನತೆಯೇ ಅಡಿಪಾಯ

ಈ ಹಿಂದೆ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅವರು ಅಕಾಡೆಮಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ನೆರವಂಡ ಉಮೇಶ್ ಅವರಿಗೆ ಅಧ್ಯಕ್ಷ ಸ್ಥಾನ ಒಲಿದಿದ್ದು, ಕೊಡವ ಭಾಷೆ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಅವರ ಅನುಭವ ಹಾಗೂ ಕಲಾ ಕ್ಷೇತ್ರದ ಸೇವೆ ಮತ್ತಷ್ಟು ಬಲ ನೀಡಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬೆಳೆ ವಿಮಾ ಪರಿಹಾರದಲ್ಲಿ ತಾರತಮ್ಯ : ರೈತರ ಪ್ರತಿಭಟನೆ

ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರ ಹಂಚಿಕೆಯಲ್ಲಿ ಲೋಪವಾಗಿದೆ ಎಂದು ಆರೋಪಿಸಿ...

ಯಾದಗಿರಿ | 11.32 ಟನ್ ಪಡಿತರ ಅಕ್ಕಿ ಜಪ್ತಿ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಕುಟುಂಬಗಳಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಹೋಟೆಲ್‌, ಡಾಬಾಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ; 13 ಗೃಹ ಬಳಕೆಯ ಗ್ಯಾಸ್ ಸಿಲಿಂಡರ್‌ ಜಪ್ತಿ

ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಅಕ್ರಮವಾಗಿ ಬಳಸುತ್ತಿದ್ದ...

ಶಿವಮೊಗ್ಗ | ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕುವೆಂಪು ವಿವಿ ಆಡಳಿತ ಮಂಡಳಿ

ಪರೀಕ್ಷಾ ದಂಡ ಶುಲ್ಕದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕುವೆಂಪು ವಿಶ್ವವಿದ್ಯಾಲಯದ...