ಕೊಡಗು | ಎಸ್‌ಐಆರ್ ಪ್ರಕ್ರಿಯೆಯಿಂದ ಯಾವುದೇ ಅರ್ಹ ಮತದಾರರು ಹೊರಗುಳಿಯಬಾರದು: ಜಿಲ್ಲಾಧಿಕಾರಿ

Date:

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ಯಾವುದೇ ಅರ್ಹ ಮತದಾರರು ಹೊರಗುಳಿಯದಂತೆ ಎಲ್ಲರೂ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಕರೆ ನೀಡಿದರು.

- Advertisement -

ಕೊಡಗು ಜಿಲ್ಲೆ, ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈಗಾಗಲೇ ಗಣತಿ ನಮೂನೆಗಳ ಶೇ.100ರಷ್ಟು ವಿತರಣೆ ಪೂರ್ಣಗೊಂಡಿದ್ದು, ಪ್ರಸ್ತುತ ಅವುಗಳ ಡಿಜಿಟಲೀಕರಣ ಕಾರ್ಯ ವೇಗವಾಗಿ ನಡೆಯುತ್ತಿದೆ. ಡಿಜಿಟಲೀಕರಣದಲ್ಲೂ ಶೇ.100ರಷ್ಟು ಪ್ರಗತಿ ಸಾಧಿಸಲು ರಾಜಕೀಯ ಪಕ್ಷಗಳು, ಬಿಎಲ್‌ಒಗಳು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಿಪಟೂರು | ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ;...

ತಿಪಟೂರು ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ ಜೋರಿದೆ. ಟೆಂಡರ್ ದರ ಒಂದಾದರೆ, ಸುತ್ತಮುತ್ತಲಿನ ಮಾರುಕಟ್ಟೆಗಳಲ್ಲಿ ನೇರ ಖರೀದಿ (URD) ಮತ್ತು ರವಾನೆ ಕೊಬ್ಬರಿ ಖರೀದಿಗೆ ಮತ್ತೊಂದು ಬೆಲೆ ನಿಗದಿಯಾಗಿದೆ. ಅಂಡರ್ ಬಿಲ್ಲಿಂಗ್...

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

ಭಾರತ ಚುನಾವಣಾ ಆಯೋಗವು ಎಸ್‌ಐಆರ್ ಪ್ರಕ್ರಿಯೆಗೆ ಆಗಸ್ಟ್ 8ರವರೆಗೆ ಕಾಲಾವಕಾಶ ನೀಡಿರುವುದರಿಂದ, ಈ ಅವಕಾಶವನ್ನು ಪ್ರತಿಯೊಬ್ಬ ಅರ್ಹ ಮತದಾರರು ಸದುಪಯೋಗಪಡಿಸಿಕೊಳ್ಳಬೇಕು. ಯಾರಾದರೂ ಗಣತಿ ನಮೂನೆ ಪಡೆಯದೇ ಉಳಿದಿದ್ದರೆ ತಕ್ಷಣ ಸಂಬಂಧಿತ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಅವರನ್ನು ಸಂಪರ್ಕಿಸಿ ನಮೂನೆ ಪಡೆದು ಭರ್ತಿ ಮಾಡಿ ಸಲ್ಲಿಸಬೇಕು ಎಂದು ತಿಳಿಸಿದರು.

ಜಿಲ್ಲೆಯ ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 552 ಮತಗಟ್ಟೆಗಳಿದ್ದು, ಬಿಎಲ್‌ಒಗಳು ಮನೆಮನೆಗೆ ತೆರಳಿ ಮತದಾರರಿಗೆ ಗಣತಿ ನಮೂನೆ ವಿತರಿಸಿದ್ದಾರೆ. ಭರ್ತಿ ಮಾಡಿದ ನಮೂನೆಗಳನ್ನು ಸಂಗ್ರಹಿಸಿ ಬಿಎಲ್‌ಒ ಆ್ಯಪ್ ಮೂಲಕ ಡಿಜಿಟಲೀಕರಣ ಮಾಡಲಾಗುತ್ತಿದೆ. ಈ ಪ್ರಕ್ರಿಯೆಯಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದರೆ ತಕ್ಷಣ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಕೊಡಗು ಜಿಲ್ಲೆಯಲ್ಲಿ ಒಟ್ಟು 4,68,657 ಮತದಾರರಿದ್ದು, ಎಲ್ಲರಿಗೂ ಗಣತಿ ನಮೂನೆ ವಿತರಿಸಲಾಗಿದೆ. ಇದುವರೆಗೆ 3,04,805 ಮತದಾರರ ನಮೂನೆಗಳನ್ನು ಡಿಜಿಟಲೀಕರಣಗೊಳಿಸಲಾಗಿದ್ದು, ಶೇ.65.65ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಹೊರಗುಳಿಯದಂತೆ ಪ್ರತಿಯೊಬ್ಬರೂ ತಾವು ಮತ ಚಲಾಯಿಸುವ ಮತಗಟ್ಟೆಗೆ ಭೇಟಿ ನೀಡಿ ಬಿಎಲ್‌ಒಗಳಿಂದ ಮಾಹಿತಿ ಪಡೆದು ಅಗತ್ಯ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಒತ್ತಿಹೇಳಿದರು.

2002ರ ಮತದಾರರ ಪಟ್ಟಿ, ಭಾಗ ಸಂಖ್ಯೆ ಸೇರಿದಂತೆ ವಿವಿಧ ಮಾಹಿತಿಗಳ ಬಗ್ಗೆ ಅನಗತ್ಯ ಗೊಂದಲಕ್ಕೆ ಒಳಗಾಗದೆ, ಸಂಬಂಧಿತ ಮತಗಟ್ಟೆ ವ್ಯಾಪ್ತಿಯ ಅಧಿಕಾರಿಗಳಿಂದ ಮಾಹಿತಿ ಪಡೆದು ಸರಿಯಾದ ವಿವರಗಳೊಂದಿಗೆ ಗಣತಿ ನಮೂನೆ ಭರ್ತಿ ಮಾಡಿ ಸಲ್ಲಿಸುವಂತೆ ಅವರು ಮನವಿ ಮಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್. ಹಾದಿಮನಿ ಮಾತನಾಡಿ, ಜಿಲ್ಲೆಯಲ್ಲಿ ಗಣತಿ ನಮೂನೆಗಳ ವಿತರಣೆ ಶೇ.100ರಷ್ಟು ಪೂರ್ಣಗೊಂಡಿದ್ದು, ಈಗ ಡಿಜಿಟಲೀಕರಣ ಕಾರ್ಯ ನಡೆಯುತ್ತಿದೆ. ಗ್ರಾಮ ಪಂಚಾಯಿತಿ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಮೂಲಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಸ್‌ಐಆರ್ ಪ್ರಕ್ರಿಯೆಗೆ ಸಹಕರಿಸಬೇಕು ಎಂದು ಕೋರಿದರು.

ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಮಾಹಿತಿ ನೀಡಿ, ಮಡಿಕೇರಿ ವಿಧಾನಸಭಾ ಕ್ಷೇತ್ರದ 275 ಮತಗಟ್ಟೆಗಳಲ್ಲಿ 2,38,447 ಮತದಾರರಿಗೆ ಗಣತಿ ನಮೂನೆ ವಿತರಿಸಲಾಗಿದ್ದು, 1,51,768 ನಮೂನೆಗಳ ಡಿಜಿಟಲೀಕರಣ ಪೂರ್ಣಗೊಂಡು ಶೇ.63ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದರು.

ಮತದಾರರ ನೋಂದಣಾಧಿಕಾರಿ ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ್ ಮಾತನಾಡಿ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ 277 ಮತಗಟ್ಟೆಗಳಲ್ಲಿ 2,30,210 ಮತದಾರರಿಗೆ ಗಣತಿ ನಮೂನೆ ವಿತರಿಸಲಾಗಿದ್ದು, 1,54,323 ನಮೂನೆಗಳ ಡಿಜಿಟಲೀಕರಣ ಪೂರ್ಣಗೊಂಡಿದೆ ಎಂದು ವಿವರಿಸಿದರು.

ಸಭೆಯಲ್ಲಿ ಬಿಜೆಪಿ ಮುಖಂಡ ಸಜಿಲ್ ಕೃಷ್ಣ ಹಾಗೂ ಜೆಡಿಎಸ್ ಮುಖಂಡ ಗುಲಾಬಿ ಜನಾರ್ಧನ ಮಾತನಾಡಿ, ತಮ್ಮ ಪಕ್ಷಗಳ ವತಿಯಿಂದ ಎಸ್‌ಐಆರ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದ್ದು, ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ವಿಶೇಷ ಗಮನ ಹರಿಸಲಾಗಿದೆ ಎಂದು ತಿಳಿಸಿದರು.

ಈ ವಿಶೇಷ ಸುದ್ದಿ ಓದಿದ್ದೀರಾ?ಕೊಡಗಿನಲ್ಲಿ ಪಡಿತರಕ್ಕೆ ಜಾತಿ ಪ್ರಮಾಣ ಪತ್ರ ಮ್ಯಾಪಿಂಗ್: ಬಡವರ ಬದುಕಿಗೆ ಹೊಸ ಸಂಕಷ್ಟವೇ?

ಸಭೆಯಲ್ಲಿ ಚುನಾವಣಾ ಶಿರಸ್ತೆದಾರ್ ಮಹೇಶ್, ಅನಿಲ್ ಕುಮಾರ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೈತರ ಬೆನ್ನಿಗೆ ರಾಜ್ಯ ಸರ್ಕಾರ: ಸಚಿವ ಚಲುವರಾಯಸ್ವಾಮಿ ಭರವಸೆ

ರೈತರ ಸಮಸ್ಯೆಗಳಿಗೆ ಸ್ಪಂದಿಸುವುದರಿಂದ ರಾಜ್ಯ ಸರ್ಕಾರ ಹಿಂದೆ ಸರಿಯುವುದಿಲ್ಲ. ರೈತರ ಹಿತ...

ಬಾಗಲಕೋಟೆ | 77 ಪ್ರಕರಣ ದಾಖಲು, 53 ವಾಹನ ಜಪ್ತಿ; 104 ಆರೋಪಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ

ಬಡವರು ಮತ್ತು ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ತಲುಪಬೇಕಾದ ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ...

ಹಾವೇರಿ | ಬರಪೀಡಿತ ಜಿಲ್ಲೆಯ ರೈತರಿಗೆ ಎಕರೆಗೆ ₹30,000 ಪರಿಹಾರ ನೀಡಲು ರೈತರು ಆಗ್ರಹ

"ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ, ಹಿಂಗಾರು ಬಿತ್ತನೆಯೂ ಕಷ್ಟವಾಗಿದೆ....

ಶಿವಮೊಗ್ಗದಲ್ಲಿ ಪರೀಕ್ಷಾ ಅಕ್ರಮ: KSOU ಕೇಂದ್ರದಲ್ಲಿ ಪುಸ್ತಕ, ಮೊಬೈಲ್ ಬಳಸಿ ‘ಕಾಪಿ’ ಮಾಡಲು ಅವಕಾಶ; ವಿಡಿಯೋ ವೈರಲ್

ಶಿವಮೊಗ್ಗದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಪ್ರಾದೇಶಿಕ ಪರೀಕ್ಷಾ ಕೇಂದ್ರದಲ್ಲಿ...