ಪ್ರಜಾಸೇವಾ ಅಭಿಯಾನದಿಂದ ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ: ಶಾಸಕ ಪೊನ್ನಣ್ಣ

Date:

ಸಾರ್ವಜನಿಕರು ಮತ್ತು ಸರ್ಕಾರದ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುವ ಮೂಲಕ ಸರ್ಕಾರದ ವಿವಿಧ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವುದು ಹಾಗೂ ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರಜಾಸೇವಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಈ ಅಭಿಯಾನದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಕರೆ ನೀಡಿದರು.

- Advertisement -

ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲ್ಲೂಕಿನ ಬಲ್ಲಮಾವಟಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ನಾಪೋಕ್ಲು ಹೋಬಳಿ ಮಟ್ಟದ ಪ್ರಜಾಸೇವಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಶ್ರೀನಿವಾಸರಾಜು ದೊಡ್ಡೇರಿ ಅವರ ‘ಬಾಬಾ...

ಕನ್ನಡದ ಅಪರೂಪದ ಬರಹಗಾರ, ಅನುವಾದಕರಾದ ಶ್ರೀನಿವಾಸರಾಜು ದೊಡ್ಡೇರಿ ಅವರು ಅನುವಾದಿಸಿರುವ 'ಬಾಬಾ ಸಾಹೇಬ್' ಕೃತಿಯು ಇಂದು ಭಾನುವಾರ ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ಲೋಕಾರ್ಪಣೆಗೊಳ್ಳಲಿದೆ. ಈ ಕೃತಿಯ ಒಂದು ಆಯ್ದ ಭಾಗ... ಈದಿನ ಓದುಗರಿಗಾಗಿ... 'ಭಾರತದಲ್ಲಿ...

ಒಬಿಸಿ ಮೀಸಲಾತಿ ಮತ್ತು ಕೆನೆಪದರ: ಸುಪ್ರೀಂನ ಮಾರ್ಚ್ ತೀರ್ಪಿನ...

ಒಬಿಸಿ ಮೀಸಲಾತಿ ಸೌಲಭ್ಯ ಪಡೆಯಲು 'ಕೆನೆಪದರ' ನಿರ್ಧರಿಸುವಾಗ ಕೇವಲ ಪೋಷಕರ ವಾರ್ಷಿಕ ವೇತನವನ್ನೇ ಏಕೈಕ ಮಾನದಂಡವಾಗಿ ಪರಿಗಣಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತನ್ನ ಮಾರ್ಚ್ ತೀರ್ಪನ್ನು ಪುನರುಚ್ಚರಿಸಿದೆ. 1993ರ ಮೂಲ ನಿಯಮಗಳೇನು? ಕೆಳಹಂತದ...

ಮೈಕ್ರೋಸಾಫ್ಟ್‌ ಸರ್ವರ್ ಕ್ರಾಶ್; ತಲ್ಲಣಗೊಂಡ ಆನ್‌ ಲೈನ್‌ ಜಗತ್ತು!

ಆಧುನಿಕ ಕಚೇರಿ ವ್ಯವಹಾರ ಮತ್ತು ಡಿಜಿಟಲ್ ಸಂವಹನದ ಬೆನ್ನೆಲುಬಂತಿರುವ ತಂತ್ರಜ್ಞಾನ ದೈತ್ಯ ಮೈಕ್ರೋಸಾಫ್ಟ್‌ನ ಸರ್ವರ್‌ಗಳಲ್ಲಿ ಕಾಣಿಸಿಕೊಂಡ ಅನಿರೀಕ್ಷಿತ ತಾಂತ್ರಿಕ ದೋಷವು ಜಾಗತಿಕ ಮಟ್ಟದಲ್ಲಿ ಭಾರಿ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. ಗುರುವಾರ (ನವೆಂಬರ್ 12) ಸಂಜೆಯಿಂದ...

ಸಾರ್ವಜನಿಕರ ನಿರೀಕ್ಷೆಗಳು ಮತ್ತು ಅವಶ್ಯಕತೆಗಳು ಸಾಕಷ್ಟಿದ್ದು, ಅವುಗಳಿಗೆ ಸ್ಪಂದಿಸುವುದರ ಜತೆಗೆ ಜನರ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಇತ್ಯರ್ಥಪಡಿಸುವುದು ಅತ್ಯಂತ ಮುಖ್ಯವಾಗಿದೆ. ಕ್ಷೇತ್ರದ ವಿವಿಧ ಭಾಗಗಳಲ್ಲಿ ಈಗಾಗಲೇ ಪ್ರಜಾಸೇವಾ ಅಭಿಯಾನ ಆಯೋಜಿಸಲಾಗಿದ್ದು, ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಜನರು ತಮ್ಮ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸ ಮತ್ತು ನಂಬಿಕೆಯನ್ನು ಉಳಿಸಿಕೊಂಡು ಜನಪರವಾಗಿ ಕರ್ತವ್ಯ ನಿರ್ವಹಿಸಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಾರ್ವಜನಿಕರು ಕಂದಾಯ, ವಿದ್ಯುತ್, ರಸ್ತೆ, ಅರಣ್ಯ ಸೇರಿದಂತೆ ವಿವಿಧ ಇಲಾಖೆಗಳ ವ್ಯಾಪ್ತಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಶಾಸಕರು ಹಾಗೂ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕೋರಿ ಮನವಿ ಸಲ್ಲಿಸಿದರು. ಒಟ್ಟು 80 ಅರ್ಜಿಗಳನ್ನು ಸ್ವೀಕರಿಸಲಾಯಿತು.

ಈ ವಿಶೇಷ ಲೇಖನ ಓದಿದ್ದೀರಾ? ಕಾಲಜ್ಞಾನ ಸಾರಿದ ಮಂಟೇದಲಿಂಗಯ್ಯ’: ನೀಲಗಾರರ ಸ್ವರವಚನಗಳಲ್ಲಿ ಅಡಗಿರುವ ಜನಪದ ತತ್ವ

ಈ ಪೈಕಿ ಬಹುತೇಕ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು. ಉಳಿದ ಪ್ರಮುಖ ಸಮಸ್ಯೆಗಳನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ಅಗತ್ಯ ಕ್ರಮ ಕೈಗೊಳ್ಳುವ ಮೂಲಕ ಪರಿಹಾರ ಒದಗಿಸಲಾಗುವುದು ಎಂದು ಸಾರ್ವಜನಿಕರಿಗೆ ಭರವಸೆ ನೀಡಿದರು.

ಈ ವಿಶೇಷ ಲೇಖನ ಓದಿದ್ದೀರಾ? ಹಳೇ ಮೈಸೂರು | ಕಲ್ಯಾಣದಿಂದ ಬೊಪ್ಪೇಗೌಡನಪುರದವರೆಗೆ: ಜನಪದ ಕಾವ್ಯದ ಬೆಳಕಿನಲ್ಲಿ ಮಂಟೇಸ್ವಾಮಿ

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಮಂದ್ರೀರ ಮೋಹನ್ ದಾಸ್, ಅಕ್ರಮ ಸಕ್ರಮ ಸಮಿತಿ ತಾಲ್ಲೂಕು ಅಧ್ಯಕ್ಷ ನೆರವಂಡ ಉಮೇಶ್, ಕಾವೇರಿ ಜಲಾನಯನ ಅಭಿವೃದ್ಧಿ ಮಂಡಳಿ ನಿರ್ದೇಶಕ ಸೂರಜ್ ಹೊಸೂರು, ಡಿಸಿಸಿ ಉಪಾಧ್ಯಕ್ಷ ಅಬ್ದುಲ್ ರೆಹಮಾನ್, ತಹಶೀಲ್ದಾರ್ ಶ್ರೀಧರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶೇಖರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಕಿರುಬನಾಥನ್, ಗೋಪಾಲ್, ಸೆಂಥಿಲ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ಪ್ರಮುಖರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಕಾಣೆಯಾಗಿದ್ದ ವಿದ್ಯಾರ್ಥಿ: ಮೃತದೇಹ ಪತ್ತೆ 

ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಯ ಮೃತದೇಹ ನಗರದ ಹೊರವಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ...

ಶಿರಸಿ | ಸಂಚಾರ ಪೊಲೀಸ್ ಠಾಣೆಯ ಮೂವರು ಹೆಡ್ ಕಾನ್ಸ್‌ಟೇಬಲ್‌ಗಳು ಅಮಾನತು

ಶಿರಸಿ: ಕರ್ತವ್ಯದ ವೇಳೆ ಮೇಲಧಿಕಾರಿಯೊಂದಿಗೆ ಅನುಚಿತವಾಗಿ ವರ್ತಿಸಿ, ಬೆದರಿಕೆ ಹಾಕಿದ ಆರೋಪದ...

ಚಿಕ್ಕಮಗಳೂರು | ಜೇನುನೋಣ ದಾಳಿಗೆ ಕಾರ್ಮಿಕ ಸಾವು 

ತರೀಕೆರೆ ತಾಲೂಕಿನ ಕೋರನಹಳ್ಳಿ ಗ್ರಾಮದಲ್ಲಿ ಹೊಲದಲ್ಲಿ ಬಾಳೆ ಗಿಡಗಳನ್ನು ನೆಡುವ ವೇಳೆ ಏಕಾಏಕಿ...

ಚಿಕ್ಕಮಗಳೂರು | ಕಾಡಾನೆ ಸಂಚಾರ: ಎಚ್ಚರಿಕೆವಹಿಸಲು ಅರಣ್ಯ ಇಲಾಖೆ ಸೂಚನೆ 

ನರಸಿಂಹರಾಜಪುರ ತಾಲೂಕಿನ ಮೆಣಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಕಾಡಾನೆ...