ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮರಗೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ವಿವಿಧ ಸಂಘ-ಸಂಸ್ಥೆಗಳು ಮತ್ತು ಶಾಲಾ-ಕಾಲೇಜುಗಳ ಸಹಯೋಗದಲ್ಲಿ ಮೂರ್ನಾಡು ಹೋಬಳಿ ಮಟ್ಟದ ಕನ್ನಡ ರಾಜ್ಯೋತ್ಸವ ಹಾಗೂ ಕನ್ನಡ ಹಬ್ಬವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ, ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಇಂತಹ ಕಾರ್ಯಕ್ರಮಗಳು ಕನ್ನಡದ ಶ್ರೀಮಂತ ಇತಿಹಾಸ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದರ ಜೊತೆಗೆ, ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆಯ ಬಗ್ಗೆ ಅಭಿಮಾನ, ಪ್ರೀತಿ ಹಾಗೂ ಗೌರವ ಬೆಳೆಸಲು ಸಹಕಾರಿಯಾಗಿವೆ. ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಈ ವಿಶೇಷ ವರದಿ ಓದಿದ್ದೀರಾ? ಬರಗಾಲ | ಮಳೆಯ ಕೊರತೆಗೆ ಬತ್ತಿದ ಕಾಡಿನ ಕೆರೆಗಳು: ನೀರಿಗಾಗಿ ಪರದಾಡುವ ವನ್ಯಜೀವಿಗಳು
ಕಾರ್ಯಕ್ರಮದಲ್ಲಿ ಕನ್ನಡಾಭಿಮಾನಿಗಳು, ಸಾಹಿತ್ಯಾಸಕ್ತರು, ಶಿಕ್ಷಕರು, ವಿದ್ಯಾರ್ಥಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸ್ಥಳೀಯ ಪ್ರಮುಖರು ಇದ್ದರು.



