ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

Date:

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಸರ್ವೇಕ್ಷಣಾ ಸಮಿತಿ ಸಭೆಯಲ್ಲಿ ಜಿಲ್ಲೆಯಲ್ಲಿ ಡೆಂಗ್ಯೂ ಸೇರಿದಂತೆ ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣ, ನಾಯಿ ಕಡಿತ ಪ್ರಕರಣಗಳು, ಆಸ್ಪತ್ರೆಗಳ ಸ್ವಚ್ಛತೆ, ವೈದ್ಯಕೀಯ ತ್ಯಾಜ್ಯ ನಿರ್ವಹಣೆ, ತಂಬಾಕು ನಿಯಂತ್ರಣ, ಎಚ್‌ಐವಿ ತಡೆಗಟ್ಟುವಿಕೆ ಹಾಗೂ ಎಚ್‌ಪಿವಿ ಲಸಿಕಾ ಅಭಿಯಾನದ ಪ್ರಗತಿಯನ್ನು ಸಭೆಯಲ್ಲಿ ಪರಿಶೀಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಜ್ವರದ ಲಕ್ಷಣ ಹೊಂದಿದ್ದವರ 2,502 ರಕ್ತದ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, 42 ಡೆಂಗ್ಯೂ ಪ್ರಕರಣಗಳು ದೃಢಪಟ್ಟಿವೆ ಎಂದು ತಿಳಿಸಿದರು. ಮುಂಗಾರು ಅವಧಿಯಲ್ಲಿ ಸೊಳ್ಳೆಜನಿತ ರೋಗಗಳ ಹರಡುವಿಕೆ ತಡೆಯಲು ಮನೆಮನೆ ಸಮೀಕ್ಷೆ, ಸೊಳ್ಳೆಗಳ ಲಾರ್ವಾ ನಾಶ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಕೈಗೊಳ್ಳಲಾಗಿದೆ ಎಂದರು.

2026ರ ಸೆಪ್ಟೆಂಬರ್ ಅಂತ್ಯದವರೆಗೆ ಜಿಲ್ಲೆಯಲ್ಲಿ ಒಟ್ಟು 999 ನಾಯಿ ಕಡಿತ ಪ್ರಕರಣಗಳು ವರದಿಯಾಗಿವೆ. ನಾಯಿ ಹಾಗೂ ಇತರ ಪ್ರಾಣಿಗಳ ಕಡಿತಕ್ಕೆ ಒಳಗಾದವರಿಗೆ ತಕ್ಷಣ ಚಿಕಿತ್ಸೆ ನೀಡಲು ಅಗತ್ಯವಿರುವ ಆಂಟಿ ರೇಬೀಸ್ ಲಸಿಕೆ ಮತ್ತು ಇಮ್ಯುನೊಗ್ಲೋಬ್ಯುಲಿನ್‌ ಔಷಧಗಳು ಸಮರ್ಪಕವಾಗಿ ಲಭ್ಯವಿರುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಆಸ್ಪತ್ರೆಗಳಲ್ಲಿ ಸ್ವಚ್ಛತೆ, ನೈರ್ಮಲ್ಯ ಹಾಗೂ ಸೋಂಕು ನಿಯಂತ್ರಣಕ್ಕೆ ಆದ್ಯತೆ ನೀಡಬೇಕು. ವೈದ್ಯಕೀಯ ತ್ಯಾಜ್ಯವನ್ನು ನಿಯಮಾನುಸಾರ ವಿಂಗಡಿಸಿ ವಿಲೇವಾರಿ ಮಾಡುವುದರ ಜತೆಗೆ, ರೋಗಿಗಳಿಗೆ ಸುರಕ್ಷಿತ ವಾತಾವರಣ ಕಲ್ಪಿಸಬೇಕು ಎಂದು ಸೂಚಿಸಿದರು.

ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ 2026ರ ಏಪ್ರಿಲ್‌ನಿಂದ ಸೆಪ್ಟೆಂಬರ್‌ವರೆಗೆ ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆಯಡಿ 64 ದಾಳಿ ನಡೆಸಲಾಗಿದೆ. ನಿಯಮ ಉಲ್ಲಂಘಿಸಿದವರಿಂದ ಒಟ್ಟು 1,09,700 ರೂ. ದಂಡ ಸಂಗ್ರಹಿಸಲಾಗಿದೆ ಎಂದು ಡಾ. ಸತೀಶ್ ಕುಮಾರ್ ಮಾಹಿತಿ ನೀಡಿದರು. ಜಿಲ್ಲೆಯ 593 ಶಾಲೆಗಳ ಪೈಕಿ 327 ಶಾಲೆಗಳು ಹಾಗೂ 65 ಕಾಲೇಜುಗಳ ಪೈಕಿ 15 ಕಾಲೇಜುಗಳು ತಂಬಾಕು ಮುಕ್ತ ಶಿಕ್ಷಣ ಸಂಸ್ಥೆಗಳ ತಂತ್ರಾಂಶದಲ್ಲಿ ನೋಂದಣಿಯಾಗಿವೆ. ತಂಬಾಕು ಮಾರಾಟಕ್ಕೆ ಪರವಾನಗಿ ಕಡ್ಡಾಯಗೊಳಿಸುವುದು ಹಾಗೂ ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ತಂಬಾಕು ನಿಷೇಧಿತ ಪ್ರದೇಶ ಎಂಬ ಫಲಕ ಅಳವಡಿಸುವ ಕುರಿತು ಕ್ರಮ ಕೈಗೊಳ್ಳಲಾಗಿದೆ ಎಂದರು.

ಎಚ್‌ಐವಿ ಸೋಂಕಿನ ಹರಡುವಿಕೆ ತಡೆಯಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಸೋಂಕಿನ ಪರೀಕ್ಷೆ, ಚಿಕಿತ್ಸೆ ಹಾಗೂ ಸಮಾಲೋಚನೆ ಸೇವೆಗಳನ್ನು ಬಲಪಡಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. 2026ರ ಡಿಸೆಂಬರ್ 1ರೊಳಗೆ ರಾಜ್ಯದ ಎಲ್ಲ ಜಿಲ್ಲೆಗಳನ್ನು ಸುರಕ್ಷಿತ ಪ್ಲಸ್ ಜಿಲ್ಲೆಗಳನ್ನಾಗಿ ರೂಪಿಸುವ ಗುರಿ ಹೊಂದಲಾಗಿದ್ದು, ಕೊಡಗು ಜಿಲ್ಲೆಯಲ್ಲಿಯೂ ಈ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಈ ವೀಡಿಯೊ ವೀಕ್ಷಿಸಿ: https://youtu.be/LjQ1qNssx5g?si=y5cdupVPajc7Fdi–

ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಉದ್ದೇಶದಿಂದ ನಡೆಯುತ್ತಿರುವ ಎಚ್‌ಪಿವಿ ಲಸಿಕಾ ಅಭಿಯಾನದಲ್ಲಿ ಅಕ್ಟೋಬರ್ 6ರವರೆಗೆ ಕೊಡಗು ಜಿಲ್ಲೆಯಲ್ಲಿ ಶೇ.70.79ರಷ್ಟು ಪ್ರಗತಿ ಸಾಧಿಸಲಾಗಿದೆ. ಒಟ್ಟು 5,276 ಲಸಿಕೆ ನೀಡುವ ಗುರಿಯ ಪೈಕಿ 3,735 ಮಂದಿ ಲಸಿಕೆ ಪಡೆದಿದ್ದಾರೆ. ಸೋಮವಾರಪೇಟೆ ತಾಲೂಕು ಶೇ.74.88ರಷ್ಟು ಪ್ರಗತಿಯೊಂದಿಗೆ ಮುಂಚೂಣಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದರು. ವಿದ್ಯಾರ್ಥಿನಿಯರಲ್ಲಿ ಎಚ್‌ಪಿವಿ ಲಸಿಕೆಯ ಮಹತ್ವದ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ಸಲಹೆ ನೀಡಿದರು.

ಈ ವಿಶೇಷ ವರದಿ ಓದಿದ್ದೀರಾ? ಮೈಸೂರು | ಬರದ ನಾಡಿನಲ್ಲಿ ದಸರಾ ಸಂಭ್ರಮ! ಕಂಬಳ ಮುಖ್ಯವೋ, ಅನ್ನದಾತನ ಬದುಕೋ?

ಸಭೆಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಶ್ರೀನಿವಾಸ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಸನತ್ ಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ನಂಜುಂಡಯ್ಯ, ಡಾ. ಅನಿಲ್ ಧವನ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಕೆ. ಶಾಂತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

9 ವರ್ಷಗಳಲ್ಲಿ ಕೇವಲ 1,500 ರೂ. ಹೆಚ್ಚಳ! ಸೂಕ್ತ ಗೌರವಧನ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಕಳೆದ ಹಲವು ತಿಂಗಳುಗಳಿಂದ ಬಾಕಿ ಉಳಿದಿರುವ ಪ್ರೋತ್ಸಾಹಧನವನ್ನು ತಕ್ಷಣ ಬಿಡುಗಡೆ ಮಾಡಬೇಕು,...

ಕೋಲಾರ | ಮದನಹಳ್ಳಿಯಲ್ಲಿ ತಿಪ್ಪೆ ವಿಚಾರವಾಗಿ ಗಲಾಟೆ: ಐವರ ಮೇಲೆ ಹಲ್ಲೆ ಆರೋಪ

ತಿಪ್ಪೆ ವಿಚಾರವಾಗಿ ಉಂಟಾದ ಗಲಾಟೆಯಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನರಸಿಂಹನಾಯಕ್...

ಕೋಲಾರ | ಜಿಲ್ಲೆಯಲ್ಲಿ ಶೇ. 10 ರಷ್ಟು ಮಾತ್ರ ಅರಣ್ಯ ಶೇ 4 ಅರಣ್ಯ ಒತ್ತುವರಿ : ಸರೀನಾ ಸಿಕ್ಕಲಿಗರ್

ಜಿಲ್ಲೆಯಲ್ಲಿ ಕೇವಲ ಶೇ.10 ರಷ್ಟು ಮಾತ್ರ ಅರಣ್ಯ ಉಳಿದಿದ್ದು, ಅದರಲೂ ಸಹ...

ಹಾಸನ | SIR ರದ್ದು;,ಗ್ಯಾನೇಶ್ ಕುಮಾರ್ ವಜಾಕ್ಕೆ DYFI, SFI, AIDSO ಆಗ್ರಹ

ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...