ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯವನ್ನು ಖಂಡಿಸಿ ಮಹಿಳಾ ಕ್ರಾಂತಿಕರಿ ಸಂಘಟನೆಯ ಕಾರ್ಯಕರ್ತರು ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿದ, ಸಾಮೂಹಿಕ ಅತ್ಯಾಚಾರ ಎಸಗಿದ ದುರುಳರನ್ನು ಗಲ್ಲಿಗೇರಿಸಬೇಕು. ಸೌಜನ್ಯ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆಯಾಗಬೇಕು. ದೆಹಲಿ, ಹರಿಯಾಣದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವವರನ್ನು ಬಂಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
ಕರ್ನಾಟಕ ರೈತ ಸಂಘದ ರಾಜ್ಯ ಕಾರ್ಯದರ್ಶಿಗಳಾದ ಡಿಎಸ್ ನಿರ್ವಹಣಪ್ಪ ಮಾತನಾಡಿ, “ಧರ್ಮಸ್ಥಳದ ಸೌಜನ್ಯ ಹತ್ಯೆ ಹಾಗೂ ದೇಶದಾದ್ಯಂತ ಮಹಿಳೆಯರ ಮೇಲಿನ ಬರ್ಬರ ಹತ್ಯೆಗಳು ಸಮಾಜ ತಲೆತಗ್ಗಿಸುವಂತೆ ಮಾಡಿವೆ. ಸನಾತನ ಧರ್ಮದಿಂದ ಹಿಂದುತ್ವವಾದಿಗಳು ಹುಸಿ ದೇಶಪ್ರೇಮದೊಂದಿಗೆ, ಭಾರತ ಮಾತೆಯರನ್ನು ಬಲಿಕೊಡುತ್ತಿದ್ದಾರೆ” ಎಂದು ಕಿಡಿಕಾರಿದರು.
ಪ್ರತಿಭಟನೆಯಲ್ಲಿ ಕೆ ಬಿ ರಾಜು, ಡಿ ಎಸ್ ನಿವಾರ್ಣಪ್ಪ, ರೆಡು ಕಾಡು ಅನಿತಾ, ಸೌಮ್ಯ, ಸೌಂದರ್ಯ, ಸುಶೀಲ, ಪ್ರಕಾಶ್, ಸುರೇಶ್ ಕುಮಾರ್, ಗೋವಿಂದ್, ಗೋಪಾಲಕೃಷ್ಣ ಸೇರಿದಂತೆ ಹಲವರು ಇದ್ದರು.