ಕೊಡಗು | ಹಸ್ತಪ್ರತಿ ಸಂರಕ್ಷಣೆ–ಡಿಜಿಟಲೀಕರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಜಿಲ್ಲಾಧಿಕಾರಿ

Date:

ಕೊಡಗು ಜಿಲ್ಲೆ ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಸ್ತಪ್ರತಿಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣ ಕಾರ್ಯಯೋಜನೆ ಅನುಷ್ಠಾನ ಕುರಿತು ಪೂರ್ವಭಾವಿ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ಎಸ್.ಜೆ. ಸೋಮಶೇಖರ್, ಪ್ರಾಚೀನ ಹಸ್ತಪ್ರತಿ ಸಮೀಕ್ಷೆ ಹಾಗೂ ಡಿಜಿಟಲೀಕರಣ ಕಾರ್ಯಕ್ಕೆ ಸಾರ್ವಜನಿಕರು ಕೈಜೋಡಿಸುವಂತೆ ಮನವಿ ಮಾಡಿದರು.

- Advertisement -

‘ಜ್ಞಾನ ಭಾರತಂ ಮಿಷನ್’ ಯೋಜನೆಯಡಿ ಹಸ್ತಪ್ರತಿಗಳ ಸಮೀಕ್ಷೆ ಈಗಾಗಲೇ ಆರಂಭವಾಗಿದ್ದು, ಮೇ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಹಸ್ತಪ್ರತಿಗಳು ಇತಿಹಾಸ, ಸಾಹಿತ್ಯ, ಸಂಸ್ಕೃತಿ ಹಾಗೂ ಜ್ಞಾನದ ಮೂಲ ಆಧಾರವಾಗಿದ್ದು, ಪೂರ್ವಜರ ಬೌದ್ಧಿಕ ಸಂಪತ್ತಿನ ದಾಖಲೆಯಾಗಿದೆ. ಆದ್ದರಿಂದ ತಾಳೆಗರಿ, ಕಾಗದ ಸೇರಿದಂತೆ ವಿವಿಧ ವಸ್ತುಗಳ ಮೇಲೆ ಲಿಖಿತವಾಗಿರುವ ದಾಖಲೆಗಳನ್ನು ಸಂರಕ್ಷಿಸುವುದು ಅತ್ಯಗತ್ಯ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೊಡಗು ಜಿಲ್ಲೆಗೆ ಸಮೃದ್ಧ ಐತಿಹಾಸಿಕ ಹಿನ್ನಲೆ ಇರುವುದರಿಂದ, ಇಲ್ಲಿನ ಪುರಾತನ ಹಸ್ತಪ್ರತಿಗಳನ್ನು ಸಂಗ್ರಹಿಸಿ ಡಿಜಿಟಲೀಕರಣಗೊಳಿಸುವುದು ಅಗತ್ಯವಾಗಿದೆ. ಹಸ್ತಪ್ರತಿಗಳು ಪುರಾಣ, ಕಾವ್ಯ, ವ್ಯಾಕರಣ, ಆಯುರ್ವೇದ ಹಾಗೂ ದರ್ಶನಶಾಸ್ತ್ರಗಳ ಅಪೂರ್ವ ಜ್ಞಾನವನ್ನು ಒಳಗೊಂಡಿದ್ದು, ಹಳಗನ್ನಡ ಮತ್ತು ಇತರೆ ಭಾಷೆಗಳ ಲಿಪಿ ಹಾಗೂ ಶೈಲಿಯನ್ನು ಅರ್ಥಮಾಡಿಕೊಳ್ಳಲು ಸಹಕಾರಿಯಾಗಿವೆ ಎಂದು ವಿವರಿಸಿದರು.

ಹಸ್ತಪ್ರತಿಗಳು ಪೂರ್ವಜರ ನಂಬಿಕೆಗಳು, ಆಚರಣೆಗಳು ಮತ್ತು ಜೀವನ ಶೈಲಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಸೇತುವೆಯಾಗಿವೆ. ಹಸ್ತಪ್ರತಿಗಳಲ್ಲಿನ ಬರಹ ಮತ್ತು ಚಿತ್ರಕಲೆ ಆ ಕಾಲದ ಕಲಾ ಪ್ರೌಢಿಮೆಯನ್ನು ಪ್ರತಿಬಿಂಬಿಸುತ್ತವೆ. ಆದ್ದರಿಂದ ತಕ್ಷಣವೇ ಹಸ್ತಪ್ರತಿ ಸಂಗ್ರಹ ಕಾರ್ಯ ಕೈಗೊಳ್ಳಬೇಕು ಎಂದು ಸೂಚಿಸಿದರು. ಇತಿಹಾಸ ತಜ್ಞರು, ಸಾಹಿತ್ಯಾಸಕ್ತರು ಹಾಗೂ ಹಿರಿಯರನ್ನು ಆಹ್ವಾನಿಸಿ ಹಸ್ತಪ್ರತಿಗಳನ್ನು ಪಡೆದು ಸ್ಕ್ಯಾನ್ ಮಾಡಿ ವಾಪಸ್ಸು ನೀಡುವ ವ್ಯವಸ್ಥೆ ಮಾಡಬೇಕು ಎಂದು ಸಲಹೆ ನೀಡಿದರು.

ಹಸ್ತಪ್ರತಿಗಳ ಸಂರಕ್ಷಣೆಗಾಗಿ ವ್ಯವಸ್ಥಿತ ಸಮೀಕ್ಷೆ, ವೈಜ್ಞಾನಿಕ ಸಂರಕ್ಷಣೆ ಮತ್ತು ಡಿಜಿಟಲೀಕರಣ ಅಗತ್ಯವಾಗಿದ್ದು, 2025-26ರ ಬಜೆಟ್‌ನಲ್ಲಿ ‘ಜ್ಞಾನ ಭಾರತಂ ಮಿಷನ್’ ಯೋಜನೆ ಘೋಷಿಸಿರುವುದಾಗಿ ಹೇಳಿದರು.

ಮನೆಯಲ್ಲಿ ಅಥವಾ ಸುತ್ತಮುತ್ತಲಿನ ಪ್ರದೇಶದಲ್ಲಿ ಲಭ್ಯವಾಗುವ ಹಸ್ತಪ್ರತಿಗಳ ಮಾಹಿತಿಯನ್ನು ‘ಜ್ಞಾನ ಭಾರತಂ’ ಆ್ಯಪ್ ಮೂಲಕ ಅಪ್ಲೋಡ್ ಮಾಡುವುದರ ಮೂಲಕ ಸಾರ್ವಜನಿಕರು ನೇರವಾಗಿ ಸಮೀಕ್ಷೆಯಲ್ಲಿ ಭಾಗವಹಿಸಬಹುದು. ಅಥವಾ ಜಿಲ್ಲಾ ಮಟ್ಟದ ಸಮೀಕ್ಷಾ ಸದಸ್ಯರಿಗೆ ಮಾಹಿತಿ ನೀಡಬಹುದಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪುರಾತತ್ವ ಹಾಗೂ ಪ್ರಾಚ್ಯವಸ್ತು ಇಲಾಖೆಯ ಕ್ಯೂರೇಟರ್ ರೇಖಾ ಮಾತನಾಡಿ, ಓಂಕಾರೇಶ್ವರ ದೇವಾಲಯ, ಪಾಲೂರು ಮಹಾಲಿಂಗೇಶ್ವರ ದೇವಾಲಯ, ಅರಮೇರಿ ಮಠ, ಕಿರಿಕೊಡ್ಲಿ ಮಠ, ಐನ್‌ಮನೆಗಳು ಹಾಗೂ ಧವಸ ಭಂಡಾರಗಳಲ್ಲಿ ಹಸ್ತಪ್ರತಿಗಳು ದೊರೆಯುವ ಸಾಧ್ಯತೆ ಇದೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?ಮೈಸೂರು | ಜಿಲ್ಲಾ ಅಭಿವೃದ್ಧಿ ಸಭೆಯಲ್ಲಿ ಯೋಜನೆಗಳ ಶೇ.100 ಸಾಧನೆಗೆ ಸೂಚನೆ

ಜ್ಞಾನ ಭಾರತ ಮಿಷನ್ ಜಿಲ್ಲಾ ಸಮನ್ವಯಾಧಿಕಾರಿ ಕಾರ್ತಿಕೇಯನ್, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ. ರಾಘವ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಮಾಲೋಚಕ ಜತೀನ್ ಸೇರಿದಂತೆ ಇತರರು ಸಭೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...