ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಪ್ರಮಾಣದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಗಣನೀಯ ಇಳಿಕೆ ಕಂಡುಬಂದಿದ್ದು, ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಸರಾಸರಿ 1.92 ಮಿ.ಮೀ. ಮಳೆಯಾಗಿದೆ.
ಕಳೆದ ವರ್ಷ ಇದೇ ದಿನ ಜಿಲ್ಲೆಯಲ್ಲಿ 24.70 ಮಿ.ಮೀ. ಮಳೆಯಾಗಿತ್ತು. ಪ್ರಸಕ್ತ ಸಾಲಿನಲ್ಲಿ ಜನವರಿಯಿಂದ ಸೆ.4ರವರೆಗೆ ಒಟ್ಟು 1,423.39 ಮಿ.ಮೀ. ಮಳೆಯಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 2,656.81 ಮಿ.ಮೀ. ಮಳೆಯಾಗಿತ್ತು. ಇದರಿಂದ ಪ್ರಸಕ್ತ ಸಾಲಿನಲ್ಲಿ ಮಳೆಯ ಕೊರತೆ ಸ್ಪಷ್ಟವಾಗಿದೆ.
ಮಡಿಕೇರಿ ತಾಲ್ಲೂಕಿನಲ್ಲಿ ಕಳೆದ 24 ಗಂಟೆಗಳಲ್ಲಿ 1.90 ಮಿ.ಮೀ. ಮಳೆಯಾಗಿದ್ದು, ಕಳೆದ ವರ್ಷ ಇದೇ ದಿನ 38.95 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇದುವರೆಗೆ 2,348.62 ಮಿ.ಮೀ. ಮಳೆಯಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 4,006.73 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ 1.05 ಮಿ.ಮೀ. ಮಳೆಯಾಗಿದ್ದು, ಕಳೆದ ವರ್ಷ ಇದೇ ದಿನ 18.75 ಮಿ.ಮೀ. ಮಳೆಯಾಗಿತ್ತು. ಪ್ರಸಕ್ತ ಸಾಲಿನಲ್ಲಿ 1,259.42 ಮಿ.ಮೀ. ಮಳೆಯಾಗಿದ್ದರೆ, ಕಳೆದ ವರ್ಷ 2,384.80 ಮಿ.ಮೀ. ಮಳೆಯಾಗಿತ್ತು.
ಪೊನ್ನಂಪೇಟೆ ತಾಲ್ಲೂಕಿನಲ್ಲಿ 3.52 ಮಿ.ಮೀ. ಮಳೆಯಾಗಿದ್ದು, ಕಳೆದ ವರ್ಷ ಇದೇ ದಿನ 26.10 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇದುವರೆಗೆ 1,291.01 ಮಿ.ಮೀ. ಮಳೆಯಾಗಿದ್ದು, ಕಳೆದ ವರ್ಷ 2,454.09 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ 1.75 ಮಿ.ಮೀ. ಮಳೆಯಾಗಿದ್ದು, ಕಳೆದ ವರ್ಷ ಇದೇ ದಿನ 30.90 ಮಿ.ಮೀ. ಮಳೆಯಾಗಿತ್ತು. ಪ್ರಸಕ್ತ ಸಾಲಿನಲ್ಲಿ 1,576.90 ಮಿ.ಮೀ. ಮಳೆಯಾಗಿದ್ದು, ಕಳೆದ ವರ್ಷ 3,056.72 ಮಿ.ಮೀ. ಮಳೆಯಾಗಿತ್ತು.
ಕುಶಾಲನಗರ ತಾಲ್ಲೂಕಿನಲ್ಲಿ 1.40 ಮಿ.ಮೀ. ಮಳೆಯಾಗಿದ್ದು, ಕಳೆದ ವರ್ಷ ಇದೇ ದಿನ 8.80 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇದುವರೆಗೆ 640.79 ಮಿ.ಮೀ. ಮಳೆಯಾಗಿದ್ದು, ಕಳೆದ ವರ್ಷ 1,381.69 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಮಡಿಕೇರಿ 3.60, ನಾಪೋಕ್ಲು 1.30, ಸಂಪಾಜೆ 1.70, ಭಾಗಮಂಡಲ 1.00, ವಿರಾಜಪೇಟೆ 0.70, ಅಮ್ಮತ್ತಿ 1.40, ಹುದಿಕೇರಿ 5.70, ಶ್ರೀಮಂಗಲ 1.70, ಪೊನ್ನಂಪೇಟೆ 2.20, ಬಾಳೆಲೆ 4.50, ಸೋಮವಾರಪೇಟೆ 0.40, ಶನಿವಾರಸಂತೆ 0.10, ಶಾಂತಳ್ಳಿ 5.40, ಕೊಡ್ಲಿಪೇಟೆ 1.10, ಕುಶಾಲನಗರ 0.20 ಹಾಗೂ ಸುಂಟಿಕೊಪ್ಪದಲ್ಲಿ 2.60 ಮಿ.ಮೀ. ಮಳೆಯಾಗಿದೆ.
ಕೊಡಗು ಜಿಲ್ಲೆಯ ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಸೆ.4ರಂದು ಜಲಾಶಯದಲ್ಲಿ 2,858.43 ಅಡಿ ನೀರಿನ ಮಟ್ಟ ದಾಖಲಾಗಿದೆ. ಕಳೆದ ವರ್ಷ ಇದೇ ದಿನ 2,858.47 ಅಡಿ ನೀರಿನ ಮಟ್ಟವಿತ್ತು.
ಜಲಾಶಯಕ್ಕೆ ಪ್ರಸ್ತುತ 1,303 ಕ್ಯುಸೆಕ್ ನೀರು ಒಳಹರಿವು ಇದ್ದು, ನದಿಗೆ 900 ಕ್ಯುಸೆಕ್ ಹಾಗೂ ನಾಲೆಗೆ 800 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಕಳೆದ ವರ್ಷ ಇದೇ ದಿನ ಜಲಾಶಯಕ್ಕೆ 5,672 ಕ್ಯುಸೆಕ್ ಒಳಹರಿವು ಇದ್ದು, ನದಿಗೆ 5,500 ಕ್ಯುಸೆಕ್ ಹಾಗೂ ನಾಲೆಗೆ 500 ಕ್ಯುಸೆಕ್ ನೀರು ಹೊರಬಿಡಲಾಗಿತ್ತು.
ಈ ವಿಶೇಷ ಸುದ್ದಿ ಓದಿದ್ದೀರಾ? ‘ಓದಿನಲ್ಲಿ ಜೀವ, ಓದಿನಲ್ಲೇ ಜೀವನ’
ಮಳೆಯ ಪ್ರಮಾಣದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ತೀವ್ರ ಇಳಿಕೆ ಕಂಡುಬಂದಿದ್ದರೂ, ಹಾರಂಗಿ ಜಲಾಶಯದ ನೀರಿನ ಮಟ್ಟ ಗರಿಷ್ಠ ಮಟ್ಟದ ಸಮೀಪದಲ್ಲಿರುವುದು ಜಿಲ್ಲೆಯ ನೀರಿನ ಪರಿಸ್ಥಿತಿಗೆ ಪ್ರಮುಖ ಅಂಶವಾಗಿದೆ.





