ಕೊಡಗು ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30 ಗಂಟೆಗೆ ಕೊನೆಗೊಂಡ ಕಳೆದ 24 ಗಂಟೆಗಳ ಅವಧಿಯಲ್ಲಿ ಸರಾಸರಿ 2.49 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ ಜಿಲ್ಲೆಯಲ್ಲಿ 8.54 ಮಿ.ಮೀ. ಮಳೆಯಾಗಿದ್ದು, ಈ ಬಾರಿ ಮಳೆಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ.
ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ ಒಟ್ಟು 281.93 ಮಿ.ಮೀ. ಮಳೆಯಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 1073.93 ಮಿ.ಮೀ ಮಳೆಯಾಗಿತ್ತು. ಇದರಿಂದ ಪ್ರಸಕ್ತ ವರ್ಷ ಮಳೆಯ ಪ್ರಮಾಣ ಕಳೆದ ವರ್ಷದ ಹೋಲಿಕೆಯಲ್ಲಿ ಬಹಳಷ್ಟು ಕುಸಿದಿರುವುದು ಕಂಡುಬಂದಿದೆ.
ತಾಲ್ಲೂಕುವಾರು ಮಳೆ ವಿವರದಲ್ಲಿ ಮಡಿಕೇರಿ ತಾಲ್ಲೂಕಿನಲ್ಲಿ ಅತಿ ಹೆಚ್ಚು 9.10 ಮಿ.ಮೀ. ಸರಾಸರಿ ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 13.05 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗೆ 433.47 ಮಿಲಿ ಮೀಟರ್ ಮಳೆಯಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 1614.05 ಮಿ.ಮೀ. ದಾಖಲಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ 3.10 ಮಿ.ಮೀ. ಮಳೆಯಾಗಿದ್ದು, ಕಳೆದ ವರ್ಷ ಇದೇ ದಿನ 5 ಮಿ.ಮೀ. ಮಳೆಯಾಗಿತ್ತು. ಈ ವರ್ಷ ಜನವರಿಯಿಂದ ಇಲ್ಲಿಯವರೆಗೆ 349.44 ಮಿ.ಮೀ. ಮಳೆಯಾಗಿದ್ದರೆ, ಕಳೆದ ವರ್ಷ ಇದೇ ಅವಧಿಯಲ್ಲಿ 1097.80 ಮಿ.ಮೀ. ಮಳೆಯಾಗಿತ್ತು.
ಪೊನ್ನಂಪೇಟೆ ತಾಲ್ಲೂಕಿನಲ್ಲಿ ಕೇವಲ 0.25 ಮಿ.ಮೀ. ಮಳೆಯಾಗಿದ್ದು, ಕಳೆದ ವರ್ಷ ಇದೇ ದಿನ 10.40 ಮಿ.ಮೀ. ಮಳೆಯಾಗಿತ್ತು. ಈ ವರ್ಷ ಒಟ್ಟು 233.39 ಮಿ.ಮೀ. ಮಳೆಯಾಗಿದ್ದರೆ, ಕಳೆದ ವರ್ಷ ಇದೇ ಅವಧಿಯಲ್ಲಿ 1005.47 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕುಗಳಲ್ಲಿ ಕಳೆದ 24 ಗಂಟೆಗಳಲ್ಲಿ ಮಳೆಯಾಗಿಲ್ಲ. ಸೋಮವಾರಪೇಟೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ 234 ಮಿ.ಮೀ. ಮಳೆಯಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 1004.49 ಮಿ.ಮೀ. ದಾಖಲಾಗಿತ್ತು. ಕುಶಾಲನಗರ ತಾಲ್ಲೂಕಿನಲ್ಲಿ ಈ ವರ್ಷ 159.22 ಮಿ.ಮೀ. ಮಳೆಯಾಗಿದ್ದರೆ, ಕಳೆದ ವರ್ಷ ಇದೇ ಅವಧಿಯಲ್ಲಿ 647.84 ಮಿ.ಮೀ. ಮಳೆಯಾಗಿತ್ತು.
ಈ ವಿಶೇಷ ಸುದ್ದಿ ಓದಿದ್ದೀರಾ?ಮಂಡ್ಯ ಜಿಲ್ಲೆಯ 480 ಶಾಲೆಗಳ ಆಸ್ತಿ ನೋಂದಣಿ ಬಾಕಿ: ಭೂ ವಿವಾದಗಳಿಗೆ ಶಾಶ್ವತ ಪರಿಹಾರ ಕೈಗೊಳ್ಳುವುದೇ ಸರ್ಕಾರ?
ಹೋಬಳಿವಾರು ಮಳೆ ವಿವರದಲ್ಲಿ ಸಂಪಾಜೆಯಲ್ಲಿ ಅತಿ ಹೆಚ್ಚು 28 ಮಿ.ಮೀ. ಮಳೆಯಾಗಿದೆ. ಭಾಗಮಂಡಲದಲ್ಲಿ 8.40 ಮಿ.ಮೀ, ವಿರಾಜಪೇಟೆಯಲ್ಲಿ 5.20 ಮಿ.ಮೀ, ಅಮ್ಮತ್ತಿಯಲ್ಲಿ 1 ಮಿ.ಮೀ ಹಾಗೂ ಪೊನ್ನಂಪೇಟೆಯಲ್ಲಿ 1 ಮಿ.ಮೀ ಮಳೆಯಾಗಿದೆ.
ಹಾರಂಗಿ ಜಲಾಶಯದ ನೀರಿನ ಮಟ್ಟ:
ಜೂನ್ 22ರ ವರದಿಯಂತೆ ಹಾರಂಗಿ ಜಲಾಶಯದ ಗರಿಷ್ಠ ನೀರಿನ ಮಟ್ಟ 2,859 ಅಡಿಗಳಾಗಿದ್ದು, ಪ್ರಸ್ತುತ ನೀರಿನ ಮಟ್ಟ 2,825.48 ಅಡಿಗಳಷ್ಟಿದೆ. ಜಲಾಶಯಕ್ಕೆ 273 ಕ್ಯುಸೆಕ್ ನೀರು ಒಳಹರಿವಾಗುತ್ತಿದ್ದು, ನದಿಗೆ 180 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ.
ಈ ವಿಡಿಯೋ ವೀಕ್ಷಿಸಿ:https://youtu.be/XSGtBWf3zuQ?si=LfPgKWVQ0N87rcrv
ಜಿಲ್ಲೆಯಲ್ಲಿ ಮಳೆಯ ಪ್ರಮಾಣ ನಿರೀಕ್ಷಿತ ಮಟ್ಟದಲ್ಲಿ ದಾಖಲಾಗದ ಹಿನ್ನೆಲೆಯಲ್ಲಿ ಜಲಾಶಯದ ನೀರಿನ ಸಂಗ್ರಹಣೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.




