ಕೊಡಗಿನಲ್ಲಿ ಮಳೆ; ಕಳೆದ ವರ್ಷಕ್ಕೆ ಹೋಲಿಸಿದರೆ ಸಾಕಷ್ಟು ಕೊರತೆ

Date:

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಜಿಲ್ಲೆಯ ಸರಾಸರಿ 47.16 ಮಿ.ಮೀ. ಮಳೆ ದಾಖಲಾಗಿದೆ. ಕಳೆದ ವರ್ಷ ಇದೇ ದಿನ 15.42 ಮಿ.ಮೀ. ಮಳೆಯಾಗಿದ್ದರೆ, ಈ ಬಾರಿ ದೈನಂದಿನ ಮಳೆಯ ಪ್ರಮಾಣ ಗಮನಾರ್ಹವಾಗಿ ಹೆಚ್ಚಿದೆ. ಆದರೆ, ಜನವರಿಯಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟು 678.70 ಮಿ.ಮೀ. ಮಳೆಯಾಗಿದ್ದು, ಕಳೆದ ವರ್ಷದ ಇದೇ ಅವಧಿಯ 1,633.37 ಮಿ.ಮೀ.ಗೆ ಹೋಲಿಸಿದರೆ ಇನ್ನೂ ಸಾಕಷ್ಟು ಕೊರತೆ ಮುಂದುವರಿದಿದೆ.

- Advertisement -

ತಾಲ್ಲೂಕುವಾರು ಮಳೆಯ ವಿವರದಲ್ಲಿ ಸೋಮವಾರಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು 69.82 ಮಿ.ಮೀ. ಮಳೆಯಾಗಿದ್ದು, ನಂತರ ವಿರಾಜಪೇಟೆಯಲ್ಲಿ 51.95 ಮಿ.ಮೀ., ಪೊನ್ನಂಪೇಟೆಯಲ್ಲಿ 49.95 ಮಿ.ಮೀ., ಮಡಿಕೇರಿಯಲ್ಲಿ 49.80 ಮಿ.ಮೀ. ಹಾಗೂ ಕುಶಾಲನಗರ ತಾಲ್ಲೂಕಿನಲ್ಲಿ 14.30 ಮಿ.ಮೀ. ಮಳೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಜನವರಿಯಿಂದ ಇದುವರೆಗೆ ಮಡಿಕೇರಿ ತಾಲ್ಲೂಕಿನಲ್ಲಿ 956.07 ಮಿ.ಮೀ., ವಿರಾಜಪೇಟೆಯಲ್ಲಿ 706.02 ಮಿ.ಮೀ., ಪೊನ್ನಂಪೇಟೆಯಲ್ಲಿ 715.30 ಮಿ.ಮೀ., ಸೋಮವಾರಪೇಟೆಯಲ್ಲಿ 730.23 ಮಿ.ಮೀ. ಹಾಗೂ ಕುಶಾಲನಗರದಲ್ಲಿ 285.79 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಎಲ್ಲ ತಾಲ್ಲೂಕುಗಳಲ್ಲೂ ಮಳೆಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ.

ಜಿಲ್ಲೆಯ ಹೋಬಳಿಗಳಲ್ಲಿ ಶಾಂತಳ್ಳಿಯಲ್ಲಿ ಅತಿ ಹೆಚ್ಚು 122.50 ಮಿ.ಮೀ. ಹಾಗೂ ಶ್ರೀಮಂಗಲದಲ್ಲಿ 102 ಮಿ.ಮೀ. ಮಳೆಯಾಗಿದೆ. ಇದಲ್ಲದೆ ಭಾಗಮಂಡಲದಲ್ಲಿ 82 ಮಿ.ಮೀ., ನಾಪೋಕ್ಲುದಲ್ಲಿ 68.20 ಮಿ.ಮೀ., ವಿರಾಜಪೇಟೆಯಲ್ಲಿ 63.40 ಮಿ.ಮೀ., ಸೋಮವಾರಪೇಟೆಯಲ್ಲಿ 57.60 ಮಿ.ಮೀ., ಕೊಡ್ಲಿಪೇಟೆಯಲ್ಲಿ 51.20 ಮಿ.ಮೀ., ಹುದಿಕೇರಿಯಲ್ಲಿ 48 ಮಿ.ಮೀ., ಶನಿವಾರಸಂತೆಯಲ್ಲಿ 48 ಮಿ.ಮೀ., ಅಮ್ಮತ್ತಿಯಲ್ಲಿ 40.50 ಮಿ.ಮೀ., ಪೊನ್ನಂಪೇಟೆಯಲ್ಲಿ 32 ಮಿ.ಮೀ., ಮಡಿಕೇರಿಯಲ್ಲಿ 28.50 ಮಿ.ಮೀ., ಸುಂಟಿಕೊಪ್ಪದಲ್ಲಿ 22 ಮಿ.ಮೀ., ಸಂಪಾಜೆಯಲ್ಲಿ 20.50 ಮಿ.ಮೀ., ಬಾಳೆಲೆಯಲ್ಲಿ 17.80 ಮಿ.ಮೀ. ಹಾಗೂ ಕುಶಾಲನಗರದಲ್ಲಿ 6.60 ಮಿ.ಮೀ. ಮಳೆಯಾಗಿದೆ.

ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಳ

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯ ಪರಿಣಾಮ ಹಾರಂಗಿ ಜಲಾಶಯಕ್ಕೆ ನೀರಿನ ಹರಿವು ಹೆಚ್ಚುತ್ತಿದೆ. ಜುಲೈ 9ರ ವರದಿ ಪ್ರಕಾರ, ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಪ್ರಸ್ತುತ ನೀರಿನ ಮಟ್ಟ 2,841.55 ಅಡಿ ಇದೆ. ಕಳೆದ ವರ್ಷ ಇದೇ ದಿನ ನೀರಿನ ಮಟ್ಟ 2,852.61 ಅಡಿ ದಾಖಲಾಗಿತ್ತು.

ಜಲಾಶಯ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10.20 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 7.60 ಮಿ.ಮೀ. ಮಳೆಯಾಗಿತ್ತು. ಪ್ರಸ್ತುತ ಜಲಾಶಯಕ್ಕೆ 3,665 ಕ್ಯುಸೆಕ್ ನೀರು ಒಳಹರಿಯುತ್ತಿದ್ದು, ಕಳೆದ ವರ್ಷ ಇದೇ ದಿನ 4,880 ಕ್ಯುಸೆಕ್ ಒಳಹರಿವು ದಾಖಲಾಗಿತ್ತು. ಜಲಾಶಯದಿಂದ ನದಿಗೆ 180 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದ್ದು, ಕಳೆದ ವರ್ಷ ಇದೇ ದಿನ 4,083 ಕ್ಯುಸೆಕ್ ನೀರನ್ನು ಹೊರಹರಿಸಲಾಗಿತ್ತು.

ಈ ದಿನ ಓದಿದ್ದೀರಾ?ಚಾಮರಾಜನಗರ | ಕನ್ನಡ ಅನುಷ್ಠಾನಕ್ಕೆ ವೇಗ ನೀಡಿ; ನಾಮಫಲಕ ಕಡ್ಡಾಯಗೊಳಿಸಿ: ಬಿಳಿಮಲೆ

ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಉತ್ತಮ ಮಳೆಯಾಗಿದ್ದರೂ, ವರ್ಷದ ಆರಂಭದಿಂದ ಒಟ್ಟಾರೆ ಮಳೆಯ ಪ್ರಮಾಣ ಇನ್ನೂ ಕಳೆದ ವರ್ಷದ ಮಟ್ಟ ತಲುಪದಿರುವುದು ಆತಂಕದ ಸಂಗತಿಯಾಗಿದೆ. ಆದರೂ, ಸತತ ಮಳೆಯಿಂದ ಜಲಾಶಯಗಳಿಗೆ ಒಳಹರಿವು ಹೆಚ್ಚುತ್ತಿರುವುದು ಕೃಷಿ ಹಾಗೂ ಕುಡಿಯುವ ನೀರಿನ ದೃಷ್ಟಿಯಿಂದ ಆಶಾದಾಯಕ ಬೆಳವಣಿಗೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...