ಕೊಡಗು | ಪೌರ ಕಾರ್ಮಿಕರಿಗೆ ನಿವೇಶನ, ವಸತಿ ಒದಗಿಸಲು ಪ್ರಾಮಾಣಿಕ ಪ್ರಯತ್ನ: ಶಾಸಕ ಮಂತರ್ ಗೌಡ

Date:

ಪೌರ ಕಾರ್ಮಿಕರಿಗೆ ನಿವೇಶನ, ವಸತಿ ಸೇರಿದಂತೆ ಸರ್ಕಾರದಿಂದ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ತಿಳಿಸಿದ್ದಾರೆ.

- Advertisement -

ಮಡಿಕೇರಿ ನಗರಸಭೆ ಆಯೋಜಿಸಿದ್ದ ‘ಪೌರ ಕಾರ್ಮಿಕರ’ ದಿನಾಚರಣೆಯಲ್ಲಿ ಅವರು ಮಾತನಾಡಿದರು. “ಪೌರಕಾರ್ಮಿಕರಿಗಾಗಿ ಸರ್ಕಾರ ಹಲವು ಸೌಲಭ್ಯಗಳನ್ನು ಕಲ್ಪಿಸಿದೆ. ಅವುಗಳನ್ನು ಬಳಸಿಕೊಂಡು ಉತ್ತಮ ಜೀವನ ನಡೆಸಬೇಕು. ಪೌರ ಕಾರ್ಮಿಕರು ಕರ್ತವ್ಯ ಸಂದರ್ಭದಲ್ಲಿ ಸೂಕ್ತ ರಕ್ಷಣಾ ಸಾಮಾಗ್ರಿಗಳನ್ನು ಬಳಸಿ ಕಾರ್ಯನಿರ್ವಹಿಸಬೇಕು” ಎಂದು ಶಾಸಕರು ಸಲಹೆ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಶ್ಚಿಮ ಪದವೀದರರ ಕ್ಷೇತ್ರ ಸಮರ: ಭದ್ರಕೋಟೆ ಮರುಹಿಡಿಯಲು ಕಾಂಗ್ರೆಸ್...

ಪಶ್ಚಿಮ ಪದವೀದರರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣಾ ಕಾವು ಗರಿಗೆದರಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳ ನಡುವೆ ಜಿದ್ದಾಜಿದ್ದಿಗೆ ವೇದಿಕೆ ಸಜ್ಜಾಗಿದೆ. ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಪಶ್ಚಿಮ ಪದವೀದರರ ಕ್ಷೇತ್ರವೀಗ ಬಿಜೆಪಿಯ...

ಮೀಸಲಾತಿ ಹೆಚ್ಚಳ ಮತ್ತು ನ್ಯಾಯಾಂಗದ ಮಿತಿ: ಸಾಮಾಜಿಕ ನ್ಯಾಯಕ್ಕೆ...

ಮೀಸಲಾತಿ ಬಯಸುವ ಜಾತಿಗಳೆಲ್ಲವೂ ಕೂಡ ವರ್ತಮಾನದ ಸಾಮಾಜಿಕ ಪರಿಸ್ಥಿತಿ ಮತ್ತು ಕಾನೂನು ನಿಯಮಗಳನ್ನು ಸಾಮಾಜಿಕ ನ್ಯಾಯದ ಬೆಳಕಿನಲ್ಲಿ ಅಂತಃಕರಣ ಪೂರ್ವಕವಾಗಿ ಅರ್ಥ ಮಾಡಿಕೊಳ್ಳಬೇಕಾಗಿದೆ. ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾದಾಗ ಮಾತ್ರ ಸಾಮಾಜಿಕ ನ್ಯಾಯವೆಂಬ...

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

“ಪೌರಕಾರ್ಮಿಕರು ರಜೆ ಕೇಳಿದ್ದಲ್ಲಿ ನೀಡಬೇಕು. ಯಾವುದೇ ಕಾರಣಕ್ಕೂ ಸತಾಯಿಸಬಾರದು. ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸುವುದರ ಜೊತೆಗೆ, ಮಕ್ಕಳ ವಿದ್ಯಾಭ್ಯಾಸಕ್ಕೆ ಒತ್ತು ನೀಡಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಕಸವನ್ನು ಎಲ್ಲೆಂದರಲ್ಲಿ ಬಿಸಾಡುವವರಿಂದ ದಂಡ ವಸೂಲಿ ಮಾಡಬೇಕು. ಈ ರೀತಿ ಆದಲ್ಲಿ ಪ್ರತಿಯೊಬ್ಬರೂ ಎಚ್ಚರವಹಿಸಲು ಸಾಧ್ಯ” ಎಂದರು.

ನಗರಸಭೆಯಲ್ಲಿ ಓಬಳಿಯಂತ ಪೌರಕಾರ್ಮಿಕರು ನಾಲ್ಕು ದಶಕಗಳ ಕಾಲ ದುಡಿದಿದ್ದಾರೆ. ಅವರ ಆರೋಗ್ಯಕ್ಕೆ ಅಗತ್ಯ ನೆರವು ನೀಡಬೇಕು ಎಂದ ಶಾಸಕರು, ಓಬಳಿ ಅವರಿಗೆ ವೈಯಕ್ತಿಕವಾಗಿ 10 ಸಾವಿರ ರೂ.ವನ್ನು ಇದೇ ಸಂದರ್ಭದಲ್ಲಿ ನೀಡಿದರು.

ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ ಮಾತನಾಡಿ, “ಪೌರಕಾರ್ಮಿಕರು ಮಡಿಕೇರಿ ನಗರದ ಕಿರೀಟವಿದ್ದಂತೆ ಪೌರಕಾರ್ಮಿಕರು ಒಂದು ದಿನ ಸ್ವಚ್ಛತಾ ಕಾರ್ಯ ಕೈಗೊಳ್ಳದಿದ್ದಲ್ಲಿ ಪರಿಸ್ಥಿತಿಯನ್ನು ಊಹಿಸಿಕೊಳ್ಳುವುದು ಕಷ್ಟಸಾಧ್ಯ. ಆದ್ದರಿಂದ ಪೌರಕಾರ್ಮಿಕರನ್ನು ಗೌರವಿಸಬೇಕು” ಎಂದರು.

ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, “ನಗರ, ಪಟ್ಟಣಗಳು ಸ್ವಚ್ಛವಾಗಿರಲು ಪೌರಕಾರ್ಮಿಕರ ಕರ್ತವ್ಯ ನಿಷ್ಠೆ ಹೆಚ್ಚಿನದ್ದಾಗಿದೆ. ಮಡಿಕೇರಿ ನಗರದಲ್ಲಿ ಉತ್ತಮ ವಾತಾವರಣ ಇರಲು ಪೌರಕಾರ್ಮಿಕರ ಪಾತ್ರ ಹೆಚ್ಚಿನದ್ದಾಗಿದೆ. ದಸರಾ ಸಮಯದಲ್ಲಿ ಹೆಚ್ಚಿನ ಕೆಲಸವನ್ನು ಪೌರಕಾರ್ಮಿಕರು ನಿರ್ವಹಿಸಿದ್ದಾರೆ. ಮುಂದಿನ ಗಣರಾಜ್ಯೋತ್ಸವ ಸಂದರ್ಭದಲ್ಲಿ ಪೌರಕಾರ್ಮಿಕರನ್ನು ಗೌರವಿಸುವಂತಾಗಬೇಕು” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಗರಸಭೆ ಉಪಾಧ್ಯಕ್ಷೆ ಸವಿತಾ ರಾಕೇಶ್, ಪೌರಾಯುಕ್ತ ವಿಜಯ್, ನಗರಸಭೆ ಸದಸ್ಯ ರಾಜೇಶ್ ಯಲ್ಲಪ್ಪ, ಮಹೇಶ್ ಜೈನಿ, ಉಮೇಶ್ ಸುಬ್ರಮಣಿ, ಚಿತ್ರಾವತಿ, ಕಲಾವತಿ, ಉಷಾ, ಶ್ವೇತಾ, ಸಬಿತಾ, ಅರುಣ್ ಶೆಟ್ಟಿ, ಶಾರದ, ಚಂದ್ರಶೇಖರ್, ಪೌರ ಸೇವಾ ನೌಕರರ ಜಿಲ್ಲಾಧ್ಯಕ್ಷರಾದ ಪಿ.ಕೆ.ಸತೀಶ್, ತಾಲ್ಲೂಕು ಅಧ್ಯಕ್ಷರಾದ ಎಸ್.ಕೆ.ಸತ್ಯನಾರಾಯಣ, ಇತರರು ಇದ್ದರು.

ಪರಿಸರ ಎಂಜಿನಿಯರ್ ಸೌಮ್ಯ ನಿರೂಪಿಸಿದರು. ಸಹಾಯಕ ಎಂಜಿನಿಯರ್ ಹೇಮಂತ್ ಕುಮಾರ್ ಸ್ವಾಗತಿಸಿದರು. ನಗರಸಭೆ ಕಂದಾಯ ಅಧಿಕಾರಿ ತಾಹೀರ್ ವಂದಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.23ರಂದು ‘ಊರೂರೂ ಜಂತರ್ ಮಂತರ್’ ಉಡುಪಿಯಲ್ಲೂ ಪ್ರತಿಭಟನೆ ಮತ್ತು ಜಾಥಾ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಮತದಾರರ...

ಉಡುಪಿಯಲ್ಲಿ ನವೀಕೃತ ಆಭರಣ ಜ್ಯುವೆಲ್ಲರ್ಸ್ ಮಳಿಗೆ ಅ. 21ರಂದು ಪುನರಾರಂಭ

ಉಡುಪಿ ನಗರದ ಸಿಬಿ ರಸ್ತೆಯಲ್ಲಿರುವ ಆಭರಣ ಜ್ಯುವೆಲ್ಲರ್ಸ್‌ನ ಮೂಲ ಮಳಿಗೆಯನ್ನು ಆಧುನಿಕ...

ಉಡುಪಿ | ಉಚ್ಚಿಲ ದಸರಾ ಶೋಭಾಯಾತ್ರೆ: ಅ. 21ರಂದು ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಉಡುಪಿ-ಉಚ್ಚಿಲ ದಸರಾ 2026ರ ಅಂಗವಾಗಿ...

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...