ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಹಾಯಧನ

Date:

ಪ್ರಸಕ್ತ 2026-27ನೇ ಸಾಲಿನ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಡಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರಷ್ಟು ಸಹಾಯಧನದಲ್ಲಿ ಕೃಷಿ ಯಂತ್ರೋಪಕರಣಗಳನ್ನು ವಿತರಿಸಲಾಗುತ್ತಿದ್ದು, ಆಸಕ್ತ ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸೋಮವಾರಪೇಟೆ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಕೆ.ಪಿ. ವೀರಣ್ಣ ಮನವಿ ಮಾಡಿದ್ದಾರೆ.

- Advertisement -

ಈ ಯೋಜನೆಯಡಿ ಪವರ್ ಟಿಲ್ಲರ್, ಕಲ್ಟಿವೇಟರ್, ರೋಟವೇಟರ್, ಎಂ.ಬಿ. ಪ್ಲೋ, ಡಿಸ್ಕ್ ಪ್ಲೋ, ಕಳೆಕೊಚ್ಚುವ ಯಂತ್ರ, ಕಳೆ ತೆಗೆಯುವ ಯಂತ್ರ, ಡೀಸೆಲ್ ಪಂಪ್ ಸೆಟ್, ಪವರ್ ಸ್ಪ್ರೇಯರ್, ಮೇವು ಕತ್ತರಿಸುವ ಯಂತ್ರ, ಭತ್ತದ ಒಕ್ಕಣೆ ಯಂತ್ರ, ಭತ್ತ ಕಟಾವು ಯಂತ್ರ ಹಾಗೂ ಮುಸುಕಿನ ಜೋಳ ಒಕ್ಕಣೆ ಯಂತ್ರಗಳನ್ನು ಸಹಾಯಧನದಲ್ಲಿ ಪಡೆಯಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾತಾಳ ಸೀಳಿ ಪೈರಾಗಿ ಎದ್ದವನು: ಕನ್ನಡ ಮನಸ್ಸಿನಲ್ಲಿ ಬಲೀಂದ್ರನ...

ಸತ್ಯನಿಷ್ಠೆ, ಮಹೋದಾರತೆ ಮತ್ತು ಶ್ರಮಸಂಸ್ಕೃತಿಯ ಫಲವಂತಿಕೆಯಾಗಿ ಸಾವನ್ನು ಗೆದ್ದು ಜನಮಾನಸದಲ್ಲಿ ನೆಲೆಗೊಂಡಿರುವ ಬಲಿ ಕೇವಲ ಸೋಲಿನ ಸಂಕೇತವಲ್ಲ; ಆತ ಚಾರಿತ್ರಿಕವಾಗಿ ಪ್ರಭುತ್ವದ ವಂಚನೆಯನ್ನು ಬಯಲು ಮಾಡುವ ಜೀವಂತ ಪ್ರತಿರೋಧ. ಊರಿಗೆಲ್ಲ ದೀಪಾವಳಿಯು ಬೆಳಕಿನ ಸಂಭ್ರಮವಾದರೆ,...

ಗದಗ | ಬದುಕ ಬೆಳಗಿತು ಹಣತೆ: ಕುಂಬಾರಿಕೆಗೆ ಮರು...

ಆಧುನಿಕತೆಯ ಭರಾಟೆಯಲ್ಲಿ ಸಾಂಪ್ರದಾಯಿಕ ಕುಂಬಾರಿಕೆ ವೃತ್ತಿ ನಿಧಾನವಾಗಿ ಮರೆಯಾಗುತ್ತಿರುವ ಈ ಸಂದರ್ಭದಲ್ಲಿ, ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಮಹಿಳೆಯೊಬ್ಬರು ತಮ್ಮ ಕುಟುಂಬದ ಕುಲಕಸುಬನ್ನೇ ಆದಾಯದ ಪ್ರಮುಖ ಮೂಲವನ್ನಾಗಿಸಿಕೊಂಡು ಸ್ವಾವಲಂಬಿ ಬದುಕಿನತ್ತ ಹೆಜ್ಜೆಯಿಟ್ಟಿದ್ದಾರೆ. ಸಂಜೀವಿನಿ...

ಬೆಳಕಿನ ಹಬ್ಬಕ್ಕೆ ಮಾಲಿನ್ಯದ ಕತ್ತಲು; ದೆಹಲಿ ಜನ ಪಾಠ...

ವರ್ಷಕ್ಕೊಮ್ಮೆ ಬರುವ ದೀಪಾವಳಿ ಹಬ್ಬವನ್ನು ಕೇವಲ ದೀಪಗಳ ಹಬ್ಬವೆಂದು ನೋಡದೆ, ಬೆಳಕಿನ ಸಂಭ್ರಮದ ಪ್ರತೀಕವಾಗಿಯೂ ಪರಿಗಣಿಸಲಾಗಿದೆ. ಆದರೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ಹಬ್ಬ ಪ್ರತಿವರ್ಷವೂ 'ಉಸಿರುಗಟ್ಟಿಸುವ ನರಕಯಾತನೆ'ಯಾಗಿ ಬದಲಾಗುತ್ತಿರುವುದು ಕಟು ಸತ್ಯ....

ಅಲ್ಲದೆ, ಕೃಷಿ ಉತ್ಪನ್ನಗಳ ಸಂಸ್ಕರಣೆಗೆ ಸಂಬಂಧಿಸಿದ ರಾಗಿ ಕ್ಲೀನಿಂಗ್ ಯಂತ್ರ, ಹಿಟ್ಟು ಮಾಡುವ ಯಂತ್ರ, ಮೆಣಸಿನಕಾಯಿ ಪುಡಿ ಮಾಡುವ ಯಂತ್ರ ಹಾಗೂ ವಿವಿಧ ಬಗೆಯ ಎಣ್ಣೆ ಗಾಣಗಳಿಗೂ ಶೇ.50ರಷ್ಟು ಸಹಾಯಧನ ಲಭ್ಯವಿದೆ.

ಈ ವಿಶೇಷ ಲೇಖನ ಓದಿದ್ದೀರಾ? ಏಳು ಕೊಲೆಗಳು ಮತ್ತು ಮನುಷ್ಯ ಮೃಗ!: ಕ್ರೋಧ, ಕ್ರೌರ್ಯ, ವಿವೇಕದ ಕಾವಲು ಕಳಚಿದಾಗ…

ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕಿನ ಆಸಕ್ತ ರೈತರು ತಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಉಚಿತವಾಗಿ ಅರ್ಜಿ ಪಡೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯೊಂದಿಗೆ ಪಹಣಿ (ಆರ್‌ಟಿಸಿ), ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ, ಒಂದು ಭಾವಚಿತ್ರ ಹಾಗೂ 100 ರೂ. ಛಾಪಾ ಕಾಗದವನ್ನು ಸಲ್ಲಿಸಬೇಕು.

ಈ ವಿಶೇಷ ವರದಿ ಓದಿದ್ದೀರಾ? ಅಕ್ಕಿ ಬೆಲೆ ಏರಿಕೆಯ ಹಿಂದಿನ ಆಟ ಯಾರದ್ದು?: ಕಾರ್ಪೋರೇಟ್ ಮಾರುಕಟ್ಟೆಯ ಕರಾಮತ್ತು!

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಿ ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಕೆ.ಪಿ. ವೀರಣ್ಣ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಪೆರಂಪಳ್ಳಿ ಚರ್ಚ್ ವೃತ್ತದಲ್ಲಿ ಅಪಘಾತ ತಡೆಗೆ 6 ಬ್ಯಾರಿಕೇಡ್ ಅಳವಡಿಕೆ

ಪೆರಂಪಳ್ಳಿ ಚರ್ಚ್ ವೃತ್ತದ ಬಳಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ...

ದೀಪಾವಳಿ ಸಂಭ್ರಮದ ನಡುವೆ ಅಂದರ್-ಬಾಹರ್ ಜೂಜಾಟ: ಹೊನ್ನಾವರ, ಹಳಿಯಾಳದಲ್ಲಿ 10 ಮಂದಿ ವಶಕ್ಕೆ

ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಜಿಲ್ಲೆಯ ಹೊನ್ನಾವರ ಮತ್ತು ಹಳಿಯಾಳ ತಾಲೂಕುಗಳಲ್ಲಿ...

ಹಾಸನ | ಸಚಿವ ಎಚ್‌.ಡಿ ಕುಮಾರಸ್ವಾಮಿ ಸುಳ್ಳು ಆರೋಪ ಮಾಡಿದ್ದಾರೆ; ಡಿಸಿ ಲತಾ ಕುಮಾರಿ

ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಾಟ್ಸ್‌ಆಯಪ್‌ ಚಾಟ್‌ಗಳನ್ನು ಕೇಂದ್ರ ಸಚಿವರು ಮಾಧ್ಯಮಗಳ...