ಒನಕೆ ಓಬವ್ವ ಸಾಹಸ ಸ್ಮರಿಸಿದ ವಿದ್ಯಾರ್ಥಿಗಳು

Date:

ಕನ್ನಡ ನಾಡಿನ ಸಾಹಸಗಾಥೆಯನ್ನು ಸಾರುವ ‘ಕನ್ನಡ ನಾಡಿನ ವೀರರಮಣಿಯ, ಗಂಡು ಭೂಮಿಯ ವೀರನಾರಿಯ ಚರಿತೆಯ ನಾನು ಹಾಡುವೆ’ ಎಂಬ ಜನಪ್ರಿಯ ಗೀತೆಗೆ ಬ್ಲಾಸಂ ಶಾಲೆಯ ವಿದ್ಯಾರ್ಥಿಗಳು ನೃತ್ಯ ಪ್ರದರ್ಶಿಸಿ ಗಮನ ಸೆಳೆದರು.

- Advertisement -

ಚಿ. ಉದಯಶಂಕರ್ ಅವರು ರಚಿಸಿ, ವಿಜಯಭಾಸ್ಕರ್ ಸಂಗೀತ ಸಂಯೋಜಿಸಿದ್ದ, ಸಾಹಸಸಿಂಹ ವಿಷ್ಣುವರ್ಧನ್ ಮತ್ತು ಜಯಂತಿ ಅಭಿನಯದ, ಪುಟ್ಟಣ್ಣ ಕಣಗಾಲ್ ನಿರ್ದೇಶನದ ‘ನಾಗರಹಾವು’ ಚಲನಚಿತ್ರದ ಈ ಗೀತೆಗೆ ವಿದ್ಯಾರ್ಥಿಗಳು ಮಡಿಕೇರಿಯ ಗಾಂಧಿಭವನದಲ್ಲಿ ಬುಧವಾರ ನಡೆದ ವೀರವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮದಲ್ಲಿ ನೃತ್ಯ ಪ್ರದರ್ಶಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

ಕಾರ್ಯಕ್ರಮದಲ್ಲಿ ಮಾತನಾಡಿದ ನಿವೃತ್ತ ಹಿರಿಯ ಉಪನ್ಯಾಸಕಿ ಬಿ.ಬಿ. ಸವಿತಾ, 18ನೇ ಶತಮಾನದಲ್ಲಿ ಒನಕೆ ಓಬವ್ವ ರಾಜ್ಯದ ಇತಿಹಾಸದಲ್ಲಿ ಅಸಾಧಾರಣ ಶೌರ್ಯ ಮೆರೆದ ವೀರವನಿತೆಯಾಗಿದ್ದಾರೆ ಎಂದು ಹೇಳಿದರು.

ಈಗಿನ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಗುಡೇಕೋಟೆಯಲ್ಲಿ ಜನಿಸಿದ ಒನಕೆ ಓಬವ್ವ, ಚಿತ್ರದುರ್ಗದ ಏಳುಸುತ್ತಿನ ಕೋಟೆಯ ಕಾವಲುಗಾರರಾಗಿದ್ದ ಮುದ್ದ ಹನುಮ ಅವರ ಪತ್ನಿಯಾಗಿದ್ದರು. ಒಂದು ದಿನ ನೀರು ತರಲು ಹೋಗಿದ್ದಾಗ ಕೋಟೆಯ ಕಿಂಡಿಯ ಮೂಲಕ ಶತ್ರುಗಳು ಒಳನುಗ್ಗುತ್ತಿರುವುದನ್ನು ಗಮನಿಸಿದರು. ತಕ್ಷಣವೇ ಒನಕೆಯನ್ನು ಆಯುಧವನ್ನಾಗಿ ಮಾಡಿಕೊಂಡು, ಕಿಂಡಿಯ ಮೂಲಕ ಒಬ್ಬೊಬ್ಬರಾಗಿ ಬರುತ್ತಿದ್ದ ಶತ್ರುಗಳನ್ನು ಸದೆಬಡಿದು ಕೋಟೆಯನ್ನು ರಕ್ಷಿಸಿದರು ಎಂದು ವಿವರಿಸಿದರು.

ಸಾಮಾನ್ಯ ಗೃಹಿಣಿಯಾಗಿದ್ದ ಓಬವ್ವ ಅವರು ಸಮಯಪ್ರಜ್ಞೆ ಮತ್ತು ಧೈರ್ಯದಿಂದ ಶತ್ರುಗಳ ವಿರುದ್ಧ ಹೋರಾಡಿದ ಸಾಹಸ ಇಂದಿಗೂ ಸ್ಮರಣೀಯವಾಗಿದೆ. ಅವರ ಶೌರ್ಯವನ್ನು ಗೌರವಿಸಲು ಚಿತ್ರದುರ್ಗ ಸೇರಿದಂತೆ ರಾಜ್ಯದ ವಿವಿಧೆಡೆ ಪ್ರತಿಮೆಗಳನ್ನು ಸ್ಥಾಪಿಸಿ ಸ್ಮರಿಸಲಾಗುತ್ತಿದೆ ಎಂದರು.

ಈ ವಿಶೇಷ ಲೇಖನ ಓದಿದ್ದೀರಾ? ಹೊರಗೆ ‘ರಾಮ’-ಒಳಗೆ ‘ನಾಥೂರಾಮ’: ಗಾಂಧೀಜಿಯವರ ತಾತ್ವಿಕತೆಯ ಮುಂದೆ ಬಲಪಂಥೀಯ ರಾಜಕಾರಣದ ಆತಂಕ

ಬ್ಲಾಸಂ ಶಾಲೆಯ ಪ್ರಾಂಶುಪಾಲೆ ಅನಸೂಯ ಮಾತನಾಡಿ, ಕಿತ್ತೂರು ರಾಣಿ ಚೆನ್ನಮ್ಮ, ಅಬ್ಬಕ್ಕ ರಾಣಿ ಮತ್ತು ಕೆಳದಿ ಚೆನ್ನಮ್ಮ ಅವರಂತೆ ಒನಕೆ ಓಬವ್ವ ಕೂಡ ಶತ್ರುಗಳ ವಿರುದ್ಧ ಧೈರ್ಯದಿಂದ ಹೋರಾಡಿದ ವೀರವನಿತೆಯಾಗಿದ್ದಾರೆ. ಐತಿಹಾಸಿಕ ಹಿನ್ನೆಲೆಯುಳ್ಳ ಚಿತ್ರದುರ್ಗದ ಕೋಟೆಯ ರಕ್ಷಣೆಗಾಗಿ ಅವರು ನಡೆಸಿದ ಹೋರಾಟದ ಜೀವನವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಎಂದು ಹೇಳಿದರು.

ಈ ವಿಶೇಷ ವರದಿ ಓದಿದ್ದೀರಾ? ಮೆಕ್ಕೆಜೋಳಕ್ಕೆ ಉತ್ತಮ ಬೆಲೆ: ಬರದಿಂದ ಉತ್ಪಾದನೆ ಶೇ.33ರಷ್ಟು ಕುಸಿತ, ರಾಜ್ಯದ ಕೃಷಿ-ಮಾರುಕಟ್ಟೆ ಚಿತ್ರಣವೇನು?

ಆರೋಗ್ಯ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಡಾ. ಅಜೀಜ್, ಶಿಕ್ಷಕರಾದ ಸೆಲ್ವಿ, ಪ್ರಿಯಾಂಕ, ವನಿತಾ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ, ಮಣಜೂರು ಮಂಜುನಾಥ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಪಡಿತರ ಚೀಟಿ ಇ-ಕೆವೈಸಿ ನ.30 ಕೊನೆ ದಿನ; ಜಿಲ್ಲೆಯಲ್ಲಿ 1.63 ಲಕ್ಷ ಫಲಾನುಭವಿಗಳ ಬಾಕಿ

ಜಿಲ್ಲೆಯ ಎಲ್ಲ ಪಡಿತರ ಚೀಟಿಗಳಲ್ಲಿನ ಸದಸ್ಯರು ಪ್ರತಿ ಐದು ವರ್ಷಗಳಿಗೊಮ್ಮೆ ಇ-ಕೆವೈಸಿ...

ರಾಯಚೂರು | ವಿದ್ಯಾರ್ಥಿ ಮೇಲೆ ಹಲ್ಲೆ: 6 ಶಿಕ್ಷಕರ ವಿರುದ್ಧ ಪ್ರಕರಣ ದಾಖಲು

ಕವಿತಾಳ ಪಟ್ಟಣದ ಮದರಸಾ ದಾರುಲ್ ಹುಫ್ರಾಜ್ ಶಾಲೆಯಲ್ಲಿ 10 ವರ್ಷದ ವಿದ್ಯಾರ್ಥಿಯ...

ವಿಜಯಪುರ |ಅಲೆಮಾರಿ ಸಮುದಾಯದ ಆರ್ಥಿಕ ಅಭಿವೃದ್ಧಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ: ಅರ್ಜಿ ಆಹ್ವಾನ

ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2026-27ನೇ ಸಾಲಿನಲ್ಲಿ...

ವಿಜಯಪುರ |ಸಂವಿಧಾನದ ಕುರಿತು ವಿವೇಚನಾರಹಿತ ಹೇಳಿಕೆ: ಕನೇರಿ ಸ್ವಾಮೀಜಿ ಕ್ಷಮೆಯಾಚಿಸಲಿ

ಸಂವಿಧಾನದ ಕುರಿತು ಅಧ್ಯಯನ ಮಾಡದೆ ವಿವೇಚನಾರಹಿತ ಹಾಗೂ ಅತಿರೇಕದ ಹೇಳಿಕೆ ನೀಡಿರುವ...