ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಗೆ ಸಹಾಯಧನ: ಅರ್ಜಿ ಸಲ್ಲಿಕೆ ಅವಧಿ ಅ.23ರವರೆಗೆ ವಿಸ್ತರಣೆ

Date:

ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್‌ಸಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿಯ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸುವ ಉದ್ದೇಶದಿಂದ ಒಂದು ತಿಂಗಳ ಉದ್ಯಮಶೀಲತಾ ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ ತರಬೇತಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಪ್ರವಾಸಿ ತಾಣಗಳಲ್ಲಿ ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 23ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಶಶಿಧರ್ ತಿಳಿಸಿದ್ದಾರೆ.

- Advertisement -

ಕೊಡಗು ಜಿಲ್ಲೆಯ ಪರಿಶಿಷ್ಟ ಜಾತಿಗೆ ಸೇರಿದ ಮೂವರು ಫಲಾನುಭವಿಗಳನ್ನು ಈ ಯೋಜನೆಯಡಿ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ವಸತಿ ಸಹಿತ ತರಬೇತಿ ನೀಡಲಾಗುತ್ತಿದ್ದು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ತರಬೇತಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಅರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. 20ರಿಂದ 45 ವರ್ಷದೊಳಗಿನವರಾಗಿದ್ದು, ಕನಿಷ್ಠ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಲಘು ವಾಹನ ಚಾಲನಾ ಪರವಾನಗಿ ಹೊಂದಿರಬೇಕು ಹಾಗೂ ಕೊಡಗು ಜಿಲ್ಲೆಯ ನಿವಾಸಿಯಾಗಿರಬೇಕು. ನಗರ ಪ್ರದೇಶದ ಫಲಾನುಭವಿಗಳ ವಾರ್ಷಿಕ ಆದಾಯ ₹2 ಲಕ್ಷ ಮೀರಿರಬಾರದು. ಗ್ರಾಮೀಣ ಪ್ರದೇಶದ ಫಲಾನುಭವಿಗಳ ವಾರ್ಷಿಕ ಆದಾಯ ₹1.50 ಲಕ್ಷ ಮೀರಿರಬಾರದು. ಅಲ್ಲದೆ, ಅರ್ಜಿದಾರರು ಯಾವುದೇ ಸರ್ಕಾರಿ ಇಲಾಖೆ, ನಿಗಮ ಅಥವಾ ಮಂಡಳಿಯಲ್ಲಿ ಖಾಯಂ ನೌಕರಿಯಲ್ಲಿರಬಾರದು.

Advertisements

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜಿಲ್ಲಾಮಟ್ಟದ ಪ್ರವಾಸೋದ್ಯಮ ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಇತ್ತೀಚಿನ ಭಾವಚಿತ್ರದೊಂದಿಗೆ ಎರಡು ಪ್ರತಿಗಳಲ್ಲಿ ಸಲ್ಲಿಸಬೇಕು. ಅರ್ಜಿಯೊಂದಿಗೆ ಆಧಾರ್ ಕಾರ್ಡ್ ಪ್ರತಿ, ತಹಶೀಲ್ದಾರರಿಂದ ಪಡೆದ ಚಾಲ್ತಿಯಲ್ಲಿರುವ ಜಾತಿ ಪ್ರಮಾಣಪತ್ರದ ಪ್ರತಿ, ಆದಾಯ ಪ್ರಮಾಣಪತ್ರದ ಪ್ರತಿ, ಖಾಯಂ ಲಘು ವಾಹನ ಚಾಲನಾ ಪರವಾನಗಿ ಪ್ರತಿ ಹಾಗೂ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದ ಅಂಕಪಟ್ಟಿಯ ಪ್ರತಿಯನ್ನು ಲಗತ್ತಿಸಬೇಕು.

ಅರ್ಜಿದಾರರು ಯಾವುದೇ ಸರ್ಕಾರಿ ಇಲಾಖೆ, ನಿಗಮ ಅಥವಾ ಮಂಡಳಿಯಲ್ಲಿ ಖಾಯಂ ನೌಕರಿಯಲ್ಲಿಲ್ಲ ಎಂಬುದನ್ನು ಸ್ವಯಂ ದೃಢೀಕರಿಸಿ, ₹50 ಮೌಲ್ಯದ ಛಾಪಾ ಕಾಗದದಲ್ಲಿ ನಮೂನೆ-3ರ ಪ್ರಕಾರ ಪ್ರಮಾಣಪತ್ರ ಸಲ್ಲಿಸಬೇಕು. ಅರ್ಜಿಯೊಂದಿಗೆ ಲಗತ್ತಿಸುವ ಎಲ್ಲ ದಾಖಲೆಗಳನ್ನು ಸ್ವಯಂ ದೃಢೀಕರಿಸುವುದು ಕಡ್ಡಾಯವಾಗಿದೆ.

ತರಬೇತಿ ಹಾಗೂ ಸಹಾಯಧನ ಪಡೆಯಲು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಎರಡು ಪ್ರತಿಗಳಲ್ಲಿ ಅಕ್ಟೋಬರ್ 23ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಗಳನ್ನು ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ–571201 ವಿಳಾಸಕ್ಕೆ ಸಲ್ಲಿಸಬಹುದು.

ಈ ವಿಶೇಷ ವರದಿ ಓದಿದ್ದೀರಾ? ಮುಸ್ಲಿಮರನ್ನು ಗುರಿಯಾಗಿಸಿ ಮತದಾನದ ಹಕ್ಕು ಕಸಿಯುವ ತಂತ್ರವೇ ‘SIR’: ಶಿವಸುಂದರ್

ಹೆಚ್ಚಿನ ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರ ಕಚೇರಿಯ ದೂರವಾಣಿ ಸಂಖ್ಯೆ-08272-200519 ಅಥವಾ [email protected] ಇ-ಮೇಲ್ ಮೂಲಕ ಸಂಪರ್ಕಿಸಬಹುದು ಎಂದು ಇಲಾಖೆಯ ಉಪ ನಿರ್ದೇಶಕ ಶಶಿಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಸಾಹಿತ್ಯದ ಪಾತ್ರ ಮಹತ್ವದ್ದು

ಪ್ರಶ್ನೆಗಳನ್ನು ಎತ್ತುವುದಷ್ಟೇ ಮುಖ್ಯವಲ್ಲ; ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವೂ ಅಗತ್ಯ. ಸಾಹಿತ್ಯವು...

ಹಾವೇರಿ | ಸಿಡಿಲು ಬಡಿದು ರೈತ ಸಾವು

ಹೊಲದಲ್ಲಿ ಕೃಷಿ ಕೆಲಸ ಮಾಡುವ ಸಮಯದಲ್ಲಿ ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿರುವ...

ಇಂಡಿ |‌ ಜೋಡೆತ್ತು ಕೃಷಿಕರ ಪ್ರತಿಭಟನೆ; ಅಹವಾಲು ಆಲಿಸಿದ ಶಾಸಕ ಯಶವಂತರಾಯಗೌಡ ಪಾಟೀಲ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಥರ್ಗಾ ಗ್ರಾಮದಲ್ಲಿ ಜೋಡೆತ್ತಿನ ಕೃಷಿಕರ ಬೇಡಿಕೆಗಳನ್ನು...

ಹಾವೇರಿ | ಕಬ್ಬು ಬೆಳೆಗಾರರು ಹುಬ್ಬಳ್ಳಿಗೆ ಪಾದಯಾತ್ರೆ; ಕೇಂದ್ರ ಸಚಿವರ ಅಣಕು ಶವಯಾತ್ರೆ

ಕಬ್ಬಿಗೆ ಪ್ರತಿ ಟನ್‌ಗೆ ₹5500 ನೀಡಬೇಕು. ಎಮ್.ಎಸ್.ಪಿ. ದರ 31ರೂ ಇದ್ದದ್ದು,...