ಮಹಿಳೆಯರ ಸ್ಥಾನಮಾನದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗೆ ಇಲ್ಲ: ಸಚಿವ ನರೇಂದ್ರಸ್ವಾಮಿ

Date:

ನೀಟ್ ಹೋರಾಟದ ವಿಚಾರದಲ್ಲಿ ಇವರು ಮಾತನಾಡಲಿಲ್ಲ, ಪ್ರತಿಭಟನೆ ಮಾಡಲಿಲ್ಲ. ಪ್ರತಿಭಟನಾನಿರತ ಹೆಣ್ಣುಮಕ್ಕಳ ಮೇಲೆ ಲಾಠಿ ಚಾರ್ಜ್ ಮಾಡಿ ನಿರ್ದಯವಾಗಿ ನಡೆದುಕೊಂಡರು. ದೆಹಲಿಯಲ್ಲಿ ಮಹಿಳೆಯರ ಮೇಲೆ ಮೊಳೆ ಸಿಕ್ಕಿಸಿದ ಲಾಠಿಯಿಂದ ಮನಬಂದಂತೆ ಯುವತಿಯರನ್ನು, ಅಪ್ರಾಪ್ತೆಯರನ್ನು ಥಳಿಸಿದ್ದಾರೆ. ಆದ್ದರಿಂದ ಮಹಿಳೆಯರ ಸ್ಥಾನಮಾನದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗೆ ಇಲ್ಲ ಎಂದು ಸಚಿವ ಪಿ.ಎಂ. ನರೇಂದ್ರಸ್ವಾಮಿ ಹೇಳಿದರು.

- Advertisement -

ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ರಾಜ್ಯ ಸಚಿವ ಸಂಪುಟದಲ್ಲಿ ಮಹಿಳಾ ಸಚಿವರಿಗೆ ಸ್ಥಾನಮಾನ ನೀಡದಿರುವ ವಿಚಾರದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಬಿಜೆಪಿಯವರಿಂದ ಮಹಿಳಾ ಸ್ಥಾನಮಾನದ ಬಗ್ಗೆ ಪಾಠ ಮಾಡಿಸಿಕೊಳ್ಳುವ ಅಗತ್ಯವಿಲ್ಲ. ಕಾಂಗ್ರೆಸ್ ಮಹಿಳೆಯರಿಗೆ ಸಂಪುಟದಲ್ಲಿ ಮತ್ತು ಇತರೆಡೆ ಸ್ಥಾನಮಾನ ಕೊಟ್ಟೇ ಕೊಡುತ್ತದೆ” ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ತಾಯಿ ಕಾವೇರಿಗೆ ನಮಸ್ಕರಿಸಿದ ಬಳಿಕ ಮಾತನಾಡಿದ ಅವರು, “ನಾಡಿನಲ್ಲಿ ಬರ ಬರಬಹುದು ಎಂಬ ಭಯ ಇಡೀ ನಾಡನ್ನು ಕಾಡಿತ್ತು. ನಾಡಿಗೆ ಜೀವಜಲ ಒದಗಿಸುವ ತಾಯಿ ಕಾವೇರಿ ವರ ನೀಡಿದ್ದಾಳೆ. ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ಕಾವೇರಿ ಕೃಪೆ ತೋರಿದ್ದಾಳೆ. ಇಂತಹ ತಾಯಿಗೆ ನಮಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ” ಎಂದು ಅಭಿಪ್ರಾಯಪಟ್ಟರು.

“ಕಾವೇರಿ ರಾಜ್ಯ ಮಾತ್ರವಲ್ಲದೆ ನೆರೆರಾಜ್ಯದ ದಾಹವನ್ನೂ ತಣಿಸುವ ಮಾತೆ. ಮಂಡ್ಯದವನಾಗಿ ಮೊದಲು ಕಾವೇರಿ ತಾಯಿಗೆ ನಮಸುವವನು ನಾನು” ಎಂದು ಹೇಳಿದರು.

ಸಚಿವ ಸ್ಥಾನ ತಪ್ಪಿರುವುದನ್ನು ಖಂಡಿಸಿ ಹಲವೆಡೆ ನಡೆದ ಹೋರಾಟಗಳ ಬಗ್ಗೆ ಮಾತನಾಡಿದ ಅವರು, “ಒಂದೇ ತಂದೆ-ತಾಯಿಗೆ ಹುಟ್ಟಿದ ಮಕ್ಕಳೇ ಮನೆಯಲ್ಲಿ ಕಿತ್ತಾಡುತ್ತಾರೆ. ಕಾಂಗ್ರೆಸ್ ಕೂಡ ಒಂದು ಮನೆಯಂತೆ. ಅಸಮಾಧಾನ ಬರುತ್ತದೆ, ಹೋಗುತ್ತದೆ. ಸಹಜವಾಗಿ ಎಲ್ಲರೂ ಆಕಾಂಕ್ಷಿಗಳಾಗಿದ್ದರು. ಎಲ್ಲರಿಗೂ ಸಿಗಲು ಸಾಧ್ಯವಿಲ್ಲ” ಎಂದರು.

ಕಾಂಗ್ರೆಸ್‌ನದ್ದು ‘ಸೂಟ್‌ಕೇಸ್ ಕ್ಯಾಬಿನೆಟ್’ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, “ಪಕ್ಷದ ಕೆಲಸ ಮಾಡಿದವರನ್ನು ಪಕ್ಷ ಗುರುತಿಸುತ್ತದೆ. ನನ್ನನ್ನು ಹಿಂದೆ ಗುರುತಿಸಿರಲಿಲ್ಲ. ಈಗ ಗುರುತಿಸಿ ಸ್ಥಾನಮಾನ ನೀಡಿದ್ದಾರೆ. ಎಲ್ಲರೂ ತಾಳ್ಮೆಯಿಂದ ಕಾಯಬೇಕು, ಅಷ್ಟೇ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗಣೇಶ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರ ಸಾವು: ಮೃತರ ಮನೆಗೆ ಜಿಲ್ಲಾಧಿಕಾರಿ ಭೇಟಿ

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟ...

ಬೀದರ್‌ | ವರ್ಷ ಕಳೆದರೂ ಸಿಗದ ರೈತ ಆತ್ಮಹತ್ಯೆ ಪರಿಹಾರ: ಸಂಕಷ್ಟದಲ್ಲಿ ಸಂತ್ರಸ್ತ ಕುಟುಂಬಗಳು!

ಬೆಳೆನಷ್ಟ, ಸಾಲದ ಶೂಲದಂತಹ ಸಂಕಷ್ಟಗಳಿಂದ ಕಂಗೆಟ್ಟು ರೈತ ಆತ್ಮಹತ್ಯೆಗೆ ಶರಣಾದರೆ, ಅವರ...

ಉತ್ತರ ಪ್ರದೇಶ | 30 ಲಕ್ಷ ರೂ. ಇನಾಮು ಹೊಂದಿದ್ದ ಮಾವೋವಾದಿ ಬ್ರಿಜೇಶ್ ಎನ್‌ಕೌಂಟರ್

ಜಾರ್ಖಂಡ್ ಮೂಲದ ನಿಷೇಧಿತ ಮಾವೋವಾದಿ ಸಂಘಟನೆ ‘ತೃತೀಯ ಪ್ರಸ್ತುತಿ ಕಮಿಟಿ’ (ಟಿಪಿಸಿ)...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...