ಜವಳಿ ಉತ್ಪನ್ನಗಳ ರಫ್ತು ಹೆಚ್ಚಿಸಲು ಕೊಡಗಿನಲ್ಲಿ ಕಾರ್ಯಾಗಾರ

Date:

ಸ್ಥಳೀಯ ಉತ್ಪನ್ನಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಗುಣಮಟ್ಟದೊಂದಿಗೆ ಉತ್ಪಾದಿಸಿ ವಿದೇಶಗಳಿಗೆ ರಫ್ತು ಮಾಡುವ ಮೂಲಕ ದೇಶದ ಜಿಡಿಪಿ ಹಾಗೂ ಆರ್ಥಿಕ ಬೆಳವಣಿಗೆಗೆ ಕೊಡುಗೆ ನೀಡಬೇಕು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಬೆಂಗಳೂರು ದಕ್ಷಿಣ ವಿಭಾಗದ ಜಂಟಿ ನಿರ್ದೇಶಕ ಬಿ.ಆರ್. ಯೋಗೀಶ್ ಹೇಳಿದರು.

- Advertisement -

ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ನಗರದ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯ ‘ಚೇತನ ಚಿಲುಮೆ’ ಸಭಾಂಗಣದಲ್ಲಿ ಶುಕ್ರವಾರ ಜವಳಿ ವಲಯದ ಉದ್ಯಮಿಗಳಿಗಾಗಿ ಆಯೋಜಿಸಿದ್ದ ‘ಜಾಗತಿಕ ಮಾರುಕಟ್ಟೆಗೆ ಜವಳಿ’ ವಿಷಯಾಧಾರಿತ ರಫ್ತು ಪ್ರೋತ್ಸಾಹನ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಪ್ರಸ್ತುತ ಭಾರತದಿಂದ ಸುಮಾರು 37 ಬಿಲಿಯನ್ ಅಮೆರಿಕನ್ ಡಾಲರ್ ಮೌಲ್ಯದ ಜವಳಿ ಉತ್ಪನ್ನಗಳನ್ನು ರಫ್ತು ಮಾಡಲಾಗುತ್ತಿದೆ. 2030ರ ವೇಳೆಗೆ ಇದನ್ನು 100 ಬಿಲಿಯನ್ ಡಾಲರ್‌ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ರಫ್ತು ಸಾಮರ್ಥ್ಯ ಹೊಂದಿರುವ ಜಿಲ್ಲೆಗಳನ್ನು ಗುರುತಿಸಿ, ಉದ್ಯಮಿಗಳಿಗೆ ಅಗತ್ಯ ಮಾಹಿತಿ ಮತ್ತು ಮಾರ್ಗದರ್ಶನ ನೀಡಲಾಗುತ್ತಿದೆ ಎಂದರು.

ರಫ್ತು ಉತ್ತೇಜನ ಮಂಡಳಿಗಳ ಮೂಲಕ ವಿದೇಶಿ ಖರೀದಿದಾರರ ಸಭೆ, ವ್ಯಾಪಾರ ಮೇಳ ಹಾಗೂ ಪ್ರದರ್ಶನಗಳನ್ನು ಆಯೋಜಿಸಲಾಗುತ್ತದೆ. ಇವುಗಳಲ್ಲಿ ಸ್ಥಳೀಯ ಉತ್ಪನ್ನಗಳನ್ನು ಪ್ರದರ್ಶಿಸುವುದರಿಂದ ವಿದೇಶಿ ಮಾರುಕಟ್ಟೆ ಪ್ರವೇಶಿಸಲು ಮತ್ತು ಹೆಚ್ಚಿನ ಆರ್ಡರ್‌ಗಳನ್ನು ಪಡೆಯಲು ಉದ್ಯಮಿಗಳಿಗೆ ಅವಕಾಶ ದೊರೆಯಲಿದೆ ಎಂದು ತಿಳಿಸಿದರು.

ಖಾದಿ ಮತ್ತು ಗ್ರಾಮೀಣ ಕೈಗಾರಿಕೆ ಇಲಾಖೆಯ ಉಪ ನಿರ್ದೇಶಕ ಸಿ.ಎನ್. ರಘು ಮಾತನಾಡಿ, ಕೊಡಗಿನ ಕಾಫಿ ಈಗಾಗಲೇ ವಿದೇಶಗಳಿಗೆ ರಫ್ತಾಗುತ್ತಿದ್ದು, ಜಿಲ್ಲೆಯ ಉದ್ಯಮಿಗಳ ಸಂಖ್ಯೆಯೂ ಹೆಚ್ಚಾಗಬೇಕು. ಇದರಿಂದ ಸ್ಥಳೀಯವಾಗಿ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ. ನಿರುದ್ಯೋಗಿಗಳಿಗೆ ಸರ್ಕಾರ ನೀಡುತ್ತಿರುವ ತರಬೇತಿ ಮತ್ತು ವಿವಿಧ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಉಪಾಧ್ಯಕ್ಷ ಹಾಗೂ ಉದ್ಯಮಿ ಅಂಬೇಕಲ್ ನವೀನ್ ಮಾತನಾಡಿ, ಇಂತಹ ಕಾರ್ಯಾಗಾರಗಳಲ್ಲಿ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಕೊಡಗಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವುದರಿಂದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಸರ್ಕಾರ ಕೈಮಗ್ಗ ಮತ್ತು ಜವಳಿ ಮಳಿಗೆಗಳನ್ನು ತೆರೆದರೆ ಸ್ಥಳೀಯ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ದೊರೆಯಲಿದೆ ಎಂದರು.

ಉದ್ಯಮಿ ನಂದಕುಮಾರ್ ಮಾತನಾಡಿ, ಕೈಮಗ್ಗ ಮತ್ತು ಜವಳಿ ಮಳಿಗೆಗಳನ್ನು ಆರಂಭಿಸುವ ಮೂಲಕ ಸ್ಥಳೀಯ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಬೇಕು. ಉದ್ಯಮಿಗಳು ಸರ್ಕಾರದ ವಿವಿಧ ಯೋಜನೆಗಳನ್ನು ಬಳಸಿಕೊಂಡು ಸಮಾಜದ ಆರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಹೇಳಿದರು.

ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಎಚ್.ಆರ್. ರಾಮಕೃಷ್ಣ ಮಾತನಾಡಿ, ಜವಳಿ ಉತ್ಪನ್ನಗಳ ರಫ್ತು ವಹಿವಾಟನ್ನು 2030ರ ವೇಳೆಗೆ 100 ಬಿಲಿಯನ್ ಡಾಲರ್‌ಗೆ ಹೆಚ್ಚಿಸುವ ಉದ್ದೇಶದಿಂದ ರಾಷ್ಟ್ರಮಟ್ಟದಲ್ಲಿ ಯೋಜನೆ ರೂಪಿಸಲಾಗಿದೆ. ಇದರ ಭಾಗವಾಗಿ ಕೊಡಗಿನಲ್ಲಿ ಕಾರ್ಯಾಗಾರ ಆಯೋಜಿಸಿ ಉದ್ಯಮಿಗಳಿಗೆ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಲಾಗುತ್ತಿದೆ ಎಂದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಸಕಾಲಕ್ಕೆ ಸರ್ಕಾರಿ ಬಸ್ ಕಲ್ಪಿಸುವಂತೆ ಗ್ರಾಮಸ್ಥರ ಆಗ್ರಹ

ಕಾರ್ಯಕ್ರಮದಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕ ಬಿ.ಎಸ್. ಸೋಮಶೇಖರ್, ಇಲಾಖೆಯ ಸಿಬ್ಬಂದಿಗಳಾದ ಭಾಗ್ಯ, ದೀಪ್ತಿ, ರಶ್ಮಿ ಹಾಗೂ ಮೇಘಾ ನಾಯಕ್ ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ರೈತರಿಗೆ ಪ್ರೋತ್ಸಾಹಧನ ನೀಡಿ, ಗ್ರಾಹಕರ ಮೇಲೆ ಹೊರೆ ಹಾಕಬೇಡಿ: ನಾಗರಾಜ ಲಂಬು

ನವೆಂಬರ್ 1ರಿಂದ ಹಾಲಿನ ಬೆಲೆ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿರುವುದನ್ನು ಭಾರತೀಯ...

ಬಾಗಲಕೋಟೆ |ಇಳಕಲ್‌ನಲ್ಲಿ ನ.1ರಂದು ‘ಯುವ ಸಾಂಸ್ಕೃತಿಕ ಉತ್ಸವ

2026’ಯುವಜನರಲ್ಲಿ ನೈತಿಕ ಮೌಲ್ಯಗಳು, ಸಾಮಾಜಿಕ ಜಾಗೃತಿ, ಸೌಹಾರ್ದತೆ ಹಾಗೂ ಸಕಾರಾತ್ಮಕ ಚಿಂತನೆಗಳನ್ನು...

ರಾಯಚೂರು | ಲಾರಿ-ಟಿಟಿ ವಾಹನ ಡಿಕ್ಕಿ: 13 ಜನರಿಗೆ ಗಾಯ

ರಸ್ತೆ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಟಿಟಿ ವಾಹನ ಢಿಕ್ಕಿ ಹೊಡೆದಿದ್ದು, ಓರ್ವನ...

ರಾಯಚೂರು | ಹಿರಿಯ ಸಾಹಿತಿ ವೀರಹನುಮಾನ, ಹಗಲುವೇಷ ಕಲಾವಿದ ಈರಣ್ಣಗೆ ರಾಜ್ಯೋತ್ಸವ ಪ್ರಶಸ್ತಿ

2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ರಾಯಚೂರು ಜಿಲ್ಲೆಯ ಹಿರಿಯ ಸಾಹಿತಿ...