ಕೊಡಗು | ಮೊದಲ ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ; ಅಧ್ಯಕ್ಷರಾಗಿ ಸಾಹಿತಿ ಬಿ.ಎ. ಶಂಶುದ್ದೀನ್ ಆಯ್ಕೆ: ಉಮರ್ ಯು. ಎಚ್

Date:

ಕೊಡಗು ಜಿಲ್ಲೆಯಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ಜಿಲ್ಲಾ ಮಟ್ಟದ ಬ್ಯಾರಿ ಸಾಹಿತ್ಯ ಸಮ್ಮೇಳನಕ್ಕೆ ಸಿದ್ಧತೆ ಕೈಗೊಳ್ಳಲಾಗಿದೆ. ಕೊಡಗು ಬ್ಯಾರೀಸ್ ವೆಲ್ಫೇರ್ ಟ್ರಸ್ಟ್ ಸಹಯೋಗದೊಂದಿಗೆ ಏಪ್ರಿಲ್ 28ರಂದು ಮಡಿಕೇರಿ ನಗರದ ಕಾವೇರಿ ಸಭಾಂಗಣದಲ್ಲಿ ನಡೆಯಲಿದ್ದು, ಹಿರಿಯ ಸಾಹಿತಿ ಕವಿ ಬಿ.ಎ. ಶಂಶುದ್ದೀನ್ ಅವರನ್ನು ಮೊದಲ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಉಮರ್ ಯು. ಹೆಚ್ ತಿಳಿಸಿದ್ದಾರೆ.

- Advertisement -

ಈದಿನ.ಕಾಮ್ ಜೊತೆ ಮಾತನಾಡಿ, ಸಮ್ಮೇಳನದ ಯಶಸ್ಸಿಗಾಗಿ ಎಲ್ಲಾ ರೀತಿಯ ಸಿದ್ಧತೆಗಳು ನಡೆಯುತ್ತಿವೆ. ಬ್ಯಾರಿ ಭಾಷೆಯನ್ನು ಉಳಿಸಿ ಬೆಳೆಸುವುದು ಸಮುದಾಯದ ಹೊಣೆಗಾರಿಕೆಯಾಗಿದೆ. ಪೋಷಕರು ಮನೆಯಲ್ಲಿಯೇ ಮಕ್ಕಳಿಗೆ ಆಂಗ್ಲ ಭಾಷೆಯ ಜೊತೆಗೆ ಬ್ಯಾರಿ ಭಾಷೆಯನ್ನು ಕಲಿಸಬೇಕು. ಇಲ್ಲದಿದ್ದರೆ ಮುಂದಿನ ಪೀಳಿಗೆಗೆ ಈ ಭಾಷೆ ಮರೆಯಾಗುವ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಸಮ್ಮೇಳನದ ಅಂಗವಾಗಿ ಬೆಳಗ್ಗೆ 9:30ಕ್ಕೆ ನಗರದ ಕ್ರೆಸೆಂಟ್ ಶಾಲೆಯಿಂದ ಕಾವೇರಿ ಸಭಾಂಗಣದವರೆಗೆ ಸಮ್ಮೇಳನಾಧ್ಯಕ್ಷರ ಭವ್ಯ ಮೆರವಣಿಗೆ ನಡೆಯಲಿದೆ. ಧಫ್ ಸೇರಿದಂತೆ ವಿವಿಧ ಜನಪದ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ. ಬಳಿಕ ಚರ್ಚಾಗೋಷ್ಠಿ, ಕವಿಗೋಷ್ಠಿ, ಸಾಧಕರಿಗೆ ಸನ್ಮಾನ, ಧಫ್ ನೃತ್ಯ, ಬ್ಯಾರಿ ಪ್ರಹಸನ, ಒಪ್ಪನೆ ಮತ್ತು ಬ್ಯಾರಿ ಹಾಡುಗಳ ಕಾರ್ಯಕ್ರಮಗಳು ನಡೆಯಲಿವೆ.

ಮಧ್ಯಾಹ್ನ 2ರಿಂದ 4.30ರವರೆಗೆ ಸಮ್ಮೇಳನಾಧ್ಯಕ್ಷರ ಭಾಷಣದ ಮೇಲೆ ಚರ್ಚಾಗೋಷ್ಠಿ ನಡೆಯಲಿದೆ. ಇದೇ ಮೊದಲ ಬಾರಿಗೆ ಅಕಾಡೆಮಿಯ ಸಮ್ಮೇಳನದಲ್ಲಿ ಅಧ್ಯಕ್ಷರ ಭಾಷಣದ ವಿಷಯವನ್ನೇ ಆಧರಿಸಿ ಸಾಧಕ-ಬಾಧಕಗಳ ಚರ್ಚೆ ನಡೆಸಲಾಗುತ್ತಿದೆ.

ಮೆರವಣಿಗೆಯನ್ನು ನಗರಸಭಾ ಸದಸ್ಯ ಅಮೀನ್ ಮೊಹಿಸೀನ್ ಉದ್ಘಾಟಿಸಲಿದ್ದು, ಸಭಾ ಕಾರ್ಯಕ್ರಮವನ್ನು ಮಾಜಿ ಎಂಎಲ್ಸಿ ಬಿ.ಎಂ. ಫಾರೂಕ್ ಉದ್ಘಾಟಿಸಲಿದ್ದಾರೆ. ಹಿರಿಯ ಸಾಹಿತಿ ಎಸ್.ಜಿ. ಸಿದ್ದರಾಮಯ್ಯ, ಟಿ.ಎಂ. ಶಾಹೀದ್ ತೆಕ್ಕಿಲ್, ಮೆಹೋಜ್ ಖಾನ್, ಅಜ್ಜನಿಕಂಡ ಮಹೇಶ್ ನಾಚಯ್ಯ, ಸದಾನಂದ ಮಾವಾಜಿ, ಎಂ.ಪಿ. ಕೇಶವ ಕಾಮತ್, ಅನಂತಶಯನ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಸಮಾರೋಪ ಸಮಾರಂಭವನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಉದ್ಘಾಟಿಸಲಿದ್ದು, ಶಾಸಕರಾದ ಎ.ಎಸ್. ಪೊನ್ನಣ್ಣ ಮತ್ತು ಡಾ. ಮಂತರ್ ಗೌಡ ಉಪಸ್ಥಿತರಿರುವರು.

ಈ ಸುದ್ದಿ ಓದಿದ್ದೀರಾ?ಗಾಜಿಪುರ ಅತ್ಯಾಚಾರ ಪ್ರಕರಣ | ಸೆಕ್ಷನ್ 163 ಜಾರಿ; ಅಖಿಲೇಶ್ ಭೇಟಿ ಘೋಷಣೆ ಬೆನ್ನಲ್ಲೇ  ಸಂತ್ರಸ್ತೆಯ ಗ್ರಾಮಕ್ಕೆ ಪ್ರವೇಶ ನಿರ್ಬಂಧ  

ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಈ ಸಮ್ಮೇಳನಕ್ಕೆ 3 ಸಾವಿರಕ್ಕೂ ಹೆಚ್ಚು ಬ್ಯಾರಿ ಭಾಷಿಕರು ಭಾಗವಹಿಸುವ ನಿರೀಕ್ಷೆಯಿದೆ. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಬ್ಯಾರಿ ಸಮುದಾಯದ 11 ಮಂದಿಯನ್ನು ಸನ್ಮಾನಿಸಲಾಗುವುದು. ಸಮಾಜಸೇವೆ, ಸಾಹಿತ್ಯ-ಪತ್ರಿಕೋದ್ಯಮ, ಯಾಂತ್ರಿಕ, ನಾಟಿ ವೈದ್ಯ, ಶಿಕ್ಷಣ ಸೇರಿದಂತೆ ಹಲವು ಕ್ಷೇತ್ರಗಳ ಸಾಧಕರಿಗೆ ಗೌರವ ಸಲ್ಲಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ನೌಕರರಿಗೆ, ಸಾರ್ವಜನಿಕರಿಗೆ ಅಂಚೆ ಮೂಲಕ ಕನ್ನಡ ಶಿಕ್ಷಣ ತರಬೇತಿಗೆ ಅರ್ಜಿ ಅಹ್ವಾನ

ಕನ್ನಡ ಬಾರದ ಸರ್ಕಾರಿ ನೌಕರರು ಹಾಗೂ ಸಾರ್ವಜನಿಕರಿಗಾಗಿ ಕನ್ನಡ ಮತ್ತು ಸಂಸ್ಕೃತಿ...

ಮುಂಡಗೋಡ | ಮದ್ಯದ ಅಮಲಿನಲ್ಲಿ ಪತ್ನಿಯ ಹೊಟ್ಟೆಗೆ ಡಬ್ಬಣದಿಂದ ಚುಚ್ಚಿದ ಪತಿ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ಮದ್ಯ ಸೇವಿಸಿ ಮನೆಗೆ ಬಂದ ಪತಿ,...

ಬಾಗೇಪಲ್ಲಿ | ಬಿಜೆಪಿ-ಜೆಡಿಎಸ್ ನೇತೃತ್ವದ ಮೈತ್ರಿಕೂಟ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ

ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ. ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ನಾಲ್ಕು ಕ್ಷೇತ್ರದ...

ಕೋಲಾರ | ಡಿಸಿಸಿ ಬ್ಯಾಂಕ್ ಅಕ್ರಮಗಳ ತನಿಖೆಗೆ ಸಹಕರಿಸಲಿ: ಅನಿಲ್‌ಕುಮಾರ್ ಒತ್ತಾಯ

ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್‌ನಲ್ಲಿ ನಡೆದಿರುವ ಹಣಕಾಸು ಅಕ್ರಮಗಳ...