ಕೊಡಗು ಕ್ರೀಡಾ ಸಾಧನೆ ದೇಶಕ್ಕೆ ಮಾದರಿ: ಎ.ಎಸ್. ಪೊನ್ನಣ್ಣ

Date:

ಕ್ರೀಡಾ ಕ್ಷೇತ್ರದಲ್ಲಿ ಕೊಡಗು ಜಿಲ್ಲೆ ಸಾಧಿಸಿರುವ ಕೀರ್ತಿ, ಯಶಸ್ಸು ಮತ್ತು ಗೌರವವು ದೇಶದ ಇತರ ಯಾವುದೇ ಜಿಲ್ಲೆಗಳಿಗೆ ಲಭಿಸಿಲ್ಲ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಅಭಿಪ್ರಾಯಪಟ್ಟರು.

- Advertisement -

ಇಲ್ಲಿ ನಡೆದ ಕೊಡವ ಕೌಟುಂಬಿಕ ಹಾಕಿ ನಮ್ಮೆ 2026 ‘ಚೇನಂಡ ಕಪ್’ ಫೈನಲ್ ಪಂದ್ಯಾವಳಿಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಕೊಡಗು ಜಿಲ್ಲೆ ದೇಶದ ಪುಟ್ಟ ಜಿಲ್ಲೆಯಾಗಿದ್ದರೂ ಕ್ರೀಡಾ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದೆ ಎಂದು ಹೇಳಿದರು. ಜಿಲ್ಲೆಯಿಂದಲೇ 18 ಒಲಂಪಿಯನ್‌ಗಳು ದೇಶಕ್ಕೆ ದೊರೆತಿರುವುದು ಕೊಡಗಿನ ಕ್ರೀಡಾ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ಪುಟ್ಟ ಜಿಲ್ಲೆ ಇಷ್ಟೊಂದು ದೊಡ್ಡ ಸಾಧನೆ ಮಾಡಿರುವುದು ನಮಗೆಲ್ಲ ಹೆಮ್ಮೆಯ ಸಂಗತಿಯಾಗಿದೆ ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಕ್ರೀಡಾ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಹೆಜ್ಜೆ ಇಡಲಾಗಿದೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಕ್ರೀಡಾ ತರಬೇತಿ ಕೇಂದ್ರ ಸ್ಥಾಪನೆಗೆ ₹30 ಕೋಟಿ ಅನುದಾನವನ್ನು ಬಜೆಟ್‌ನಲ್ಲಿ ಒದಗಿಸಿದ್ದಾರೆ. ಇದೇ ಯೋಜನೆಗೆ ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್ ಅವರು ಪ್ರತಿ ವರ್ಷ ₹5 ಕೋಟಿ ರೂಗಳಂತೆ ಒಟ್ಟು ₹15 ಕೋಟಿ ರೂಗಳನ್ನು ನೀಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಚೆಲುವಾಂಬ ಆಸ್ಪತ್ರೆಯಲ್ಲಿ ಶಿಶುಗಳ ಸರಣಿ ಸಾವು: ವ್ಯವಸ್ಥೆಯ ವೈಫಲ್ಯವೇ?

ಇದೇ ಸಂದರ್ಭದಲ್ಲಿ, ಕೊಡಗು ಜಿಲ್ಲೆಗೆ ಕ್ರೀಡಾ ಕ್ಷೇತ್ರದಲ್ಲಿ ಇನ್ನಷ್ಟು ಉತ್ತೇಜನ ನೀಡುವ ಸಲುವಾಗಿ ಕೇಂದ್ರ ಸರ್ಕಾರದಿಂದ ಹೆಚ್ಚಿನ ನೆರವು ಒದಗಿಸಬೇಕೆಂದು ಕೇಂದ್ರ ಕ್ರೀಡಾ ಸಚಿವರಾದ ಡಾ. ಮನ್ಸುಖ್ ಮಾಂಡವೀಯ ಅವರಿಗೆ ಎ.ಎಸ್. ಪೊನ್ನಣ್ಣ ಹಾಗೂ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಅರುಣ್ ಮಾಚಯ್ಯ ಲಿಖಿತ ಮನವಿ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...