ಕೋಲಾರ | ‘ಕೇಂದ್ರದ ಅನುದಾನ ಅಕ್ಕಿ’; ಪಡಿತರ ವಿತರಣೆ ವೇಳೆ ಮುದ್ರಿತ​ ಬಿಲ್​ ವ್ಯವಸ್ಥೆ ಜಾರಿ

Date:

Advertisements

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ, ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿದೆ. ತಾನು ನೀಡುತ್ತಿರುವ ಅನುದಾನಗಳಿಗೆ ತನ್ನ ಹೆಸರು ಹಾಕಿಕೊಂಡು ಪ್ರಚಾರ ನಡೆದುಕೊಳ್ಳುತ್ತಿದೆ. ಅದರ ಭಾಗವಾಗಿ, ರಾಜ್ಯದಲ್ಲಿ ಗ್ರಾಹಕರಿಗೆ ಪಡಿತರ ವಿತರಣೆ ವೇಳೆ ಹೊಸದಾಗಿ ಮುದ್ರಿತ ಬಿಲ್​ ವ್ಯವಸ್ಥೆ ಜಾರಿ ಮಾಡಿದೆ. ಬಿಲ್​​ನಲ್ಲಿ ವಿತರಣೆ ಮಾಡುವ ಅಕ್ಕಿಯ ವಿವರದ ಜೊತೆಗೆ ಜನರಿಗೆ ನೀಡುವ ಪಡಿತರ ಅಕ್ಕಿ ಕೇಂದ್ರ ಸರ್ಕಾರದ ಅನುದಾನ ಎಂದು ಮುದ್ರಣ ಮಾಡಲಾಗುತ್ತಿದೆ.

ಸದ್ಯ ಕೋಲಾರ ಸೇರಿದಂತೆ ರಾಜ್ಯಾದ್ಯಂತ ಮುಂದಿನ ತಿಂಗಳಿನಿಂದ ಅಧಿಕೃತವಾಗಿ ಬಿಲ್​ ವ್ಯವಸ್ಥೆ ಜಾರಿ ಮಾಡಲಿದೆ. ಈ ಮೊದಲು ಪಡಿತರ ವಿತರಣೆ ವೇಳೆಯಲ್ಲಿ ಕೈನಲ್ಲಿ ಬರೆದಿದ್ದ ಬಿಲ್ ವಿತರಣೆ ಮಾಡಲಾಗುತ್ತಿತ್ತು. ಹೊಸ ಬಿಲ್​ ವ್ಯವಸ್ಥೆಯಿಂದಾಗಿ ಅಕ್ಕಿ ವಿತರಣೆಯ ಅಕ್ರಮಕ್ಕೂ ಕೂಡ ಕಡಿವಾಣ ಬೀಳಲಿದೆ.

ಕಳೆದ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್​ ಉಚಿತವಾಗಿ ಹತ್ತು ಕೆಜಿ ಅಕ್ಕಿ ಕೊಡುವ ಅನ್ನಭಾಗ್ಯ ಯೋಜನೆಯನ್ನು ಜಾರಿ ತರೋದಾಗಿ ಹೇಳಿತ್ತು. ಕಾಂಗ್ರೆಸ್​ ಐದು ಗ್ಯಾರಂಟಿ ಯೋಜನೆಗಳ ಪೈಕಿ ಈ ಅನ್ನಭಾಗ್ಯ ಯೋಜನೆ ಕೂಡಾ ಒಂದಾಗಿತ್ತು. ಈ ನಿಟ್ಟಿನಲ್ಲಿ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕೇಂದ್ರ ಸರ್ಕಾರ ಪಡಿತರ ವಿತರಣೆಯಲ್ಲಿ ಹೊಸ ಬಿಲ್​ ಪದ್ದತಿಯನ್ನು ಜಾರಿಗೆ ತರುವ ಮೂಲಕ ಜನರಿಗೆ ಯಾವ ಸರ್ಕಾರ ಎಷ್ಟು ಅಕ್ಕಿ ಕೊಡ್ತಿದೆ. ಅಕ್ಕಿಯಲ್ಲಿ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಗರೀಬ್​ ಕಲ್ಯಾಣ ಅನ್ನೊ ಯೋಜನೆ ಅನುದಾನ ಎಷ್ಟು? ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯ ಅನುದಾನ ಎಷ್ಟು? ಅನ್ನೋದನ್ನು ಹೊಸ ಬಿಲ್​ನಲ್ಲಿ ವಿವರವಾಗಿ ಮುದ್ರಿಸುತ್ತದೆ.

Advertisements

ಜೊತೆಗೆ, ಕುಟುಂಬದಲ್ಲಿ ಎಷ್ಟು ಸದಸ್ಯರಿದ್ದಾರೆ, ಎಷ್ಟು ಕೆಜಿ ಅಕ್ಕಿ, ಎಷ್ಟು ಕೆಜಿ ರಾಗಿ ಅಥವಾ ಜೋಳ ವಿತರಣೆಯಾಗಿದೆ ಅದಕ್ಕೆ ತಗುಲುವ ಮೊತ್ತವೆಷ್ಟು? ಆ ಅನುದಾನ ಎಲ್ಲಿಂದ ಬಂದಿದೆ? ರಾಜ್ಯ ಸರ್ಕಾರದ ಅನುಧಾನ ಎಷ್ಟು? ಅದು ಯಾವ ರೀತಿ ಗ್ರಾಹಕರಿಗೆ ತಲುಪಿದೆ ಅನ್ನೋ ಪ್ರತಿಯೊಂದು ಮಾಹಿತಿಯನ್ನು ಸದ್ಯ ಹೊಸ ಬಿಲ್​ನಲ್ಲಿ ದಾಖಲಾಗುವಂತೆ ಮಾಡಿದೆ.  ಪಡಿತರ ಅಕ್ಕಿಯಲ್ಲಾಗುತ್ತಿದ್ದ ಸೋರಿಕೆ ಹಾಗೂ ಅವ್ಯವಹಾರವನ್ನು ತಡೆಯಲು ಈ ವ್ಯವಸ್ಥೆ ಅನುಕೂಲವಾಗಲಿದೆ.

ಸದ್ಯ ಸರ್ಕಾರಿ ನ್ಯಾಯ ಬೆಲೆ ಅಂಗಡಿಯಲ್ಲಿ ಜನರಿಗೆ ವಿತರಣೆ ಮಾಡುತ್ತಿರುವ ಅಕ್ಕಿ ಮತ್ತು ರಾಗಿ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಗರೀಬ್​ ಕಲ್ಯಾಣ ಅನ್ನ ಯೋಜನೆಯದ್ದು ಅನ್ನೋದನ್ನು ವಿವರವಾಗಿ ಮುದ್ರಿಸಿ ನೀಡುತ್ತಿದೆ. ಹಾಗಾಗಿ ಲೋಕಸಭಾ ಚುನಾವಣೆ ವೇಳೆಗೆ ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಲ್ಲಿ ಕೇಂದ್ರದ ಪಾಲೂ ಇದೆ ಎಂದು ಜನರಿಗೆ ಅರ್ಥಮಾಡಿಸುವುದು ಕೇಂದ್ರ ಸರ್ಕಾರದ ಈ ಹೊಸ ಪ್ರಿಂಟೆಡ್​ ಬಿಲ್​ನ ಉದ್ದೇಶ. ಸದ್ಯ ಈ ವ್ಯವಸ್ಥೆಗೆ ಗ್ರಾಹಕರಿಂದಲೂ ಉತ್ತಮ ಸ್ಪಂದನೆ ಸಿಕ್ಕಿದ್ದು ಇದು ಅಕ್ಕಿ ವಿತರಣೆಯ ಸೋರಿಕೆಯನ್ನು ತಡೆಯಲಿದೆ ಅನ್ನೋದು ಗ್ರಾಹಕರ ಮಾತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X