ಕೋಲಾರ | ನಸೀರ್ ವಿರುದ್ಧ ಕ್ರಮ ಕಾಂಗ್ರೆಸ್‌ಗೆ ಮುಳುವಾಗಲಿದೆ, ವಾಪಸ್‌ ಸ್ಥಾನಮಾನ ನೀಡಿ: ಕಾಂಗ್ರೆಸ್‌ ಮುಖಂಡ ಚಂದ್ರಮೌಳಿ ಆಗ್ರಹ

Date:

ದಾವಣಗೆರೆ ದಕ್ಷಿಣ ಉಪಚುನಾವಣೆ ವಿಚಾರವಾಗಿ ನಸೀರ್ ಅಹಮದ್ ವಿರುದ್ಧ ಶಿಸ್ತು ಕ್ರಮ ಕೈಗೊಂಡಿರುವುದು ವಿಪಕ್ಷಗಳ ಕೈಗೆ ದೊಣ್ಣೆ ಕೊಟ್ಟು ಹೊಡೆಸಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. 2028ರ ವಿಧಾನಸಭೆ ಚುನಾವಣೆ ಮುಂದಿದ್ದು, ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರಲು ಸಂಘಟನೆ ನಡೆಸಬೇಕಾದ ಸಂದರ್ಭದಲ್ಲಿ ಇಂಥ ಪರಿಸ್ಥಿತಿ ಬರಬಾರದಿತ್ತು ಎಂದು ಕಾಂಗ್ರೆಸ್ ಮುಖಂಡ ಎಂ.ಚಂದ್ರಮೌಳಿ ಅಸಮಾಧಾನ ವ್ಯಕ್ತ‍ಪಡಿಸಿದರು.

- Advertisement -

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವಿಲ್ಲಿ ಒಬ್ಬ ವ್ಯಕ್ತಿಯ ಪರವಾಗಿ ಮಾತನಾಡಲು ಬಂದಿಲ್ಲ. ಪಕ್ಷ ಸಂಘಟನೆಗೆ, ಸಿದ್ಧಾಂತಕ್ಕಾಗಿ ಐದು ದಶಕ ಹಗಲಿರುಳು ಶ್ರಮಿಸಿರುವ ನಸೀರ್ ಅವರಿಗೆ ಅನ್ಯಾಯವಾಗಿದೆ. ಅವರನ್ನು ಮುಖ್ಯಮಂತ್ರಿ ರಾಜಕೀಯ ‌ಕಾರ್ಯದರ್ಶಿ ಸ್ಥಾನದಿಂದ ತೆಗೆದು ಹಾಕಿರುವ ಅನ್ಯಾಯ ವಿರುದ್ಧ ದನಿ ಎತ್ತಲು ಬಂದಿದ್ದೇವೆ. ಅವರ ಮೇಲೆ ಬಂದಿರುವ ಆರೋಪಗಳ ಮರು ಪರಿಶೀಲನೆ ಮಾಡಿ ಸ್ಥಾನಮಾನವನ್ನು ಮತ್ತೆ ನೀಡಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ನಸೀರ್ ಅವರು ಕೆಪಿಸಿಸಿಯಲ್ಲಿ ನಾನಾ ಹುದ್ದೆಯಲ್ಲಿ ಕೆಲಸ ಮಾಡಿದ್ದಾರೆ. ಬಿನ್ನಿಪೇಟೆಯಲ್ಲಿ ಗೆದ್ದು ಸಚಿವರಾಗಿ ಕೆಲಸ ಮಾಡಿದ ಅನುಭವವಿದೆ. ಕೋಲಾರ ಜಿಲ್ಲೆಯಲ್ಲಿ ಅಹಿಂದ ವರ್ಗಗಳಿಗೆ ತೊಂದರೆ ಆದಾಗ ರಕ್ಷಣೆಗೆ ಬಂದವರು. 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ನಸೀರ್ ಕೂಡ ಕಾರಣ. ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶೇ 90ರಷ್ಟು ಅಲ್ಪಸಂಖ್ಯಾತರ ಮತ ಹಾಕಿಸಿ ಕಾಂಗ್ರೆಸ್ ಗೆಲುವಿಗೆ ಕಾರಣರಾಗಿದ್ದಾರೆ. ತೆಲಂಗಾಣ ರಾಜ್ಯಕ್ಕೂ ಹೋಗಿ ಸಮುದಾಯದವರನ್ನು ಭೇಟಿ ಮಾಡಿ ಕಾಂಗ್ರೆಸ್‌ಗೆ ಮತ ಹಾಕಿಸಿದ್ದಾರೆ ಎಂದು ಹೇಳಿದರು.

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷದಲ್ಲಿ ಉಂಟಾದ ಗೊಂದಲ ಪ್ರಸ್ತಾಪಿಸಿದ ಅವರು, ಮೃತ ಶಾಸಕರ ಕುಟುಂಬಕ್ಕೆ ಟಿಕೆಟ್ ನೀಡುವುದು ಕಾಂಗ್ರೆಸ್ ಸಂಪ್ರದಾಯ. ಸಮರ್ಥ ಅವರಿಗೆ ಟಿಕೆಟ್ ಕೊಟ್ಟ ಮೇಲೆ ಮುಸ್ಲಿಂ ಸಮುದಾಯ ಅಸಮಾಧಾನಗೊಳ್ಳುತ್ತದೆ. ಟಿಕೆಟ್‌ ಕೊಡಿಸುವಂತೆ ನಸೀರ್ ಹಾಗೂ ಸಚಿವ ಜಮೀರ್ ಅಹ್ಮದ್‌ ಅವರ ಮೇಲೆ ಒತ್ತಡ ಬರುತ್ತದೆ. ಹೀಗಾಗಿ, ವರಿಷ್ಠರು ಅಲ್ಲಿಗೆ ಹೋಗಿ ಸಮುದಾಯವನ್ನು ಮನವೊಲಿಸುವಂತೆ ನಸೀರ್ ಅವರಿಗೆ ಸೂಚನೆ ನೀಡಿದ್ದರು. ಆದರೆ, ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ ಪ್ರಚಾರದಲ್ಲಿದ್ದ ಅವರು ದಾವಣಗೆರೆಗೆ ಹೋಗಲಿಲ್ಲ. ಅದನ್ನೇ ಘೋರ ಅಪರಾಧವೆಂಬಂತೆ ಪರಿಗಣಿಸಿದ ಹೈಕಮಾಂಡ್ ಏಕಾಏಕಿ ಶಿಸ್ತಿನ ಕ್ರಮ ಕೈಗೊಂಡಿದೆ. ಅವರನ್ನು ಕರೆಸಿ ನಾಲ್ಕು ಗೋಡೆ ಮಧ್ಯೆ ಮಾತನಾಡಿಸಿ ಸಮಜಾಯಿಷಿ ಪಡೆಯಬೇಕಿತ್ತು ಎಂದರು.

ನಸೀರ್ ಕೇವಲ ಅಲ್ಪಸಂಖ್ಯಾತರ ಮುಖಂಡ ಅಲ್ಲ; ಹಿಂದುಳಿದ ವರ್ಗಗಳ, ಸರ್ವಧರ್ಮ ಸಂಘಟನೆ ಮಾಡುವ ವ್ಯಕ್ತಿ. ಅವರ ವಿರುದ್ಧ ಕ್ರಮ ಆಗಿರುವ ಕಾರಣ ಅಲ್ಪಸಂಖ್ಯಾತರು, ಅಭಿಮಾನಿಗಳು ಕೋಪಗೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್‌ ವಿರುದ್ಧ ಮಾತನಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ನಮ್ಮಲ್ಲಿ ಇಂಥ ಗೊಂದಲಬೇಕಿರಲಿಲ್ಲ. ಕೂಡಲೇ ಗೊಂದಲ ನಿವಾರಿಸಿ ಪಕ್ಷ ಕಟ್ಟುವ ಕೆಲಸ ಮಾಡಬೇಕು ಎಂದು ಎಚ್ಚರಿಸಿದರು.

ಹಿಂದೆ ದಲಿತರು ಹಾಗೂ ಮುಸ್ಲಿಮರು ಕಾಂಗ್ರೆಸ್ ಪಕ್ಷವನ್ನು ಗೌರವಯುತವಾಗಿ ನಡೆಸಿಕೊಂಡಿದ್ದಾರೆ. ಅವರನ್ನು ನಿರ್ಲಕ್ಷ್ಯ ಮಾಡಬಾರದು. ಈಗ ಆಗಿರುವ ತಪ್ಪುಗಳನ್ನು ಸರಿಪಡಿಸಿಕೊಂಡು ಮುನ್ನಡೆಯಬೇಕು ಎಂದೂ ಹೇಳಿದರು.

ಇದನ್ನು ಓದಿದ್ದೀರಾ..? ಚಿಕ್ಕಬಳ್ಳಾಪುರ | 3 ಕೋಟಿಯಲ್ಲಿ ಚಿಂತಾಮಣಿ ಸಿಂಗಾಪುರ ಮಾಡಲಾಗಲ್ಲ: ನಿಮ್ಮ ಕ್ಷೇತ್ರಕ್ಕೆ ನೂರಾರುಕೋಟಿ ಅನುದಾನ ಕೊಟ್ಟಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಎಸ್‌ಸಿ ಘಟಕದ ಕಾರ್ಯಕಾರಿಣಿ ಸದಸ್ಯ ಗೋವಿಂದರಾಜು, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಪಾರೇಹೊಸಹಳ್ಳಿ ನಾರಾಯಣಸ್ವಾಮಿ, ದಲಿತ ಮುಖಂಡರಾದ ಸಿ.ವೆಂಕಟೇಶ್, ಎಂ.ವೆಂಕಟೇಶ್ ಮೂರ್ತಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...