ಕೋಲಾರ | ಸಾರ್ವಜನಿಕ ಆಸ್ಪತ್ರೆಯಲ್ಲಿ ಔಷಧಿಗೆ ಹಣ ಕೇಳಿದರೆ ಕ್ರಮ: ಶಾಸಕ ಕೊತ್ತೂರು ಮಂಜುನಾಥ್

Date:

ಸಾರ್ವಜನಿಕ ಆಸ್ಪತ್ರೆಗೆ ಬರುವ ರೋಗಿಗಳಿಗೆ ಅಗತ್ಯ ಚಿಕಿತ್ಸೆ ಒದಗಿಸುವುದರ ಜೊತೆಗೆ‌ ಅಗತ್ಯವಾದ ಔಷಧಿಗಳ ವಿತರಣೆಗೆ ಕ್ರಮ ಕೈಗೊಳ್ಳಬೇಕು. ಔಷಧಿಗಳನ್ನು ಹೊರಗೆ ತೆಗೆದುಕೊಳ್ಳಿ ಎಂದು ಚೀಟಿ ಬರೆದು ಕೊಡುವುದು, ರೋಗಿಗಳ ಬಳಿ ಹಣ ಕೇಳುವುದು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮಕ್ಕೆ ಶಿಫಾರಸು ಮಾಡಲಾಗುತ್ತದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

- Advertisement -

ಕೋಲಾರ ನಗರದ ಕ್ಲಾಕ್ ಟವರ್ ಬಳಿಯಿರುವ ದರ್ಗಾ ಮೊಹಲ್ ಆಸ್ಪತ್ರೆಗೆ ಭೇಟಿ ನೀಡಿ, ಕುಂದುಕೊರತೆಗಳನ್ನು ಆಲಿಸಿ ಮಾತನಾಡಿದ ಅವರು, “ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಸಾರ್ವಜನಿಕರಲ್ಲಿ ನಂಬಿಕೆ ಬರುವಂತೆ ನಿಗಾ ವಹಿಸಬೇಕು. ಈ ಆಸ್ಪತ್ರೆಯಲ್ಲಿ ಜನರ ಮೆಚ್ಚುಗೆ ಇದೆ. ಆದರೆ ದುರುಪಯೋಗವಾಗಬಾರದು. ಸರ್ಕಾರಿ ಆಸ್ಪತ್ರೆಯಲ್ಲಿನ ಚಿಕಿತ್ಸೆ ಉಚಿತ. ಹಣ ಕೊಡುವುದು- ತೆಗೆದುಕೊಳ್ಳುವುದು ತಪ್ಪು. ಆಸ್ಪತ್ರೆಯ ಔಷಧಗಳನ್ನೇ ರೋಗಿಗಳಿಗೆ ಉಚಿತವಾಗಿ ನೀಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

“ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳನ್ನು ಎಂಆರ್‌ಐ ಸ್ಕ್ಯಾನಿಂಗ್ ಮತ್ತು ಸಿಟಿ ಸ್ಕ್ಯಾನ್‌ಗೆ ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸದಂತೆ ಎಚ್ಚರ ವಹಿಸಬೇಕು. ರೋಗಿಗಳಿಗೆ ವೈದ್ಯರು, ಸಿಬ್ಬಂದಿ ಲಭ್ಯವಿರುವಂತೆ ನೋಡಿಕೊಳ್ಳಬೇಕು. ಆಸ್ಪತ್ರೆಯಲ್ಲಿ ಸಮರ್ಪಕವಾಗಿ ಲಿಫ್ಟ್ ನಿರ್ವಹಣೆ ಮಾಡಬೇಕು. ಬೋರ್ ವೆಲ್ ದುರಸ್ತಿ ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಲು ಕ್ರಮ ವಹಿಸಬೇಕು” ಎಂದು ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.

WhatsApp Image 2025 08 30 at 4.28.33 PM

ತಾಲೂಕು ಆರೋಗ್ಯಾಧಿಕಾರಿ ನಾರಾಯಣಸ್ವಾಮಿ ಮಾತನಾಡಿ, ಆಸ್ಪತ್ರೆಯಲ್ಲಿ ಲಿಫ್ಟ್, ಮೆಡಿಕಲ್ ಗ್ಯಾಸ್ ಲೈಫ್ ಲೈನ್, ನೀರು ಸೇರಿದಂತೆ ಮೂಲ ಸೌಲಭ್ಯಗಳ ಬಗ್ಗೆ ಶಾಸಕರಿಗೆ ಮನವರಿಕೆ ಮಾಡಿದರು. ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಕೂಡಲೇ ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಆರ್ಥಿಕ ಸಮಸ್ಯೆಯಿದ್ದರೆ ಅದನ್ನು ಅಧಿಕಾರಿಗಳು ಗಮನಕ್ಕೆ ತನ್ನಿ, ಸರ್ಕಾರದಿಂದ ಅಥವಾ ಸಿಎಸ್ಆರ್ ಅನುದಾನದಿಂದ ಕೊಡಿಸುವ ಕೆಲಸ ಮಾಡುತ್ತೇನೆ” ಎಂದರು.

ಇದನ್ನೂ ಓದಿ: ಕೋಲಾರ | ನಾಡ ಹಬ್ಬದಲ್ಲಿ ಜಾತಿ-ಧರ್ಮ ತರೋದು ಸರಿಯಲ್ಲ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ರಮೇಶ್, ಕೂಡಾ ಅಧ್ಯಕ್ಷ ಹನೀಫ್, ಉಪಾಧ್ಯಕ್ಷೆ ಸಂಗೀತಾ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಫೈರೋಜ್ ಖಾನ್, ನಗರಸಭೆ ಸದಸ್ಯರಾದ ಅಪ್ಸರ್, ಸಾದಿಕ್, ಷಫಿ,ರಫಿ, ಶಾಮೀರ್, ಜಿಲ್ಲಾ ಆರೋಗ್ಯಾಧಿಕಾರಿ ಶ್ರೀನಿವಾಸ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಸೈಫ್, ಹಿದಾಯತ್, ಮನ್ಸೂರ್ ಸೇರಿದಂತೆ ನಗರಸಭೆ ಸದಸ್ಯರು ಅಧಿಕಾರಿಗಳು ಕಾಂಗ್ರೆಸ್ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮಲೆನಾಡು-ಕರಾವಳಿ ಕೃಷಿ ವಲಯವಾಗಿ ಘೋಷಿಸಬೇಕು; ಸುಧೀರ್ ಕುಮಾರ್ ಮುರೊಳ್ಳಿ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಉಡುಪಿ | ಅನುಚಿತ ವರ್ತನೆಗೆ ಸಂತ್ರಸ್ತರನ್ನು ಹೊಣೆ ಮಾಡಲಾಗದು : ಡಾ. ದಿವ್ಯಾ ರಾಣಿ

ಉಡುಪು, ಸ್ನೇಹ ಅಥವಾ ಸಾಮಾಜಿಕ ಜಾಲತಾಣಗಳ ಬಳಕೆಯಂತಹ ವೈಯಕ್ತಿಕ ಆಯ್ಕೆಗಳು ಯಾವುದೇ...

ಭವಿಷ್ಯದ ಸಮಾಜವನ್ನು ರೂಪಿಸುವ ವಿದ್ಯಾರ್ಥಿ ಸಂಘಗಳ ಅಗತ್ಯವಿದೆ : ಶ್ರೀವರ್ಮ ಅಜ್ರಿ ಎಂ

ಶೈಕ್ಷಣಿಕ ಉನ್ನತಿಯೊಂದಿಗೆ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನೂ ಬೆಳೆಸುವ ಕಾಲೇಜು ವಿದ್ಯಾರ್ಥಿ ಸಂಘಗಳು...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...