ಕೋಲಾರ | ಅಕ್ರಮವಾಗಿ ಎಸ್‌ಟಿ ಪ್ರಮಾಣಪತ್ರ, ಇತರೆ ಸಮುದಾಯಗಳ ಎಸ್‌ಟಿ ಸೇರ್ಪಡೆ ವಿರೋಧಿಸಿ ಡಿಸಿಗೆ ಮನವಿ

Date:

ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ನಾಯಕ ತಳವಾರ ಹೆಸರಿನಲ್ಲಿ ಪ್ರವರ್ಗ-1ರಲ್ಲಿರುವ ಬೇರೆ ಸಮುದಾಯದವರು ಅಕ್ರಮವಾಗಿ ಎಸ್‌ಟಿ ಪ್ರಮಾಣಪತ್ರ ಮತ್ತು ಸಿಂಧುತ್ವ ಪ್ರಮಾಣ ಪತ್ರಗಳನ್ನು ತೆಗೆದುಕೊಂಡು ವಂಚನೆ ಹಾಗೂ ಅನ್ಯ ಸಮುದಾಯದವರನ್ನು ಎಸ್‌ಟಿ ಪಟ್ಟಿಗೆ ಸೇರಿಸಬಾರದು ಎಂದು ಒತ್ತಾಯಿಸಿ ವಾಲ್ಮೀಕಿ ನಾಯಕ ಸಂಘಟನೆಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಕೋಲಾರ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಲಾಯಿತು.

- Advertisement -

ಈ ಸಂದರ್ಭದಲ್ಲಿ ವಾಲ್ಮೀಕಿ ಗುರುಪೀಠದ ಕೋಲಾರ ಜಿಲ್ಲೆಯ ಧರ್ಮದರ್ಶಿ ಮಾಲೂರು ಎನ್ ವೆಂಕಟರಾಮ್ ಮಾತನಾಡಿ, “ಹಿಂದುಳಿದ ವರ್ಗಗಳ ಪ್ರವರ್ಗ-1ರಲ್ಲಿನ ಜಾತಿ ಸಮುದಾಯಗಳು ಪರಿಶಿಷ್ಟ ಪಂಗಡದ ನಕಲಿ ಜಾತಿ ಪ್ರಮಾಣ ಪತ್ರ ನೀಡುವುದು ಕೂಡಲೇ ನಿಲ್ಲಿಸಬೇಕು. ಪ್ರಮಾಣ ಪತ್ರ ಕೊಟ್ಟವರ ಮತ್ತು ಪಡೆದವರ ಮೇಲೆ ಹೈಕೋರ್ಟ್ ಆದೇಶದಂತೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇಂದು ಭಗತ್ ಸಿಂಗ್ ಹೆಸರು ಬಳಸುವ ಆರ್‌ಎಸ್‌ಎಸ್ ನಾಯಕರಿಗೆ...

ಜಾತ್ಯತೀತತೆ ಮತ್ತು ಸಮಾಜವಾದದ ಬಗ್ಗೆ ಗಟ್ಟಿಯಾಗಿ ಮಾತನಾಡುತ್ತಿದ್ದ, ಕೋಮುವಾದಿ ಧೋರಣೆಗಳನ್ನು ಕಟುವಾಗಿ ವಿಮರ್ಶಿಸುತ್ತಿದ್ದ ಭಗತ್ ಸಿಂಗ್ ಅವರನ್ನು ಇಂದು ಅದೇ ಸಿದ್ಧಾಂತಗಳ ವಿರುದ್ಧ ನಿಂತಿರುವ ಬಿಜೆಪಿ, ಆರ್‌ಎಸ್‌ಎಸ್, ಎಬಿವಿಪಿ ನಾಯಕರು ತಮ್ಮ 'ಸ್ವಂತ...

ಬರಗಾಲ | ಕಾಡಿನ ಮೌನದ ಹಿಂದೆ ಅಡಗಿದೆ ಜೀವಸಂಕುಲದ...

ಒಂದು ಆನೆಗೆ ದಿನಕ್ಕೆ ನೂರಾರು ಲೀಟರ್ ನೀರು ಮತ್ತು ನೂರಾರು ಕೆ.ಜಿ. ಆಹಾರ ಬೇಕಾಗುತ್ತದೆ. ಇನ್ನು ಕಾಡಿನಲ್ಲಿರುವ ಸಾವಿರಾರು ಆನೆಗಳು, ಹುಲಿಗಳು, ಚಿರತೆಗಳು, ಜಿಂಕೆಗಳು, ಕಾಡೆಮ್ಮೆಗಳು ಸೇರಿದಂತೆ ವಿವಿಧ ವನ್ಯಜೀವಿಗಳ ಅಗತ್ಯವನ್ನು ಲೆಕ್ಕಹಾಕಿದರೆ...

ಬಾಗಲಕೋಟೆ | ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ತರಗತಿ ಆರಂಭ;...

ಬಾಗಲಕೋಟೆ ಜಿಲ್ಲೆಯ ಜನರ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಕಾಲ ಕೂಡಿಬಂದಿದೆ. ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕು ಎಂಬ ದಶಕಗಳ ಬೇಡಿಕೆಗೆ ಸಾಕಾರ ರೂಪ ಸಿಕ್ಕಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ನಗರದ ಬಹುನಿರೀಕ್ಷಿತ...

“ರಾಜ್ಯದಲ್ಲಿ ತಳವಾರ ಜಾತಿ ಹೆಸರಿನಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ನೀಡಲು ಹೊರಟಿರುವುದನ್ನು ಕೂಡಲೇ ನಿಲ್ಲಿಸಬೇಕು. ಕಾಲೇಜು ಶಿಕ್ಷಣ ಮತ್ತು ಉನ್ನತ ಶಿಕ್ಷಣದಲ್ಲಿ ವ್ಯಾಸಂಗ ಮಾಡುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು. ರಾಜ್ಯದ ಎಲ್ಲ ವಿಶ್ವವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಅಧ್ಯಯನ ಪೀಠವನ್ನು ಸ್ಥಾಪಿಸಿ ವಾಲ್ಮೀಕಿ ಜನಾಂಗದ ಸಾಂಸ್ಕೃತಿಕ ಆರ್ಥಿಕ ಶೈಕ್ಷಣಿಕ ಹಾಗೂ ರಾಜಕೀಯ ವಿಷಯಗಳ ಅಧ್ಯಯನಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಪಡಿತರ ಅಕ್ಕಿ ಅಕ್ರಮ ದಾಸ್ತಾನು ; ಪಿಎಸ್ಐ ರಾಜುರೆಡ್ಡಿ ನೇತೃತ್ವದ ಸಿಬ್ಬಂದಿಗಳಿಂದ ದಾಳಿ

ಜಿಲ್ಲಾ ವಾಲ್ಮೀಕಿ ಸಂಘದ ಅಧ್ಯಕ್ಷ ಎಂ ಬಾಲಗೋವಿಂದ್ ಮಾತನಾಡಿ, “ರಾಜ್ಯದಲ್ಲಿ ಅಪೂರ್ಣಗೊಂಡ ವಾಲ್ಮೀಕಿ ಭವನಗಳಿಗೆ ಹಣ ಬಿಡುಗಡೆ ಮಾಡಬೇಕು. ಬ್ಯಾಕ್ ಲಾಕ್ ಹುದ್ದೆಗಳನ್ನು ನೇಮಕ ಮಾಡಬೇಕು. ವಾಲ್ಮೀಕಿ ಜನಾಂಗದ ಮೇಲೆ ನಿರಂತರ ದೌರ್ಜನ್ಯ, ಕೊಲೆ, ಅತ್ಯಾಚಾರ ಘಟನೆಗಳನ್ನು ತಡೆಗಟ್ಟಲು ವಿಶೇಷ ಕಾನೂನು ರೂಪಿಸಬೇಕು. ಸಮುದಾಯದ ಬೇಡಿಕೆಗಳು ಕಾಲಮಿತಿಯಲ್ಲಿ ಈಡೇರಿಸದೆ ಹೋದರೆ ವಾಲ್ಮೀಕಿ ಜಯಂತಿಗೆ ಬಹಿಷ್ಕಾರ ಹಾಕಲಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ವಾಲ್ಮೀಕಿ ಸಮಾಜದ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೋಟೆ ಶ್ರೀನಿವಾಸ್, ಗ್ರಾಪಂ ಸದಸ್ಯ ಕುಡುವನಹಳ್ಳಿ ಆನಂದ್, ಬೈರಂಡಹಳ್ಳಿ ನಾಗೇಶ್, ಕಲ್ಲಂಡೂರು ನಾರಾಯಣಸ್ವಾಮಿ, ಮಂಜುಳಾ ಶ್ರೀನಿವಾಸ್, ರವಿ, ಪ್ರದೀಪ್ ಕುಮಾರ್, ನವೀನ್ ಕುಮಾರ್, ಕಲ್ವ ರವೀಂದ್ರ, ರಮೇಶ್, ಮಹೇಶ್ ಕುಮಾರ್, ನಾಗರಾಜ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ಉನ್ನತ ಶಿಕ್ಷಣದಿಂದ ಮಹಿಳಾ ಸಬಲೀಕರಣ ಸಾಧ್ಯ; ಪ್ರೊ. ಶಾಂತಾದೇವಿ

ಶಿಕ್ಷಣವು ಕೇವಲ ಪ್ರಮಾಣಪತ್ರಕ್ಕೆ ಸೀಮಿತವಾಗದೆ, ಜ್ಞಾನ ಮತ್ತು ಕೌಶಲ್ಯ ಬೆಳೆಸುವ ಸಾಧನವಾಗಬೇಕು....

ಮಂಡ್ಯ | ಭಾರತಕ್ಕಾಗಿ ಯುವಶಕ್ತಿ ಧ್ಯೇಯದಡಿ ಎನ್ಎಸ್ಎಸ್ ಶಿಬಿರ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ. ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ...

ಮುಂಡಗೋಡ | ನೀರು ಕೇಳುವ ನೆಪದಲ್ಲಿ ಮಹಿಳೆಯ ಕೊರಳಲ್ಲಿದ್ದ ಚಿನ್ನದ ಸರ ಕಿತ್ತು ಪರಾರಿ

ಅಂಗಡಿಗೆ ಬಂದು ವಿಮಲ್ ಹಾಗೂ ಕುಡಿಯುವ ನೀರು ಕೇಳುವ ನೆಪದಲ್ಲಿ ಮಹಿಳೆಯ...

ಶಿರಸಿ | ಮೊಗೇರರಿಗೆ ಎಸ್‌ಸಿ ಪ್ರಮಾಣಪತ್ರ ನೀಡಬೇಡಿ: ಅರ್ಜುನ್ ಮಿಂಟಿ

ಉತ್ತರ ಕನ್ನಡ ಜಿಲ್ಲೆಯ ಮೀನುಗಾರ ಮೊಗೇರ್ ಸಮುದಾಯಕ್ಕೆ ಪರಿಶಿಷ್ಟ ಜಾತಿ (ಎಸ್‌ಸಿ)...