ರಾಜ್ಯ ಸರಕಾರ ಈ ಕೂಡಲೇ ಮಧ್ಯ ಪ್ರವೇಶಿಸಿ ಪರವಾನಗಿ ಭೂ ಮಾಪಕರ ನಾನಾ ಸಮಸ್ಯೆಗಳನ್ನು ಈಡೇರಿಸುವಂತೆ ಅಗ್ರಹಿಸಿ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರವೇ ಸಂಘಟನೆಗಳ ಒಕ್ಕೂಟದ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕರವೇ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಚನ್ನಕೃಷ್ಣ ಮಾತನಾಡಿ, ಈ ವಿಚಾರವಾಗಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಮಧ್ಯ ಪ್ರವೇಶ ಮಾಡಿ ರೈತರಿಗೆ ಬಾಕಿ ಉಳಿದಿರುವ ಅಳತೆ ಕಾರ್ಯಗಳನ್ನು ಪೊರೈಸಿ ಅನುಕೂಲ ಮಾಡಿಕೊಡಬೇಕು ಇಲ್ಲದ ಪಕ್ಷದಲ್ಲಿ ಸಂಘಟನೆ ಮೂಲಕ ಮುಂದೆ ರಾಜ್ಯಾಧ್ಯಂತ ಉಗ್ರ ಹೋರಾಟಗಳನ್ನು ಮಾಡಲಾಗುತ್ತದೆ ಎಂದು ಎಚ್ಚರಿಸಿದರು.
ರಾಜ್ಯದ್ಯಂತ ಪರವಾನಗಿ ಭೂ ಮಾಪಕರ ನ್ಯಾಯಯುತ ಬೇಡಿಕೆಗಳ ಈಡೇರಿಕಗಾಗಿ ಅನಿರ್ದಿಷ್ಟ ಅವಧಿ ಮುಷ್ಕರವನ್ನು ಹಮ್ಮಿಕೊಂಡಿದ್ದು, ಕಳೆದ ಹಲವು ತಿಂಗಳಿನಿಂದ ಅಳತೆ ಕಾರ್ಯಗಳು ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಸಾರ್ವಜನಿಕರಿಗೆ ಹಾಗೂ ವಿಶೇಷವಾಗಿ ರೈತರ ಸಮುದಾಯಕ್ಕೆ ತೊಂದರೆ ಉಂಟಾಗುತ್ತಿದೆ ಎಂದು ದೂರಿದರು.
ರೈತರು ತಮ್ಮ ಜಮೀನುಗಳ ಹದ್ದುಬಸ್ತು, ದುರಸ್ತಿ, ಪೋಡಿ, ಹಾಗೂ 11ಇ ನಕ್ಷೆಗಳಿಗಾಗಿ ಈಗಾಗಲೇ ಸರ್ಕಾರಕ್ಕೆ ನಿಗದಿತ ಶುಲ್ಕವನ್ನು ಪಾವತಿಸಿದ್ದಾರೆ ಆದರೆ ಪರವಾನಾಗಿ ಭೂ ಮಾಪಕರ ಮುಷ್ಕರದ ಕಾರಣಗಳಿಂದಾಗಿ ಈ ಕೆಲಸಗಳು ವಿಳಂಬವಾಗುತ್ತಿದ್ದು, ರೈತರು ಅಲೆದಾಡುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೃಷಿ ಚಟುವಟಿಕೆಗಳಿಗೆ ಹಾಗೂ ಸಾಲ ಸೌಲಭ್ಯಗಳನ್ನು ಪಡೆಯಲು ಈ ನಕ್ಷೆಗಳು ಅಗತ್ಯವಾಗಿದ್ದು ವಿಳಂಬ ದಿಂದಾಗಿ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿದ್ದೀರಾ..? ಕೋಲಾರ |ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರೋದು ಗೊತ್ತು, ನಮ್ಮನ್ನು ದೂರ ಮಾಡಿದ್ರೆ ಅಧಿಕಾರದಿಂದ ಇಳಿಸೋದು ಗೊತ್ತು
ಈ ಸಂದರ್ಭದಲ್ಲಿ ಸಂಘಟನೆಗಳ ಒಕ್ಕೂಟದ ಮುಖಂಡರಾದ ಕನ್ನಡ ಜಗನ್ನಾಥ್, ಮಂಜುನಾಥ್, ಯುವ ಮುಖಂಡರಾದ ಸಂಜಯ್, ನಾಗೇಂದ್ರ, ಆನಂದ್, ಸಂಪಂಗಿ, ನಾಗೇಶ್, ನಾಗರಾಜ್, ಹಾಗೂ ಕಾಡಹಳ್ಳಿ ಆರ್ ಶಶಿಕುಮಾರ್ ಇತರರು ಇದ್ದರು.
ಕೋಲಾರ |ಭೂ ಮಾಪಕರ ನಾನಾ ಸಮಸ್ಯೆಗಳನ್ನು ಈಡೇರಿಸುವಂತೆ ಅಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ
ಪೋಸ್ಟ್ ಹಂಚಿಕೊಳ್ಳಿ:
ಪೋಸ್ಟ್ ಹಂಚಿಕೊಳ್ಳಿ:
This video cannot be played in your browser. Open the video directly
ಈ ಹೊತ್ತಿನ ಪ್ರಮುಖ ಸುದ್ದಿ
ವಿಡಿಯೋ




