ಕೋಲಾರ | ಮಾಹಿತಿ ಹಕ್ಕುಗಳ ಕುರಿತು ಅರಿವು ಅತ್ಯಗತ್ಯ: ಹೇಮಂತ್ ನಾಗರಾಜ್

Date:

ಮಾಹಿತಿ ಹಕ್ಕು ಅಧಿನಿಯಮ ಕಾಯ್ದೆಯ ಬಗ್ಗೆ ಸಾರ್ವಜನಿಕರಿಗೆ ಸರಿಯಾದ ಅರಿವು ಮೂಡಿಸುವುದು ವೇದಿಕೆಯ ಮುಖ್ಯ ಉದ್ದೇಶವಾಗಿದೆ ಎಂದು ರಾಜ್ಯ ಮಾಹಿತಿ ಹಕ್ಕು ವೇದಿಕೆಯ ರಾಜ್ಯಾಧ್ಯಕ್ಷ ಹೇಮಂತ್ ನಾಗರಾಜ್ ತಿಳಿಸಿದರು.

- Advertisement -

ನಗರದ ಪತ್ರಕರ್ತರ ಭವನದಲ್ಲಿ ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆ ಕೋಲಾರ ಜಿಲ್ಲಾ ಘಟಕದ ಪ್ರಥಮ ವರ್ಷದ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಪ್ರಜಾಪ್ರಭುತ್ವ ವ್ಯವಸ್ಥೆಯ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಉತ್ತೇಜಿಸುವ ಹಾಗೂ ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಮಾಹಿತಿ ಹಕ್ಕು ಕಾಯ್ದೆಯ ಮುಖ್ಯ ಉದ್ದೇಶವಾಗಿದೆ ಮಾಹಿತಿ ಪಡೆಯುವುದು ಕೂಡ ಪ್ರತಿಯೊಬ್ಬರ ಹಕ್ಕಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...

ಪ್ರಜಾಪ್ರಭುತ್ವ ಪ್ರಬಲವಾಗಬೇಕು, ಜನರಿಗೆ ಸರಕಾರದ ಮಾಹಿತಿ ಲಭ್ಯವಾಗಬೇಕು ಎಂಬ ಉದ್ದೇಶದಿಂದ 2005ರಲ್ಲಿ ಆರ್‌ಟಿಐ ಕಾಯ್ದೆಯನ್ನು ಜಾರಿ ಗೊಳಿಸಲಾಗಿದೆ. ಮಾಹಿತಿ ಹಕ್ಕು ಬಹಳ ಸರಳ ಹಾಗೂ ಗಂಭೀರ ಸ್ವರೂಪದ್ದಾಗಿದೆ. ಸರ್ಕಾರವನ್ನು ಮತ್ತು ಅಧಿಕಾರಿಗಳನ್ನು ಬುಡಮೇಲು ಮಾಡುವ ಶಕ್ತಿ ಕೂಡ ಇದೆ. ಜನಪರ ಕಾನೂನು ಜಾರಿಯಾದ ನಂತರ ಅದರ ಬಗ್ಗೆ ಸರ್ಕಾರಿ ಅಧಿಕಾರಿಗಳು ತಿಳಿದಿರಬೇಕು ಜೊತೆಗೆ ಮಾಹಿತಿ ನೀಡಬೇಕು” ಎಂದರು.

ಮಾಹಿತಿ ಅಧ್ಯಯನ ಕೇಂದ್ರದ ವೀರೇಶ್ ಬೆಳ್ಳೂರು ಮಾತನಾಡಿ, “ಮಾಹಿತಿ ಹಕ್ಕು ಅರ್ಜಿದಾರರು ಕಾಯ್ದೆಯನ್ನು ದುರುಪಯೋಗ ಪಡಿಸಿಕೊಳ್ಳದೇ ಸಮಾಜದ ನೈತಿಕತೆ, ಸಾಮಾಜಿಕ ಸ್ವಾತಂತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರು ಮಾಹಿತಿ ಕೇಳಬೇಕು. ಸಾರ್ವಜನಿಕ ಸಂಪರ್ಕ ಅಧಿಕಾರಿಗಳಿಗೆ ಸಂಪೂರ್ಣ ಮಾಹಿತಿ ಇದ್ದಲ್ಲಿ ಶೀಘ್ರ ವಿಲೇವಾರಿ ಮಾಡಬಹುದು. ನಿರ್ಲಕ್ಷ್ಯ ವಹಿಸಬಾರದು. ಕೆಲವು ಸಂದರ್ಭದಲ್ಲಿ ಭಯದ ವಾತಾವರಣವು ಸೃಷ್ಟಿಯಾಗುತ್ತದೆ. ಇದಕ್ಕೆ ಸಂಘಟಿತವಾದ ಹೋರಾಟವು ಮುಖ್ಯವಾಗುತ್ತದೆ” ಎಂದರು.

ಇದನ್ನು ಓದಿದ್ದೀರಾ..? ಜೂಜು ಅಡ್ಡೆಯ ಮೆಲೆ ದಾಳಿ ಎಂಟು ಜನರನ್ನು ಬಂಧಿಸಿದ ಬಟ್ಲಹಳ್ಳಿ ಪೊಲೀಸರು

ವೇದಿಕೆ ಜಿಲ್ಲಾಧ್ಯಕ್ಷ ಸಿ ಮೋಹನ್ ಕುಮಾರ್ ಮಾಹಿತಿ ಹಕ್ಕು ನಿಯಮಗಳನ್ನು ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಪಾಲಿಸುವುದು ಅವಶ್ಯಕವಾಗಿದೆ. ಅಧಿಕಾರಿಯು ಕಾರಣವಿಲ್ಲದೇ ಮಾಹಿತಿ ನೀಡದಿದ್ದಲ್ಲಿ ಅಥವಾ ದುರುದ್ದೇಶದಿಂದ ತಪ್ಪಾದ ಮಾಹಿತಿ ನೀಡಿದಲ್ಲಿ ದಂಡ ಪಾವತಿಸಬೇಕಾಗುತ್ತದೆ. ಜೊತೆಗೆ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಮಾಹಿತಿ ಪಡೆದು ಅಧಿಕಾರಿಗಳ ಮೇಲೆ ಕಾನೂನು ಕ್ರಮಗಳನ್ನು ಜಾರಿ ಮಾಡಿದ ಉದಾಹರಣೆಗಳು ಇವೆ” ಎಂದರು.

ಈ ಸಂದರ್ಭದಲ್ಲಿ ಗ್ರಾಹಕ ಹಕ್ಕುಗಳ ಮತ್ತು ಮಾಹಿತಿ ತಜ್ಞ ವೈ ಜಿ ಮುರಳೀಧರನ್, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಸಿ ಕೆ ರವೀಂದ್ರನಾಥ್, ತಾಪಂ ಮಾಜಿ ಅಧ್ಯಕ್ಷ ಅಂಜಿನಪ್ಪ, ವೇದಿಕೆಯ ಮುಖಂಡರಾದ ವಿನೋದ ಕುಮಾರ್, ಪದ್ಮ, ರಮೇಶ್, ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | SIR ರದ್ದತಿಗೆ ಆಗ್ರಹಿಸಿ CPIMನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ; ಇಬ್ಬರು ಆರೋಪಿಗಳು ವಶಕ್ಕೆ

ವಿಜಯಪುರ ನಗರದಲ್ಲಿ ಬೆಳಗಿನ ಜಾವ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಲ್ತಾಪ್...

ವಿಜಯಪುರ | ಬಿಎಲ್‌ಡಿಇ ಪಾಲಿಟೆಕ್ನಿಕ್‌ನಲ್ಲಿ ಸಿವಿಲ್ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ

ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದ ಜೊತೆಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ವಿಜಯಪುರ ನಗರದ...