ಕೋಲಾರ | ಕಾಂಗ್ರೆಸ್ ಕಛೇರಿಯಲ್ಲಿ ಬಾಬು ಜಗಜೀವನರಾಂ ಪುಣ್ಯಸ್ಮರಣೆ

Date:

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಹಸಿರು ಕ್ರಾಂತಿಯ ಹರಿಕಾರ,ಭಾರತದ ಮಾಜಿ ಉಪಪ್ರಧಾನ ಮಂತ್ರಿ ಡಾ.ಬಾಬು ಜಗಜೀವನರಾಂ ಅವರ 40 ನೇ ವರ್ಷದ ಪುಣ್ಯಸ್ಮರಣೆ ಆಚರಿಸಲಾಯಿತು.

- Advertisement -

ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ಬಾಬೂಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿ, ಹಸಿರು ಕ್ರಾಂತಿಯ ಮೂಲಕ ದೇಶದ ಆಹಾರ ಕೊರತೆ ನೀಗಿಸಿದ ಬಾಬೂಜಿ 50 ವರ್ಷಗಳ ಕಾಲ ಸುದೀರ್ಘ ಆಡಳಿತ ನಡೆಸಿದ ಧೀಮಂತ ರಾಜಕಾರಣಿ ಎಂದು ಸ್ಮರಿಸಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಮಾತನಾಡಿ, ಬಾಬು ಜಗಜೀವನ್ ರಾಂ ಓರ್ವ ವ್ಯಕ್ತಿಯಲ್ಲ ಅವರೊಬ್ಬರು ಶಕ್ತಿ. ಕೃಷಿ ಸಚಿವರಾಗಿ ಅಲ್ಲದೆ, ಕಾರ್ಮಿಕ, ಕಾನೂನು ಸಚಿವರು, ರೈಲ್ವೆ ಸಚಿವರಾಗಿ ಅವರು ಅನೇಕ ಜನಪರ ಕಾಯ್ದೆಗಳನ್ನು ಜಾರಿಗೆ ತಂದು ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸವಲತ್ತುಗಳು ದೊರೆಯುವಂತಹ ಅವಕಾಶ ಕಲ್ಪಿಸಿದರು. ೪೦ ಕೋಟಿ ಜನರಿಗೆ ಆಹಾರ ಒದಗಿಸಲು ಪರದಾಡುತ್ತಿದ್ದ ಕಾಲದಲ್ಲಿ, ಹಸಿರು ಕ್ರಾಂತಿಯ ಮೂಲಕ ಕೃಷಿಯಲ್ಲಿ ಹಲವಾರು ಬದಲಾವಣೆಗಳನ್ನು ತಂದು,ಡ್ಯಾಂಗಳ ಮೂಲಕ ನೀರಾವರಿ ಒದಗಿಸಿ, ದೇಶದ ಎಲ್ಲ ಜನರು ಸಂತೃಪ್ತಿಯಿಂದ ಊಟ ಮಾಡುವಂತಹ ವಾತಾವರಣ ಕಲ್ಪಿಸಿದರು. ಇಂತಹ ವ್ಯಕ್ತಿಗಳನ್ನು ಆದರ್ಶವಾಗಿಟ್ಟುಕೊಂಡು ನಾವೆಲ್ಲರೂ ಮುನ್ನಡೆಯಬೇಕಾಗಿದೆ ಎಂದರು.

ಸಮುದಾಯದ ಹಿರಿಯ ಮುಖಂಡ ರಾಜಕಲ್ಲಹಳ್ಳಿ ಶ್ರೀನಿವಾಸ್ ಮಾತನಾಡಿ ದೇಶದಲ್ಲಿ ಕೃಷಿ, ಕೈಗಾರಿಕಾ, ಕಾರ್ಮಿಕ, ವಿದೇಶಾಂಗ ಸಚಿವರಾಗಿ ಅವರು ಕೈಗೊಂಡ ಕಾರ್ಯಕ್ರಮಗಳು ಇಂದಿಗೂ ಇಡೀ ದೇಶಕ್ಕೆ ಮಾದರಿಯಾಗಿವೆ.ಬಾಬಾ ಸಾಹೇಬ್ ಅಂಬೇಡ್ಕರ್ ಸಂವಿಧಾನ ರಚನೆ ಮಾಡಿಕೊಟ್ಟರೆ, ಬಾಬು ಜಗಜೀವನ್ ರಾಂ ಅವರು ಸಂವಿಧಾನದ ಆಶಯಗಳನ್ನು ಈಡೇರಿಸಲು ತಮ್ಮ ಉಸಿರಿನ ಕೊನೆಯವರೆಗೂ ನಿರಂತವಾಗಿ ಶ್ರಮಿಸಿದ್ದರು ಎಂದರು.

ಇದನ್ನು ಓದಿದ್ದೀರಾ..? ಕೆಜಿಎಫ್ | ಬಿಜೆಪಿ ಮುಖಂಡರಿಂದ ದುಡಿಯುವ ರೈತನಿಗೆ ‘ಚಡ್ಡಿ ಚಂದ್ರಯ್ಯ’ ಎಂದು ಅವಮಾನ

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ ಶಿವಕುಮಾರ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಆಫ್ಸರ್, ಎಸ್ಸಿ ಘಟಕದ ಜಿಲ್ಲಾ ಅಧ್ಯಕ್ಷ ಜಯದೇವ್ ಮುಖಂಡರಾದ ಬೆಳಗಾನಹಳ್ಳಿ ಮುನಿವೆಂಕಟಪ್ಪ, ವೀರೇಂದ್ರ ಪಾಟೀಲ್, ಬಿ.ಟಿ ಚಂದ್ರಶೇಖರ್, ನದೀಂ,. ಸೋಮಶೇಖರ್, ಲಾಲ್ ಬಹಾದ್ದೂರ್ ಶಾಸ್ತ್ರಿ, ಕೋಟೆ ರಾಜೇಶ್, ಅಯೂಬ್, ಶಿವಕುಮಾರ್ ಮುಂತಾದವರು ಇದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...