ಕೋಲಾರ | ಮತದಾರರ ಪಟ್ಟಿಯಿಂದ ಕೈಬಿಡದಂತೆ ಎಚ್ಚರ ವಹಿಸಿ: ಕೊತ್ತೂರು ಮಂಜುನಾಥ್

Date:

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವು ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ ಪ್ರತಿಯೊಂದು ಮತವೂ ಅಮೂಲ್ಯವಾಗಿದ್ದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಇದರ ಬಗ್ಗೆ ಎಚ್ಚರಿಕೆ ವಹಿಸಬೇಕಿದೆ’ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು

- Advertisement -

ನಗರದ ಹೊರವಲಯದ ಖಾಸಗಿ ರೆಸಾರ್ಟ ನಲ್ಲಿ ಸೋಮವಾರ ಕಾಂಗ್ರೆಸ್ ಪಕ್ಷದಿಂದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ನಡೆದ ಬಿಎಲ್‌ಎ– 2 ತರಬೇತಿ ಶಿಬಿರದಲ್ಲಿ ಮಾತನಾಡಿದ ಅವರು ಮತದಾರರ ಪರಿಷ್ಕರಣೆ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ಮತದಾನದ ಹಕ್ಕನ್ನು ನೀಡಿದೆ. ಅಂದು ಇಲ್ಲದಿದ್ದರೆ ವ್ಯಕ್ತಿಯ ಅಸ್ತಿತ್ವವೇ ಕಳೆದುಕೊಂಡಂತಾಗುತ್ತದೆ. ಆದ್ದರಿಂದ ಅರ್ಹ ಮತದಾರರ ಹೆಸರನ್ನು ಉಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ವಂದೇ ಮಾತರಂ: ರಾಷ್ಟ್ರಗೌರವದ ಸಂಕೇತವೋ, ಚಿತ್ತ ಚದುರಿಸುವ ರಾಜಕೀಯ...

ಭಾರತದ ಯುವಜನತೆಯಲ್ಲಿ ರಾಹುಲ್ ಗಾಂಧಿಯವರ ವರ್ಚಸ್ಸು ಹೆಚ್ಚುತ್ತಿರುವುದನ್ನು ಗಮನಿಸಿ, ಇದೇ ಸಂಸತ್ ಕಲಾಪದಲ್ಲಿ, "ವಂದೇ ಮಾತರಂ" ವಿಷಯವನ್ನು ಮುನ್ನೆಲೆಗೆ ತಂದು, ಯುವಜನತೆಯ ಗಮನವನ್ನು ಬೇರೆಡೆ ಸೆಳೆಯುವ old trick ಮಾಡಲಾಗಿದೆ ಎಂಬುದು ಈ...

ಮುಂಗಾರು ಹಿನ್ನಡೆ, ಹಿಂಗಾರಿಗೆ ಕಂಟಕ: ದೇಶದಲ್ಲಿ 2027ರವರೆಗೆ ಬರಗಾಲದ ಆತಂಕ!

ಪ್ರಕೃತಿಯ ಏರುಪೇರುಗಳನ್ನು ಎದುರಿಸಲು ಸರ್ಕಾರಗಳು ತಕ್ಷಣದ ಆಪತ್ಕಾಲೀನ ಪರಿಹಾರ ಕ್ರಮಗಳಿಗೆ ಸೀಮಿತವಾಗದೆ, ದೀರ್ಘಕಾಲೀನ ಕಾರ್ಯತಂತ್ರಗಳನ್ನು ರೂಪಿಸುವುದು ಅತ್ಯಗತ್ಯ. ಮಣ್ಣಿನ ತೇವಾಂಶ ಸಂರಕ್ಷಣೆ, ನೀರಾವರಿ ವ್ಯಾಪ್ತಿಯ ವೈಜ್ಞಾನಿಕ ವಿಸ್ತರಣೆ, ಹವಾಮಾನ ಬದಲಾವಣೆಗೆ ಸ್ಥಿತಿಸ್ಥಾಪಕತ್ವ ಹೊಂದಿರುವ(Climate-resilient)...

ಕಾಲೇಜು ಕ್ಯಾಂಪಸ್‌ಗಳಲ್ಲಿ ದಲಿತ ವಿದ್ಯಾರ್ಥಿಗಳೇ ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ?

‘ದಲಿತ ವಿದ್ಯಾರ್ಥಿಗಳೇ ಏಕೆ ಹೀಗೆ ಸಾಯುತ್ತಿದ್ದಾರೆ?’ — ಇದು ಐಐಟಿ ಬಾಂಬೆಯ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ತಾಯಿ ಸೋನಾಲಿ ವಾಕೋಡೆ ಕೇಳಿದ ಪ್ರಶ್ನೆ. ಈ ಪ್ರಶ್ನೆ ಕೇವಲ ಮಗನನ್ನು ಕಳೆದುಕೊಂಡ ತಾಯಿಯ...

ಕೆಪಿಸಿಸಿಯ ತರಬೇತುದಾರ, ಚುನಾವಣಾ ಪ್ರಕ್ರಿಯೆಯಲ್ಲಿ ಪರಿಣತಿ ಹೊಂದಿರುವ ಸಂಪನ್ಮೂಲ ವ್ಯಕ್ತಿ ಹಾಗೂ ಚಿಂತಕ ಡಾ ಹೆಚ್.ವಿ ವಾಸು ಕಾರ್ಯಾಗಾರದಲ್ಲಿ ಮಾಹಿತಿ ನೀಡಿ ಮತದಾರರ ಹೊಸ ನೋಂದಣಿ, ಹೆಸರು ತಿದ್ದುಪಡಿ, ವಿಳಾಸ ಬದಲಾವಣೆ, ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕುವ ಪ್ರಕ್ರಿಯೆ, ಅಗತ್ಯ ದಾಖಲೆಗಳ ಸಲ್ಲಿಕೆ ಹಾಗೂ ಚುನಾವಣಾ ಆಯೋಗದ ಮಾರ್ಗಸೂಚಿಗಳ ಕುರಿತು ಸವಿಸ್ತಾರ ಮಾಹಿತಿ ನೀಡಿದರು

ಕಾರ್ಯಕರ್ತರು ಜೊತೆಗೆ ಕ್ಷೇತ್ರ ಮಟ್ಟದಲ್ಲಿ ಕೈಗೊಳ್ಳಬೇಕಾದ ಜವಾಬ್ದಾರಿಗಳು ಮತ್ತು ಜನಜಾಗೃತಿ ಕಾರ್ಯಕ್ರಮಗಳ ಕುರಿತು ವಿಶೇಷ ಮಾರ್ಗದರ್ಶನ ಒದಗಿಸಲಾಗುವುದು ಎಂದು ವಿವರಿಸಿದರು.

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಪಾರದರ್ಶಕ ಹಾಗೂ ಪರಿಣಾಮಕಾರಿಯಾಗಿ ನಡೆಸಲು ಅಗತ್ಯವಿರುವ ಕಾರ್ಯತಂತ್ರಗಳು, ಮಾಹಿತಿ ಸಂಗ್ರಹ ವಿಧಾನಗಳು ಹಾಗೂ ಸಾರ್ವಜನಿಕರೊಂದಿಗೆ ಸಮನ್ವಯ ಸಾಧಿಸುವ ಕುರಿತು ಮಾರ್ಗದರ್ಶನ ನೀಡಿ ಪ್ರಜಾಪ್ರಭುತ್ವದ ಬಲವರ್ಧನೆಗೆ ಮತದಾರರ ಪಟ್ಟಿ ಪರಿಷ್ಕರಣೆ ಅತ್ಯಂತ ಮಹತ್ವದ್ದಾಗಿದ್ದು, ಈ ಕಾರ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಮತದಾನದ ಹಕ್ಕು ಹೊಂದಿರುವ ಪ್ರತಿಯೊಬ್ಬ ನಾಗರಿಕರ ಹೆಸರೂ ಮತದಾರರ ಪಟ್ಟಿಯಲ್ಲಿ ದಾಖಲಾಗುವಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ..? ಕೋಲಾರ | ಸುಳ್ಳು ಹೇಳುವವರ ಬಾಯಿ ಲೌಡ್ ಸ್ಪೀಕರ್ ಆಗಿದೆ, ಸತ್ಯ ಹೇಳುವವರ ಬಾಯಿಗೆ ಲಕ್ವಾ ಹೊಡೆದಿದೆ : ರಮೇಶ್ ಕುಮಾರ್

ಕಾರ್ಯಾಗಾರದಲ್ಲಿ ಎಂಎಲ್ಸಿಗಳಾದ ಎಂ.ಎಲ್ ಅನಿಲ್ ಕುಮಾರ್, ನಸೀರ್ ಅಹಮದ್, ಮಾಜಿ ಸಭಾಪತಿ ವಿ.ಆರ್ ಸುದರ್ಶನ್, ಲೋಕಸಭಾ ಪರಾಜಿತ ಅಭ್ಯರ್ಥಿ ಕೆ.ವಿ ಗೌತಮ್, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ ಶಿವಕುಮಾರ್, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮ್ಯಾಕಲ ನಾರಾಯಣಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ಸೈಯದ್ ಆಫ್ಸರ್, ಆದಿನಾರಾಯಣ, ಮಹಮ್ಮದ್ ಹನೀಫ್ ಮುಂತಾದವರು ಇದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಲ್ಲಾಪುರ | ಪ್ರವಾಸಿ ತಾಣಗಳ ಪ್ರವೇಶ ನಿರ್ಬಂಧ ತೆರವಿಗೆ ಬಿಜೆಪಿ ಆಗ್ರಹ; ಇಲ್ಲವಾದರೆ ಪ್ರತಿಭಟನೆ ಎಚ್ಚರಿಕೆ

ಯಲ್ಲಾಪುರ: ತಾಲೂಕಿನ ವಿವಿಧ ಪ್ರವಾಸಿ ತಾಣಗಳಿಗೆ ವಿಧಿಸಿರುವ ಪ್ರವೇಶ ನಿರ್ಬಂಧವನ್ನು ತೆರವುಗೊಳಿಸುವಂತೆ...

ಬಾಗಲಕೋಟೆ | ಮುಂದುವರಿದ ಬಿಸಿಲ ಬೇಗೆ: ಮಳೆ ನಿರೀಕ್ಷೆಯಲ್ಲಿ ಕೃಷ್ಣಾ ತೀರದ ರೈತರು

ಮಳೆಗಾಲ ಮುಗಿಯುವ ಹಂತದಲ್ಲಿದ್ದರೂ ಬಾಗಲಕೋಟೆ ಜಿಲ್ಲೆಯಲ್ಲಿ ವಾತಾವರಣ ಮಾತ್ರ ಬೇಸಿಗೆಯ ಸ್ವರೂಪ...

ಆಲಮಟ್ಟಿ 3ನೇ ಹಂತದ ಯೋಜನೆ ಜಾರಿಗೆ ಹೋರಾಟ ತೀವ್ರ

ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ ನೀರಿನ ಮಟ್ಟವನ್ನು 519.60 ಮೀಟರ್‌ನಿಂದ 524.256...

ರಾಯಚೂರು | ದಲಿತರ ಸರಣಿ ಮೂರು ಕೊಲೆಗಳ ಸಿಐಡಿ ತನಿಖೆಗೆ ಆಗ್ರಹ: ಗೃಹ ಸಚಿವರಿಗೆ ಮನವಿ

ಜಿಲ್ಲೆಯಲ್ಲಿ ನಡೆದ ದಲಿತರ ಸರಣಿ ಮೂರು ಕೊಲೆ ಪ್ರಕರಣಗಳನ್ನು ಸಿಐಡಿ ತನಿಖೆಗೆ...