ಕೋಲಾರ | ಬಿಜೆಪಿ ರಾಜ್ಯ ಪ್ರವಾಸಕ್ಕೆ ಚಾಲನೆ; ಕಾಂಗ್ರೆಸ್‌ ವಿರುದ್ಧ ಬಿಎಸ್‌ವೈ ವಾಗ್ದಾಳಿ

Date:

ಕಾವೇರಿ ನೀರು, ಬರ ಹಾಗೂ ರಾಜ್ಯ ಸರ್ಕಾರದ ವೈಫಲ್ಯ ವಿಚಾರ ಇಟ್ಟುಕೊಂಡು ರಾಜ್ಯ ಪ್ರವಾಸ ನಡೆಸುತ್ತಿದ್ದೇವೆ ಎಂದು ಬಿಜೆಪಿಯ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ ಎಸ್‌ ಯಡಿಯೂರಪ್ಪ ತಿಳಿಸಿದರು.

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಹೋರಾಟ ಮತ್ತು ರಾಜ್ಯ‌ ಪ್ರವಾಸಕ್ಕೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕುರುಡುಮಲೆ ಗಣೇಶನಿಗೆ ಪೂಜೆ ಸಲ್ಲಿಸುವ ಮೂಲಕ ಅವರು ಇಂದು (ಭಾನುವಾರ) ಚಾಲನೆ ನೀಡಿ ಮಾತನಾಡಿದರು.

“ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಒಂದು ಕಿಮೀ ರಸ್ತೆ ಕೂಡ ಅಭಿವೃದ್ಧಿಪಡಿಸಿಲ್ಲ. ಭೀಕರ ಬರಗಾಲ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರನ್ನು ಮರೆತಿದೆ. ಗಣೇಶ ಚತುರ್ಥಿ ಬಳಿಕ ಮೊದಲು ಕಾವೇರಿ ನದಿ ನೀರಿನ ವಿಚಾರವಾಗಿ ಮಂಡ್ಯ, ಮೈಸೂರು, ಚಾಮರಾಜನಗರ ಭಾಗದಲ್ಲಿ ಪ್ರವಾಸ ಕೈಗೊಳ್ಳುತ್ತೇವೆ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸಿದ್ದರಾಮಯ್ಯ ಹಾಗೂ ಅವರ ಪುತ್ರ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ: ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ

“ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪುತ್ರ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ. ನಾನು ಹೇಳುತ್ತಿರುವುದು ಸುಳ್ಳು ಎಂದಾದರೆ ಕುರುಡುಮಲೆ ಗಣೇಶನ ಮುಂದೆ ನಿಂತು ಸಿದ್ದರಾಮಯ್ಯ ಪ್ರಮಾಣ ಮಾಡಲಿ” ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಕೆ ಎಸ್ ಈಶ್ವರಪ್ಪ ಸವಾಲು ಹಾಕಿದರು.

“ಸಿದ್ದರಾಮಯ್ಯ ಅವರಿಗೆ ನಾನು ಕುರುಡುಮಲೆ ಗಣೇಶನ ಮುಂದೆ ನಿಂತು ಸವಾಲು ಹಾಕುತ್ತಿದ್ದೇನೆ. ವರ್ಗಾವಣೆ ದಂಧೆ ತನಿಖೆಗೆ ಹಾಲಿ ಅಥವಾ ನಿವೃತ್ತ ನ್ಯಾಯಾಧೀಶರನ್ನು ನೇಮಿಸಿ. ವರ್ಗಾವಣೆ ದಂಧೆಯಲ್ಲಿ ಬಿಜೆಪಿ ಸರ್ಕಾರದ ಅವಧಿಗಿಂತ ಎರಡು ಪಟ್ಟು ಅಧಿಕವಾಗಿ ಕಾಂಗ್ರೆಸ್ ಸರ್ಕಾರ ತೊಡಗಿಲ್ಲವೆಂದಾದರೆ ಕುರುಡುಮಲೆ ಗಣಪತಿ ನನಗೆ ಏನು ಬೇಕಾದರೂ ಶಾಪ ಕೊಡಲಿ” ಎಂದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ; ಹೈಕ ಅಭಿವೃದ್ಧಿಗೆ ₹5 ಸಾವಿರ ಕೋಟಿ: ಸಿಎಂ ಸಿದ್ದರಾಮಯ್ಯ

“ಎಷ್ಟು ದುಡ್ಡು ಕೊಟ್ಟಿದ್ದೇವೆಂದು ಹೇಳುವ 25 ಅಧಿಕಾರಿಗಳನ್ನು ತನಿಖಾ ತಂಡದ ಮುಂದೆ ನಿಲ್ಲಿಸುತ್ತೇನೆ. ವರ್ಗಾವಣೆ ದಂಧೆಗೆ ಲೆಕ್ಕವೇ ಇಲ್ಲದಂತಾಗಿದೆ. ಸಿದ್ದರಾಮಯ್ಯ ‌ಇನ್ನು ಮುಂದಾದರೂ ಲಂಚ ಪಡೆಯಲ್ಲ, ಅಭಿವೃದ್ಧಿಗೆ ಒತ್ತುಕೊಡುತ್ತೇನೆಂದು ಪ್ರಮಾಣ ಮಾಡಲಿ” ಎಂದು ಈಶ್ವರಪ್ಪ ಹೇಳಿದರು.

ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಸಂಸದ ಡಿ ವಿ ಸದಾನಂದಗೌಡ, ಶಾಸಕ ಡಾ ಸಿ ಎನ್ ಅಶ್ವತ್ಥನಾರಾಯಣ, ಮಾಜಿ ಸಚಿವ ಗೋವಿಂದ ಕಾರಜೋಳ ಇದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೇಸಿಗೆಯಲ್ಲಿ ಉದ್ಯಾನವನಗಳನ್ನು ಹಸಿರಾಗಿಡಲು ಸಂಸ್ಕರಿಸಿದ ನೀರುಣಿಸಲು ಮುಂದಾದ ಬಿಬಿಎಂಪಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕುಡಿಯಲು ನೀರಿಲ್ಲದೇ ಜನ ಪರಡಾಡುವಂತಾಗಿದೆ. ಜತೆಗೆ, ಮರಗಿಡಗಳು...

ಉಡುಪಿ | ಮನೆಯಲ್ಲಿ ಒಂಟಿಯಾಗಿದ್ದ ಯುವಕನನ್ನು ಗುಂಡಿಟ್ಟು ಕೊಂದ ದುಷ್ಕರ್ಮಿಗಳು

ಮನೆಯಲ್ಲಿ ಒಂಟಿಯಾಗಿದ್ದ ಯುವಕನನ್ನು ಪಿಸ್ತೂಲಿನಿಂದ ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಉಡುಪಿ ಜಿಲ್ಲೆಯ...

ʼಈದಿನ.ಕಾಮ್ʼ ನ್ಯೂಸ್ ಬೀದರ್ ಸಹಾಯವಾಣಿ ಬಿಡುಗಡೆಗೊಳಿಸಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

ಕಲುಷಿತವಾದ ವಾತಾವರಣದಲ್ಲಿ ಸಮಾಜದ ಉನ್ನತಿಗಾಗಿ ವಸ್ತುನಿಷ್ಠ, ಪ್ರಾಮಾಣಿಕತೆ, ದಕ್ಷತೆ ಹಾಗೂ ನಿರ್ಭಡೆಯಿಂದ...

ದಾವಣಗೆರೆ | ನಾಲೆಯ ಕೊನೆ ಭಾಗಕ್ಕೆ ನೀರು ಹರಿದಿಲ್ಲ; ಸಚಿವರು ರೈತರ ಹಿತ ಕಾಯುತ್ತಿಲ್ಲ: ಶಾಸಕ ಹರೀಶ್

ದಾವಣಗೆರೆ ಜಿಲ್ಲೆಯ ರೈತರಿಗೆ ಭದ್ರಾ ಜಲಾಶಯದಿಂದ ಸಮರ್ಪಕವಾಗಿ ನೀರು ಹರಿಸುವಲ್ಲಿ ಜಿಲ್ಲಾ...