ಕೋಲಾರ | ಕಾರ್ಮಿಕ ಸಂಹಿತೆ ನಿಯಮಗಳ ಜಾರಿ ಮಾಡದಿರಲು ಸಿಐಟಿಯು ಒತ್ತಾಯ

Date:

ಕೇಂದ್ರ ಸರ್ಕಾರ ಪ್ರಕಟಿಸಿದ್ದ 4 ಕಾರ್ಮಿಕ ಸಂಹಿತೆಗಳ ಕರಡು ನಿಯಮಾವಳಿಗಳಿಗೆ ಕಾರ್ಮಿಕ ಸಂಘಟನೆಗಳು ಸಲ್ಲಿಸಿದ ಆಕ್ಷೇಪಣೆಗಳನ್ನು ಪರಿಗಣಿಸದೆ, ಅಂತಿಮ ನಿಯಮಾವಳಿಗಳನ್ನು ಪ್ರಕಟಿಸಿ ನಾಲ್ಕು ಸಂಹಿತೆಗಳನ್ನು ಅನುಷ್ಠಾನಕ್ಕೆ ತರಲಾಗಿರುವುದನ್ನು ಕೂಡಲೇ ವಾಪಸು ಪಡೆಯಬೇಕೆಂದು ಸಿಐಟಿಯು ನೇತೃತ್ವದಲ್ಲಿ ನಗರದ ಮೆಕ್ಕೆ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು

- Advertisement -

ಸಿಐಟಿಯು ರಾಜ್ಯ ಉಪಾಧ್ಯಕ್ಷ ಬಿ.ಎನ್ ಮಂಜುನಾಥ್ ಮಾತನಾಡಿ ನಾಲ್ಕು ಕಾರ್ಮಿಕ ಸಂಹಿತೆಗಳಿಗೆ ನಿಯಮಾವಳಿಗಳನ್ನು ರೂಪಿಸಲು ರಾಜ್ಯ ಸರ್ಕಾರಗಳ ಮೇಲೆ ಒತ್ತಡ ಹೇರಲಾಗುತ್ತಿತ್ತು. ಈ ಸಂಹಿತೆಗಳಿಗೆ ಕೇಂದ್ರ ಸರ್ಕಾರವು ನಿಯಮಾವಳಿಗಳನ್ನು ಅಂತಿಮ ಪ್ರಕಟನೆ ಮಾಡದಿದ್ದ ಕಾರಣ ಈ ಸಂಹಿತೆಗಳು ಜಾರಿಗೆ ಬರಲಿಲ್ಲ. ಈಗ ಐದು ರಾಜ್ಯಗಳ ಚುನಾವಣೆಗಳ ಫಲಿತಾಂಶ ಪ್ರಕಟವಾಗಿದೆ. ಅಸ್ಸಾಂ ಹಾಗು ಪಶ್ಚಿಮ ಬಂಗಾಳದಲ್ಲಿನ ಗೆಲುವು ನೀಡಿರುವ ಅಹಂಕಾರದೊಂದಿಗೆ ಈ ಕಪಟ ಹಾಗು ವಂಚನೆಯನ್ನು ಕೇಂದ್ರ ಸರ್ಕಾರ ದೇಶದ ಕಾರ್ಮಿಕ ವರ್ಗದ ವಿರುದ್ಧ ಮಾಡಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಸಿಐಟಿಯು ಜಿಲ್ಲಾ ಅಧ್ಯಕ್ಷ ಪಿ.ಶ್ರೀನಿವಾಸ್ ಮಾತನಾಡಿ 2019ರಲ್ಲಿ ವೇತನ ಸಂಹಿತೆ, 2020ರಲ್ಲಿ ಕೈಗಾರಿಕಾ ಸಂಬಂಧ ಸಂಹಿತೆ, ಸಾಮಾಜಿಕ ಭದ್ರತಾ ಸಂಹಿತೆ, ಮತ್ತು ವೃತ್ತಿ ಸುರಕ್ಷತೆ, ಆರೋಗ್ಯ ಮತ್ತು ಕಾರ್ಯ ಸ್ಥಿತಿಗತಿ ಸಂಹಿತೆಗಳನ್ನು ಲೋಕಸಭೆಯಲ್ಲಿ ಯಾವುದೇ ಚರ್ಚೆ ನಡೆಸದೇ ಏಕಪಕ್ಷೀಯವಾಗಿ ಅನುಮೋದನೆಗೊಂಡಿತು. ಈ ಸಂದರ್ಭದಲ್ಲಿ ದೇಶದ ಕಾರ್ಮಿಕ ವರ್ಗವು ನಿರಂತರವಾಗಿ ಪ್ರತಿರೋಧವನ್ನು ವ್ಯಕ್ತಪಡಿಸುತ್ತಿದ್ದರು. ದೇಶದ ದುಡಿಯುವ ಜನರ ಅಭಿಪ್ರಾಯಗಳನ್ನು ತಿರಸ್ಕರಿಸಿ, ವಿದೇಶಿ ಹಾಗು ಸ್ವದೇಶಿ ಕಾರ್ಪೊರೇಟ್ ಬಂಡವಾಳಿಗರ ಅನುಕೂಲಕ್ಕಾಗಿ ಈ ನಾಲ್ಕು ಸಂಹಿತೆಗಳನ್ನು ಜಾರಿಗೆ ತರಲಾಗಿದೆ ಎಂದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯಕೃಷ್ಣ ಮಾತನಾಡಿ ಹಲವಾರು ದಶಕಗಳಿಂದ ಸಮರಧೀರ ಹೋರಾಟಗಳ ಮೂಲಕ ಗಳಿಸಲಾದ ಕಾರ್ಮಿಕರ ಮೂಲಭೂತ ಹಕ್ಕುಗಳನ್ನು ಹಾಗು ಸವಲತ್ತುಗಳನ್ನು ನಾಶ ಮಾಡುವ ಕ್ರಮವಾಗಿದೆ. ಬಂಡವಾಳಿಗರು ಮಾಡುತ್ತಿದ್ದ ಎಲ್ಲಾ ಕಾನೂನು ಉಲ್ಲಂಘನೆಗಳನ್ನು ಕಾನೂನು ಬದ್ಧಗೊಳಿಸುವುದಲ್ಲದೆ, ಖಾಯಂ ಉದ್ಯೋಗದ ಅವಕಾಶಗಳೇ ಭಾರತೀಯ ಯುವ ಪೀಳಿಗೆಗಳಿಗೆ ಇಲ್ಲದಂತೆ ಮಾಡುವ ಕ್ರಮವಾಗಿದೆ. ನವ ಗುಲಾಮಗಿರಿಗೆ ಹಾಲಿ ಹಾಗು ಭಾವಿ ಕಾರ್ಮಿರನ್ನು ಒಳಪಡಿಸುವ ಕುತಂತ್ರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಐಟಿಯು ಜಿಲ್ಲಾ ಖಜಾಂಚಿ ಹೆಚ್.ಬಿ ಕೃಷ್ಣಪ್ಪ ಮಾತನಾಡಿ ಸಂಘಟನೆಯು ಈ ಸಂಹಿತೆಗಳನ್ನು ಕಾರ್ಮಿಕರ ಜೀವನ ಮತ್ತು ಜೀವನೋಪಾಯಗಳ ಮೇಲಿನ ನರಮೇಧದ ದಾಳಿಗಳೆಂದು ಪರಿಗಣಿಸುತ್ತವೆ”. ಈ ಸಂಹಿತೆಗಳು ಕಾರ್ಮಿಕರ ಮೇಲೆ ಗುಲಾಮಗಿರಿಯನ್ನು ಹೇರುವುದು ಮಾತ್ರವಲ್ಲದೇ, ಕಾರ್ಮಿಕರ ಪ್ರತಿಯೊಂದು ಹಕ್ಕು ಹಾಗು ಪ್ರತಿಭಟಿಸುವ ಅವಕಾಶಗಳನ್ನು ಕಸಿದುಕೊಳ್ಳುತ್ತವೆ. ನಮ್ಮ ದೇಶದ ಮುಂದಿನ ತಲೆಮಾರುಗಳ ಸಮಸ್ತ ಭರವಸೆ, ನಂಬಿಕೆ ಮತ್ತು ಆಕಾಂಕ್ಷೆಗಳನ್ನು ನಂದಿಸಿಬಿಡುತ್ತವೆ” ಎಂದು ಟೀಕಿಸುತ್ತದೆ. ಆದ್ದರಿಂದ ಕಾರ್ಮಿಕ ಸಂಹಿತೆಗಳನ್ನು ಜಾರಿ ಮಾಡುವುದನ್ನು ವಾಪಸು ಪಡೆಯಬೇಕೆಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ..? ಜಿಲ್ಲಾ ಕಾಂಗ್ರೆಸ್ ವತಿಯಿಂದ ಸಚಿವ ಡಿ.ಸುಧಾಕರ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾ ಉಪಾಧ್ಯಕ್ಷರಾದ ಗಾಂಧಿನಗರ ನಾರಾಯಣಸ್ವಾಮಿ, ಎ.ಆರ್.ಬಾಬು, ಕಾರ್ಯದರ್ಶಿಗಳಾದ ಎಂ.ಭೀಮರಾಜ್, ವೀರಭದ್ರ, ಶಿವಾನಂದ್, ಕಲ್ಪನಾ, ಅಮರನಾರಾಯಣ, ಕೇಶವರಾವ್, ವಿ.ಮಂಜುಳ, ಲೋಕೇಶ್ವರಿ, ರಾಜಮ್ಮ, ಶಿವರಾಜ್ ಮತ್ತಿತರರು ಭಾಗವಹಿಸಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...