ವಿಧಾನಸೌಧದಲ್ಲಿ ಕೋಲಾರ ಜಿಲ್ಲೆಯ ಉಸ್ತುವಾರಿ ಸಚಿವರು ಆಡಳಿತ ಪಕ್ಷದ ಶಾಸಕರುಗಳ ಜತೆ ಸಭೆ ನಡೆಸಿ, ಶಾಸಕರ ಅಹವಾಲು ಆಲಿಸಿ, ಗ್ಯಾರೆಂಟಿ ಯೋಜನೆಗಳು, ಬಜೆಟ್ ಘೋಷಣೆಗಳು ಸೇರಿದಂತೆ ಸರ್ಕಾರದ ಕಾರ್ಯಕ್ರಮಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮನೆಮನೆಗೆ ತಲುಪಿಸುವ ನಿಟ್ಟಿನಲ್ಲಿ ಸಲಹೆ, ಸೂಚನೆಗಳನ್ನು ಸಿಎಂ ಸಿದ್ದರಾಮಯ್ಯ ನೀಡಿದರು.
ಕೋಲಾರ ಜಿಲ್ಲೆಯ ಅಭಿವೃದ್ಧಿ ಕುರಿತು ನಾಲ್ಕು ಜನ ಕಾಂಗ್ರೆಸ್ ಶಾಸಕರ ಜೊತೆ ಸಿಎಂ ಸಿದ್ದರಾಮಯ್ಯ ಮಾಹಿತಿ ಪಡೆದುಕೊಂಡಿದ್ದಾರೆ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಸಹಕಾರ ನೀಡುತ್ತೇನೆಂದು ಹೇಳಿರುವುದಾಗಿ ಮಾಹಿತಿ ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ಕೊಪ್ಪಳ | ವಸತಿ ನಿಲಯಗಳ ಹೊರಗುತ್ತಿಗೆ ಸಿಬ್ಬಂದಿ ಬೇಡಿಕೆ ಈಡೇರಿಸುವಂತೆ ಸಾಮೂಹಿಕ ಪ್ರತಿಭಟನೆ
ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕೋಲಾರ ಶಾಸಕ ಕೋತ್ತೂರ್ ಮಂಜುನಾಥ್, ಬಂಗಾರಪೇಟೆ ಶಾಸಕ ಎಸ್ ಎನ್ ನಾರಾಯಣಸ್ವಾಮಿ, ಮಾಲೂರು ಶಾಸಕ ನಂಜೇಗೌಡ, ಕೆಜಿಎಫ್ ಶಾಸಕಿ ರೂಪಾ ಶಶೀಧರ್ ಇದ್ದರು.