ಕೋಲಾರ | ಜು.18 ಜಿಲ್ಲೆಗೆ ಸಿಎಂ ಭೇಟಿ, ಮನವಿ ಸಲ್ಲಿಸಲು ಅವಕಾಶ ಕೋರಿ ಎಸ್ಪಿಗೆ ಭೂ ಸಂತ್ರಸ್ತರಿಂದ ಮನವಿ

Date:

ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಜುಲೈ 18 ರಂದು ಜಿಲ್ಲೆಗೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಅಂದು ಭೂ ಸಂತ್ರಸ್ತರ ಹೋರಾಟ ಸಮಿತಿ ಹಾಗೂ ಕೆ.ಪಿ.ಆರ್.ಎಸ್ ನೇತೃತ್ವದಲ್ಲಿ ರೈತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಮನವಿ ಸಲ್ಲಿಸಲು ಅವಕಾಶ ಕಲ್ಪಿಸುವಂತೆ ಒತ್ತಾಯಿಸಿ ಎಸ್ಪಿ ಕನಿಕಾ ಸಿಕ್ರಿವಾಲ್ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.

- Advertisement -

ಈ ಸಂದರ್ಭದಲ್ಲಿ ಮಾತನಾಡಿದ ಭೂ ಸಂತ್ರಸ್ತರ ಹೋರಾಟ ಸಮಿತಿಯ ಜಿಲ್ಲಾ ಸಂಚಾಲಕ ಆರ್ ಶ್ರೀನಿವಾಸನ್ ಮಾತನಾಡಿ ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಅನಾವಶ್ಯಕವಾಗಿ ರೈತರಿಗೆ ತೊಂದರೆ ನೀಡಿದ್ದಾರೆ ಕಂದಾಯ ಇಲಾಖೆಯ ದಾಖಲೆಗಳನ್ನು ಸರಿಯಾಗಿ ಗಮನಿಸದೆ ಅರಣ್ಯ ಕಾಯ್ದೆಗಳನ್ನು ಪಾಲಿಸದೆ ಸರ್ಕಾರದ ಆದೇಶಗಳನ್ನು ಗಾಳಿಗೆ ತೂರಿ ಜನಪ್ರತಿನಿಧಿಗಳ ಮಾತಿಗೂ ಬೆಲೆ ಕೊಡದೆ ಕಾನೂನು ಬಾಹಿರವಾಗಿ ಅಧಿಕಾರ ದುರುಪಯೋಗ ಪಡಿಸಿಕೊಂಡು ಮೈಸೂರು ಮಹಾರಾಜರು 1920 ರಲ್ಲಿ ನೀಡಿದಂತಹ ಭೂಮಿಗಳನ್ನು ಅರಣ್ಯ ಒತ್ತುವರಿ ಹೆಸರಿನಲ್ಲಿ ಬಡ ರೈತರ ಭೂಮಿಯಲ್ಲಿನ ಬೆಳೆಗಳನ್ನು ನಾಶ ಮಾಡಿ ರೈತರನ್ನು ಬೀದಿಗೆ ತಳ್ಳಿದ್ದಾರೆ ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ..?ಕೋಲಾರ | ಬಾಲಕಿಯರ ಹಾಸ್ಟೆಲ್‌ಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ದಿಢೀರ್ ಭೇಟಿ, ವ್ಯವಸ್ಥೆ ಪರಿಶೀಲನೆ – ಈ ದಿನ.ಕಾಮ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ರೈತರ ಸಮಸ್ಯೆಗಳ ಜೊತೆಗೆ ಅರಣ್ಯ ಇಲಾಖೆಯಿಂದ ರೈತರಿಗೆ ಆದ ನಷ್ಟದ ಬಗ್ಗೆ ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ಮನವಿ ನೀಡಲು ಅವಕಾಶ ನೀಡುವಂತೆ ಮನವಿ ಮಾಡಿದರು. ಮನವಿ ಸ್ವೀಕರಿಸಿ ಮಾತನಾಡಿದ ಎಸ್ಪಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಭೇಟಿಗೆ ಅವಕಾಶ ನೀಡುವುದಾಗಿ ಭರವಸೆ ನೀಡಿದರು. ನಿಯೋಗದಲ್ಲಿ ಭೂ ಸಂತ್ರಸ್ತರ ಹೋರಾಟ ಸಮಿತಿಯ ಜಿಲ್ಲಾ ಸಂಚಾಲಕ ಸಿಪಿಎಂ ಗೋಪಾಲ್, ಹರಟಿ ಪ್ರಕಾಶ್, ಡಾ ಗೋವಿಂದಪ್ಪ, ಶೇಕ್ ಕಮರ್, ಲೋಕೇಶ್, ಮಂಜುನಾಥ್, ಅಬ್ದುಲ್ ಅಜೀಜ್, ಮುನ್ನವರ್ ಬೇಗ್, ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...