ಕೋಲಾರ ಕಾಂಗ್ರೆಸ್ ಗಲಾಟೆ | ಕೆಪಿಸಿಸಿ ಅಧ್ಯಕ್ಷರಿಗೆ ಮಾಹಿತಿ ನೀಡುವೆ : ಸಚಿವ ಕೆ ಎಚ್ ಮುನಿಯಪ್ಪ

Date:

“ಕೋಲಾರ ಕಾಂಗ್ರೆಸ್ ಗಲಾಟೆ ವಿಚಾರದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಮಾಹಿತಿ ನೀಡುತ್ತೇನೆ” ಎಂದು ಸಚಿವ ಕೆ ಎಚ್ ಮುನಿಯಪ್ಪ ತಿಳಿಸಿದ್ದಾರೆ.

- Advertisement -

ಕೆಎಚ್ ಮುನಿಯಪ್ಪ ಬಣ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣದ ಮುಖಂಡರ ನಡುವೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಲಕ್ಷ್ಮಿನಾರಾಯಣ್ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣದ ಮುಖಂಡರು ಕೋಲಾರ ನಗರ ಹೊರವಲಯದ ನಂದಿನಿ ಪ್ಯಾಲೇಸ್‌ನಲ್ಲಿ ಸಭೆಯನ್ನು ನಡೆಸುತ್ತಿದ್ದ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ಗದ್ದಲ ಶುರುವಾಗಿ ಪರಸ್ಪರ ಕೈಕೈ ಮಿಲಾಯಿಸಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೈವಾರ ಕ಼್ಷೇತ್ರಕ್ಕೆ ಭೇಟಿ ನೀಡಿದ ವೇಳೆ ಪ್ರತಿಕ್ರಿಯಿಸಿರುವ ಸಚಿವ ಕೆಚ್ ಮುನಿಯಪ್ಪ, “ಇದು ನಡೆಯಬಾರದಿತ್ತು, ತೀವ್ರವಾಗಿ ಖಂಡಿಸುತ್ತೇನೆ. ಈ ಘಟನೆಯ ಹಿಂದೆ ಯಾರು ಇದ್ದಾರೆ ಎಂಬುವುದು ನನಗೆ ಗೊತ್ತಿದೆ. ಈ ಕುರಿತು ನಾನು ಕಾಂಗ್ರೆಸ್ ಪ್ರದೇಶ ಸಮಿತಿಗೆ ದೂರು ನೀಡುತ್ತೇನೆ” ಎಂದು ತಿಳಿಸಿದ್ದಾರೆ.

“ಚಿಕ್ಕ ವಿಷಯಗಳನ್ನು ದೊಡ್ಡದಾಗಿ ಮಾಡಿಕೊಳ್ಳಬಾರದಾಗಿತ್ತು.ಒ ಬ್ಬ ಅಧ್ಯಕ್ಷರ ಮೇಲೆ ಈ ರೀತಿ ಮಾಡಿರುವುದು ಖಂಡನೀಯ. ಅಧ್ಯಕ್ಷರಿಗೆ ಅಪಮಾನ ಮಾಡಿರುವುದು ಕಾಂಗ್ರೆಸ್ ಪ್ರದೇಶ ಸಮಿತಿಗೆ ಅಪಮಾನ ಮಾಡಿದಂತಾಗುತ್ತದೆ. ನಿಜವಾದ ಕಾಂಗ್ರೆಸ್‌ನವರು ಆಗಿದ್ದಿದ್ದರೆ ಈ ರೀತಿಯಲ್ಲಿ ಮಾಡುತ್ತಿರಲಿಲ್ಲ. ಈ ಘಟನೆಯಿಂದ ನನಗೆ ಸಾಕಷ್ಟು ನೋವಾಗಿದೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಕೋಲಾರ ಜಿಲ್ಲಾ ಕಾಂಗ್ರೆಸ್‌ ಸಭೆಯಲ್ಲಿ ಗಲಾಟೆ, ಕೈ ಕೈ ಮಿಲಾಯಿಸಿದ ಮುಖಂಡರು

“ಇನ್ನೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಮೇಲೆ ಈ ರೀತಿ ಮಾಡಿರುವುದು ರಾಜ್ಯದ ಗಮನ ಸೆಳೆದಿದೆ. ಈ ರೀತಿ ಮಾಡಿರುವುದು ಇದಕ್ಕೆ ಪ್ರೋತ್ಸಾಹ ಮಾಡಿರುವುದು ಸರಿಯಲ್ಲ. ದೊಡ್ಡ ಪಕ್ಷದಲ್ಲಿ ಭಿನ್ನಾಭಿಪ್ರಾಯ ಬರುವುದು ಸಹಜ. ಅದನ್ನು ಕುಳಿತು ಬಗೆಹರಿಸಿಕೊಳ್ಳಬೇಕು. ಆದರೆ ಈ ಮಟ್ಕ್ಕೆ ಅಧ್ಯಕ್ಷರ ಮೇಲೆ ಕೈ ಮಾಡಿದಿರುವುದು ಖಂಡನೀಯ. ಇದರಲ್ಲಿ ಯಾರ ಪಾತ್ರ ಇದೆ ಎಂಬುದು ನನಗೆ ಗೊತ್ತಿದೆ. ಅವರ ಮೇಲೆ ಕ್ರಮ ಕೈಗೊಳ್ಳುವ ಬಗ್ಗೆ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರ ಗಮನಕ್ಕೆ ಮುಟ್ಟಿಸುತ್ತೇನೆ” ಎಂದು ಸಚಿವ ಕೆ ಎಚ್ ಮುನಿಯಪ್ಪ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ವಿವಿಯಿಂದ ವರುಣ್‌ರಾಜ್ ಜಿ ಅವರಿಗೆ ಪಿಎಚ್‌.ಡಿ. ಪದವಿ ಪ್ರದಾನ

ತುಮಕೂರು ವಿಶ್ವವಿದ್ಯಾನಿಲಯದ ಡಾ. ಡಿ.ವಿ. ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ...

ಉಡುಪಿ | ಶ್ರೀ ದುರ್ಗಾಂಬ ಬಸ್ ಕಳವು ಪ್ರಕರಣ: ಬಸ್ ಪತ್ತೆ

ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ನಿಲ್ಲಿಸಿದ್ದ ಸುಮಾರು ₹40 ಲಕ್ಷ ಮೌಲ್ಯದ...

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...