ಕೋಲಾರ | ₹ 10 ಕೋಟಿ ವೆಚ್ಚದಲ್ಲಿ ಎರಡು ಸೇತುವೆ ನಿರ್ಮಾಣ: ಕೊತ್ತೂರು ಮಂಜುನಾಥ್‌

Date:

ಕೋಲಾರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ₹ 10 ಕೋಟಿ ವೆಚ್ಚದಲ್ಲಿ ಎರಡು ಕಡೆ ಸೇತುವೆ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್‌ ತಿಳಿಸಿದರು.

- Advertisement -

ನಗರದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲ್ಲೂಕಿನ ಕ್ಯಾಲನೂರು ಸಮೀಪ ₹ 6 ಕೋಟಿ ವೆಚ್ಚದಲ್ಲಿ ಹೊಸ ಸೇತುವೆ ಹಾಗೂ ಛತ್ರಕೋಡಹಳ್ಳಿ ಬಳಿ ₹ 4 ಕೋಟಿ ವೆಚ್ಚದಲ್ಲಿ ಹೊಸ ಸೇತುವೆ ನಿರ್ಮಿಸಲು ಒಪ್ಪಿಗೆ ಲಭಿಸಿದೆ. ಅನುದಾನ ಬಿಡುಗಡೆಗೂ ಅನುಮೋದನೆ ಲಭಿಸಿದೆ. ಕ್ಷೇತ್ರದಲ್ಲಿ ಒಂದಲ್ಲ ಒಂದು ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಸಿಗುತ್ತಲೇ ಇದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಲೋಕೋಪಯೋಗಿ ಇಲಾಖೆಯಿಂದ ಕಾಮಗಾರಿಗಳ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವ ಪ್ರಕ್ರಿಯೆ ಶುರುವಾಗಿದ್ದು, ಶೀಘ್ರದಲ್ಲಿ ಟೆಂಡರ್‌ ಪ್ರಕ್ರಿಯೆ ನಡೆಸಿ ಕಾಮಗಾರಿ ಆರಂಭಿಸಲಾಗುವುದು. ಇಲ್ಲಿ ಅಧಿಕಾರಿಗಳ ಮಟ್ಟದಲ್ಲಿ ಕೆಲಸ ಆಗುವುದಿಲ್ಲ. ವಿಧಾನಸೌಧ ಸುತ್ತಾಡಿ ಕ್ಷೇತ್ರಕ್ಕೆ ಕಾಮಗಾರಿ ಮಾಡಿಸಿಕೊಂಡು ಬಂದಿದ್ದೇನೆ. ಅಭಿವೃದ್ಧಿಗೆ ಅನುದಾನ ಕೇಳಿದಾಗ ಯಾರೂ ಇಲ್ಲ ಎನ್ನುವುದಿಲ್ಲ ಎಂದು ಹೇಳಿದರು.

ಅಧಿಕಾರಿಗಳು ಹಾಗೂ ಸಿಬ್ಬಂದಿ ನಮ್ಮ ವೇಗಕ್ಕೆ ಸ್ಪಂದಿಸುತ್ತಿಲ್ಲ. ಜೊತೆಗೆ ಹಲವಾರು ಇಲಾಖೆಗಳಲ್ಲಿ ಸಿಬ್ಬಂದಿ ಕೊರತೆಯೂ ಇದೆ. ಸರಿಯಾಗಿ ಕೆಲಸ ಮಾಡದ ಸಿಬ್ಬಂದಿಯನ್ನು ಅಮಾನತು ಮಾಡಬಹುದು. ಆದರೆ, ಸಿಬ್ಬಂದಿ ಕೊರತೆ ಕಾರಣ ಮತ್ತಷ್ಟು ಸಮಸ್ಯೆ ಉಂಟಾಗುತ್ತದೆ, ಕೆಲಸಗಳು ವಿಳಂಬವಾಗುತ್ತವೆ. ಉಳಿದ ಕ್ಷೇತ್ರಗಳಿಗೆ ಹೋಲಿಸಿದರೆ ಕೋಲಾರ ಕ್ಷೇತ್ರ ಪರವಾಗಿಲ್ಲ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ..? ಮರೀಚಿಕೆಯಾಗುತ್ತಿರುವ ಕಾನೂನುಗಳು, ನಿಲ್ಲದ ಕಾರ್ಮಿಕ ಶೋಷಣೆ : ಹೊನ್ನೇನಹಳ್ಳಿ ಯಲ್ಲಪ್ಪ

ಈಗ ಒಳಮೀಸಲಾತಿ ವಿಂಗಡಣೆ ನಡೆದಿದ್ದು, ಸದ್ಯದಲ್ಲೇ 56 ಸಾವಿರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಆಗ ಕೋಲಾರದಲ್ಲಿಯೂ ಸಿಬ್ಬಂದಿ ಕೊರತೆಗೆ ಮುಕ್ತಿ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...