ಕೋಲಾರ ಡಿಸಿಸಿ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಜಾಲಹಳ್ಳಿ ಗೋವಿಂದೇಗೌಡ ಅವರ ಮನೆ, ಕಚೇರಿಗಳ ಮೇಲೆ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶೋಧ ಕಾರ್ಯ ನಡೆಸಿದ್ದಾರೆ.
ಕೋಲಾರ ಡಿಸಿಸಿ ಬ್ಯಾಂಕ್‌ನ ಕೇಂದ್ರ ಕಚೇರಿ ಮತ್ತು ಚಿಂತಾಮಣಿಯಲ್ಲಿ ಡಿಸಿಸಿ ಬ್ಯಾಂಕ್ ಶಾಖೆ ಹಾಗೂ ಗೋವಿಂದೇಗೌಡ ಅವರ ಮನೆ, ನಿವಾಸಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಗೋವಿಂದೇಗೌಡ ಅವರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಸಮಯದಲ್ಲಿ ಅಸ್ತಿತ್ವದಲ್ಲಿಲ್ಲದ ಸ್ತ್ರೀಶಕ್ತಿ ಸಂಘಗಳು ಹಾಗೂ ನಕಲಿ ಸ್ತ್ರೀಶಕ್ತಿ ಸಂಘಗಳನ್ನು ಸೃಷ್ಟಿಸಿ ಅವುಗಳಿಗೆ ಸಾಲ ಮಂಜೂರು ಮಾಡಿ, ಕೋಟ್ಯಂತರ ರೂ. ಹಣ ಲೂಟಿ ಮಾಡಿದ್ದಾರೆ. ಪ್ರಾಥಮಿಕ ಸಹಕಾರ ಸಂಘದಲ್ಲಿಯೂ ಸಾಲ ನೀಡುವ ಹೆಸರಿನಲ್ಲಿ ಲೂಟಿ ನಡೆದಿದೆ. ರೈತರ ಸಾಲ ಮನ್ನಾ ಹೆಸರಿನಲ್ಲಿಯೂ ಸುಮಾರು 10 ಕೋಟಿ ರೂ. ವಂಚಿಸಿದ್ದಾರೆ ಎಂಬ ಆರೋಪಗಳಿವೆ.
ಇದೇ ಆರೋಪಗಳ ಮೇಲೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಿಸಿಕೊಂಡ ಪೊಲೀಸರು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಿಂದ ಪೂವಾರ್ನುಮತಿ ಪಡೆದು, ದಾಳಿ ನಡೆಸಿದ್ದಾರೆ.
ಮನೆ ಮತ್ತು ನಿವಾಸಗಳ ಮೇಲೆ ದಾಳಿ ಅಂತ ಬರೆದಿದ್ದೀರಿ ಅವೆರಡರ ಅರ್ಥ ಬೇರೆ ಬೇರೆ ನಾ