ಕೋಲಾರ | ವೆರ್ಗಾ ಕಂಪೆನಿ ಮುಚ್ಚದಂತೆ ಸಿಪಿಐಎಂ ಪ್ರತಿಭಟನೆ

Date:

Advertisements

ಕೋಲಾರ ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದಲ್ಲಿರುವ ವೆರ್ಗಾ ಅಟಾಚ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ, ನಷ್ಟವೆಂದು ತೋರಿಸಿದ್ದು, ಅನಧಿಕೃತವಾಗಿ ಮುಚ್ಚಿರುವುದನ್ನು ತೆರವುಗೊಳಿಸಿ ಕೈಗಾರಿಕೆಯನ್ನು ಮತ್ತೆ ಪುನರಾರಂಭಿಸಬೇಕು ಎಂದು ಒತ್ತಾಯಿಸಿ ಸಿಪಿಐ(ಎಂ) ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.

ಮಾಲೂರು ನಗರದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಳಿಕ ಸಿಪಿಐಎಂ ತಾಲೂಕು ಕಾರ್ಯದರ್ಶಿ ಟಿ ಎಂ ವೆಂಕಟೇಶ್ ಮಾತನಾಡಿ, “ಸುಮಾರು 2006ರಲ್ಲಿ ಒಂದು ಸಣ್ಣ ಶೆಡ್‌ನಲ್ಲಿ ಆರಂಭವಾದ ವೆರ್ಗಾ ಕಂಪೆನಿಯು 2019ರಲ್ಲಿ ಜಿಲ್ಲೆಯಲ್ಲಿಯೇ ಅತಿಹೆಚ್ಚು ವಿದೇಶಕ್ಕೆ ರಪ್ತು ಮಾಡಿದ ಲಾಭದಾಯಕ ಕಂಪನಿ ಎಂಬ ಹೆಗ್ಗಳಿಕೆಯನ್ನು ಪಡೆದಿದೆ. ಈ ಕೈಗಾರಿಕೆಯು ಬುಲ್ಡೋಜರ್ ಬಕೆಟ್‌ಗೆ ಬೇಕಾಗುವ ಎಕ್ಸ್ ಕವೇಟರ್ ಬಕೆಟ್ಸ್, ರಿಫ್ ಮತ್ತು ಕಪ್ಲರ್ಸ್ 200ರಿಂದ 1800 ವಿವಿಧ ಸಾಮಗ್ರಿಗಳನ್ನು ತಯಾರಿ ಮಾಡಿ, ಸುಮಾರು 58 ದೇಶಗಳಿಗೆ ರಪ್ತು ಮಾಡುತ್ತಿದ್ದು, ಲಾಭದಾಯಕವಾಗಿ ನಡೆಯುತ್ತಿರುವ ಕೈಗಾರಿಕೆಯಾಗಿದೆ. ಈ ಕೈಗಾರಿಕೆಯಿಂದ ಬಂದ ಲಾಭದಿಂದ 2018-19ರಲ್ಲಿ ವೆರ್ಗಾ 2, ವೆರ್ಗಾ 3ನೇ ಘಟಕಗಳನ್ನು ಮಾಲೂರು ಕೈಗಾರಿಕಾ ಪ್ರದೇಶದ 2ನೇ ಹಂತದಲ್ಲಿ ಆರಂಭಿಸಿದ್ದರು. 2023ರಲ್ಲಿ ವೆರ್ಗಾ 2 ಮತ್ತು ವೆರ್ಗಾ 3 ಘಟಕದ ಹೆಸರುಗಳನ್ನು ವೀರ್ಯ 1 ಮತ್ತು ವೀರ್ಯ 2 ಎಂದು ಹೆಸರು ಬದಲಾವಣೆ ಮಾಡಿದರು. ವೆರ್ಗಾ 1 ಘಟಕದಲ್ಲಿ 2019ರ ವೇಳೆ ದುಡಿಯುತ್ತಿದ್ದ 182 ಕಾರ್ಮಿಕರಿಗೆ ಹಲವು ಆಸೆ ಆಮಿಷಗಳನ್ನು ನೀಡಿ ಹಂತಹಂತವಾಗಿ ಕಡಿಮೆ ಮಾಡಿಕೊಂಡಿದ್ದಾರೆ” ಎಂದು ಆರೋಪಿಸಿದರು.

“ವೆರ್ಗಾ ಕಂಪನಿಯಲ್ಲಿ ಪ್ರಸ್ತುತ ದುಡಿಯುತ್ತಿರುವ 81 ಖಾಯಂ ಕಾರ್ಮಿಕರನ್ನು ಮನೆಗೆ ಕಳುಹಿಸಿ ಗುತ್ತಿಗೆ ಕಾರ್ಮಿಕರಿಗೆ ಕಡಿಮೆ ವೇತನವನ್ನು ನೀಡಿ ಕೆಲಸ ಮಾಡಿಸಿಕೊಳ್ಳುವ ದುರುದ್ದೇಶದಿಂದ ಲಾಭದಾಯಕವಾಗಿರುವ ಕೈಗಾರಿಕೆಯನ್ನು ನಷ್ಟವೆಂದು ತೋರಿಸುತ್ತಿರುವುದು ಸ್ಪಷ್ಠವಾಗಿದೆ” ಎಂದು ಆರೋಪಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಐಎಂ ಜಿಲ್ಲಾ ಸಮಿತಿ ಸದಸ್ಯ ವಿಜಯಕೃಷ್ಣ ಮಾತನಾಡಿ, “ಆಡಳಿತ ಮಂಡಳಿಯು ಸಮಸ್ಯೆಯನ್ನು ಸೌಹಾರ್ಧಯುತವಾಗಿ ಬಗೆಹರಿಸಿಕೊಳ್ಳಲು ಮುಂದಾಗದೇ ಇರುವುದು ಸರಿಯಲ್ಲ. ಕಳೆದ 10 ದಿನಗಳಿಂದ ಸರದಿ ಉಪವಾಸ ಸತ್ಯಾಗ್ರಹವನ್ನು ಅಲ್ಲಿನ ಕಾರ್ಮಿಕರು ನಡೆಸುತ್ತಿದ್ದರೂ ಜಿಲ್ಲಾಡಳಿತ ಮತ್ತು ಜಿಲ್ಲೆಯ ಜನಪ್ರತಿನಿಧಿಗಳು ಈ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನ ನಡೆಸದೇ ಇರುವುದು ಸರಿಯಲ್ಲ. ತಕ್ಷಣ ಮಧ್ಯ ಪ್ರವೇಶ ಮಾಡಿ, ಸಮಸ್ಯೆಯನ್ನು ಇತ್ಯರ್ಥ ಮಾಡಬೇಕು” ಎಂದು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಯನ್ನು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಸರ್ಕಾರಿ ನೌಕರರು ತಮ್ಮ ಹುದ್ದೆಯ ಪಾವಿತ್ರ್ಯತೆಯನ್ನು ಕಾಪಾಡಬೇಕು: ಷಡಕ್ಷರಿ

ಪ್ರತಿಭಟನೆಯ ನೇತೃತ್ವವನ್ನು ಸಿಪಿಐ(ಎಂ) ತಾಲೂಕು ಮುಖಂಡರಾದ ಎಂ ಭೀಮರಾಜ್, ಎನ್ ಎನ್ ಶ್ರೀರಾಮ್, ಎಸ್ ಆಶಾ, ವಿ ನಾರಾಯಣರೆಡ್ಡಿ, ಗಂಗಟ್ಟ ಯಲ್ಲಪ್ಪ, ಕೆ ವಿ ಮಂಜುನಾಥ್, ಚಿನ್ನಮ್ಮ, ಡಿ ಎಸ್ ವೆಂಕಟರವಣ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

Download Eedina App Android / iOS

X